
CHITRADURGA NEWS | 03 APRIL 2025
ಚಿತ್ರದುರ್ಗ: ಲೋಕಾಯುಕ್ತ ಪೊಲೀಸರ ತಂಡ ಬುಧವಾರ ದಿಢೀರನೇ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಇಡೀ ಆಸ್ಪತ್ರೆಯನ್ನು ತಲಾಶ್ ನಡೆಸಿದೆ.
ನಾಲ್ಕು ತಂಡಗಳಲ್ಲಿ ಆಗಮಿಸಿದ ಲೋಕಾಯುಕ್ತ ಪೊಲೀಸ್ ಸಿಬ್ಬಂದಿ, ಆಸ್ಪತ್ರೆಯ ಎಲ್ಲ ವಾರ್ಡ್, ಶೌಚಾಲಯ, ವೈದ್ಯಾಧಿಕಾರಿಗಳ ಕೊಠಡಿ, ಜಿಲ್ಲಾ ಶಸ್ತ್ರ ಚಿಕಿತ್ಸಕರ ಕಚೇರಿ ಸೇರಿದಂತೆ ಎಲ್ಲ ಕಡೆ ಪರಿಶೀಲನೆ ನಡೆಸಿದ್ದಾರೆ.
ವಾರ್ಡ್‍ಗಳಲ್ಲಿ ರೋಗಿಗಳ ಬಳಿಯೂ ಮಾಹಿತಿ ಪಡೆದುಕೊಂಡಿದ್ದು, ಚಿಕಿತ್ಸೆಗಾಗಿ ಹಣ ಪಡೆಯುವುದು, ಹೊರಗೆ ಔಷಧಿ ತರಲು ಚೀಟಿ ಬರೆದುಕೊಡುವುದು ಇತ್ಯಾದಿ ಮಾಹಿತಿ ಪಡೆದುಕೊಂಡಿದ್ದಾರೆ.
ಕೆಲ ವಾರ್ಡ್‍ಗಳಲ್ಲಿ ಆಸ್ಪತ್ರೆಯ ಶುಶ್ರೂಷಕಿಯರ ಬ್ಯಾಗ್ ಕೂಡಾ ಪರಿಶೀಲನೆ ನಡೆಸಿದ್ದು, ಬ್ಯಾಗಿನಲ್ಲಿ 1 ಸಾವಿರದಿಂದ 3 ಸಾವಿರದವರೆಗೆ ಹಣ ಪತ್ತೆಯಾಗಿದೆ. ಅಂತಹ ಶುಶ್ರೂಷಕಿಯರ ವಿವರಗಳನ್ನು ಲೋಕಾಯುಕ್ತರು ಕೇಳಿದ್ದಾರೆ.
ಆಸ್ಪತ್ರೆಯಲ್ಲಿ ಕ್ಯಾಶ್ ಬುಕ್ ಸರಿಯಾಗಿ ನಿರ್ವಹಣೆ ಮಾಡದಿರುವುದನ್ನು ಕಂಡು ಜಿಲ್ಲಾ ಶಸ್ತ್ರ ಚಿಕಿತ್ಸಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಲೋಕಾಯುಕ್ತರ ಪ್ರಶ್ನೆಗಳಿಗೆ ಆಸ್ಪತ್ರೆಯ ಸಿಬ್ಬಂದಿಗಳು ತಬ್ಬಿಬ್ಬಾದ ಪ್ರಸಂಗಗಳು ನಡೆದಿವೆ.
ಲೋಕಾಯುಕ್ತ ಎಸ್ಪಿ ವಾಸುದೇವರಾವ್, ಡಿವೈಎಸ್‍ಪಿ ಮೃತ್ಯಂಜಯ ಬಣಕಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
