CHITRADURGA NEWS | 14 August 2026
ಚಿತ್ರದುರ್ಗ: ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದ ದೊಡ್ಡ ಸಿದ್ದವ್ವನಹಳ್ಳಿ ಹೈವೇನಲ್ಲಿ ನಡೆದಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಮೆಕ್ಕೆಜೋಳ, ರಾಗಿ ರೇಟ್
ಅಪಘಾತದಲ್ಲಿ ಬೆಂಗಳೂರು ಮೂಲದ ಕಾರು ಚಾಲಕ ಗೋಪಿ (44) ಹಾಗೂ ಪವನ್ (23) ಮೃತಪಟ್ಟಿದ್ದಾರೆ. ಲಾರಿ ಚಾಲಕನ ಅಜಾಗರೂಕತೆ ಹಾಗೂ ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಘಟನೆಯಲ್ಲಿ ಮಂಜುನಾಥ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಮಹಾತ್ಮರನ್ನು ಸ್ಮರಿಸುವುದೇ ಮುಕ್ತಿಗೆ ದಾರಿ | ಡಾ. ಬಸವಕುಮಾರ ಶ್ರೀ
ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

