ಮುಖ್ಯ ಸುದ್ದಿ
ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ | ಕಾಂಗ್ರೆಸ್‌ನಿಂದ ಲೋಕೇಶ್ ತಾಳಿಕಟ್ಟೆ ಉಚ್ಚಾಟನೆ
CHITRADURGA NEWS | 24 MAY 2024
ಚಿತ್ರದುರ್ಗ: ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲೂ ಪಕ್ಷಗಳಿಗೆ ಬಂಡಾಯದ ಬಿಸಿ ತಟ್ಟಿದೆ. ಮತದಾನ ದಿನಕ್ಕೆ ಇನ್ನೂ ಕೆಲ ದಿನ ಬಾಕಿ ಉಳಿದಿರುವಾಗಲೇ ಕ್ರಮಕ್ಕೆ ಮುಂದಾಗಿವೆ.
ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿರುವ ಐವರು ಮುಖಂಡರನ್ನು 6 ವರ್ಷಗಳ ಅವಧಿಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಕೆಪಿಸಿಸಿ ಉಚ್ಚಾಟಿಸಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಸ್ಪರ್ಧಿಸಿದ್ದಾರೆ. ಆದರೆ ಇವರ ವಿರುದ್ಧ ಪಕ್ಷೇತರರಾಗಿ ಕಣಕ್ಕಿಳಿದಿರುವ ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟ (ರುಪ್ಸಾ) ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹಾಗೂ ವಿನೋದ್ ಶಿವರಾಜ್ ಅವರನ್ನು ಉಚ್ಚಾಟಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ವಿದ್ಯಾರ್ಥಿನಿಲಯಕ್ಕೆ ಸಚಿವ, ಶಾಸಕರ ದಿಢೀರ್ ಭೇಟಿ | ವಾರ್ಡನ್‌ಗೆ ಕ್ಲಾಸ್
ಇವರ ಜತೆ ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಎಸ್.ಪಿ. ದಿನೇಶ್, ನೈರುತ್ಯ ಶಿಕ್ಷಕರ ಕ್ಷೇತ್ರದ ಬಿ.ಆರ್. ನಂಜೇಶ್, ಬೆಂಗಳೂರು ಪದವೀಧರ ಕ್ಷೇತ್ರದ ಫರ್ನಾಂಡಿಸ್ ಲಾರೆನ್ಸ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಉಚ್ಛಾಟಿಸಿ ಆದೇಶಿಸಿದ್ದಾರೆ.