
CHITRADURGA NEWS | 08 December 2025
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆಯ ಬಿ.ಎಲ್.ಆರ್.ವಸತಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 10ನೇ ತರಗತಿ ವಿದ್ಯಾರ್ಥಿ ಎಲ್.ಹೆಚ್.ಅಭಿ ಅವರು ಬೆಂಗಳೂರಿನಲ್ಲಿ ನಡೆದ 17 ವರ್ಷದ ವಯೋಮಿತಿಯ ರಾಜ್ಯಮಟ್ಟದ ಕ್ರೀಡಾಕೂಟ ಉದ್ದ ಜಿಗಿತ ಸ್ಪರ್ಧೆಯಲ್ಲಿ 6.81 ಮೀ. ಜಿಗಿಯುವ ಮೂಲಕ ರಾಜ್ಯಮಟ್ಟದಲ್ಲಿ ದಾಖಲೆಯೊಂದಿಗೆ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಎಬಿವಿಪಿ ಸಂಘಟಿಸಿರುವ ಭೀಮ ನಮನದ ಪೋಸ್ಟರ್ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ
ಇದೇ ಡಿಸೆಂಬರ್ 13 ರಿಂದ 18 ರವರೆಗೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಕ್ರೀಡೆಯಲ್ಲಿ ಸಾಧನೆ ತೋರಿದ ವಿದ್ಯಾರ್ಥಿ ಎಲ್.ಹೆಚ್.ಅಭಿ ಅವರಿಗೆ, ತರಳಬಾಳು ಸ್ಪೋಟ್ರ್ಸ್ ಅಕಾಡೆಮಿ ಹಾಗೂ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹೆಚ್.ವಿ.ನವೀನ್ ಅವರ ಪ್ರೋತ್ಸಾಹಕ್ಕೆ ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಗಿರಿಜಾ, ಕ್ಷೇತ್ರ ಸಮನ್ವಯಾಧಿಕಾರಿ ಸಂಪತ್ ಕುಮಾರ್ ಹಾಗೂ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಡಿ.ಸುರೇಶ್ ಅಭಿನಂದಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
