CHITRADURGA NEWS | 12 MAY 2026
ಹಣ್ಣುಗಳು ಮತ್ತು ಹಸಿರು ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂಬುದು ಎಲ್ಲರಿಗೂ ತಿಳಿದೆ ಇದೆ. ಹಾಗಾಗಿ ಆರೋಗ್ಯಕರ ಜೀವನಕ್ಕಾಗಿ ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನುವುದನ್ನು ವೈದ್ಯರು ಶಿಫಾರಸು ಮಾಡುತ್ತಾರೆ. ಆದರೆ ಇತ್ತೀಚಿನ ಅಧ್ಯಯನವು ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದೆ. ಈ ಅಧ್ಯಯನದ ಪ್ರಕಾರ, ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸುವುದರಿಂದ ಕ್ಯಾನ್ಸರ್ ಉಂಟಾಗುತ್ತದೆ ಎನ್ನಲಾಗುತ್ತಿದೆ. ಅದಕ್ಕೆ ಕಾರಣವೇನು ಎಂಬುದುನ್ನು ತಿಳಿದುಕೊಳ್ಳಿ.
ಅಧ್ಯಯನದಲ್ಲಿ ತಿಳಿದುಬಂದಿದ್ದೇನು?
ಇತ್ತೀಚೆಗೆ ವಿಜ್ಞಾನಿಗಳು ನಡೆಸಿದ ಕ್ಯಾನ್ಸರ್ ರಿಸರ್ಚ್ ವಾರ್ಷಿಕ ಸಭೆಯಲ್ಲಿ ಶ್ವಾಸಕೋಶದ ಕ್ಯಾನ್ಸರ್ ಹೆಚ್ಚಾಗುತ್ತಿರುವ ಬಗ್ಗೆ ಹಾಗೂ ಧೂಮಪಾನ ಮಾಡದ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜನರ ಡೇಟಾವನ್ನು ಪರೀಕ್ಷಿಸುವಾಗ ಸಾಮಾನ್ಯ ಆಹಾರವನ್ನು ಸೇವಿಸುವ ಜನರಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿರುವುದು ಸಹ ಕಂಡುಬಂದಿದೆ.
ಇದಕ್ಕೆ ಕಾರಣವೇನು?
ಸಾಮಾನ್ಯವಾಗಿ ಹಣ್ಣು-ತರಕಾರಿಗಳಂತಹ ಆಹಾರವನ್ನು ಸೇವಿಸುವುದರಿಂದ ಕ್ಯಾನ್ಸರ್ ಬರುವುದಿಲ್ಲ, ಬದಲಾಗಿ ಅವುಗಳಲ್ಲಿರುವ ರಾಸಾಯನಿಕಗಳಿಂದ ಉಂಟಾಗಬಹುದು ಎಂದು ವಿಜ್ಞಾನಿಗಳು ಹೇಳುತ್ತಾರೆ. ಹಣ್ಣು ಮತ್ತು ತರಕಾರಿ ಕೃಷಿಯ ಸಮಯದಲ್ಲಿ ಬಳಸುವ ಕೀಟನಾಶಕಗಳು ಅವುಗಳ ಮೇಲೆ ಹಾಗೇ ಉಳಿಯುತ್ತವೆ. ಅಂತಹ ಹಣ್ಣು-ತರಕಾರಿಗಳನ್ನು ದೀರ್ಘಕಾಲದವರೆಗೆ ಸೇವಿಸುವುದರಿಂದ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಕೀಟನಾಶಕಗಳಿಗೆ ನಿರಂತರವಾಗಿ ಒಡ್ಡಿಕೊಳ್ಳುವುದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗಬಹುದು.
ಹಣ್ಣುಗಳು ಮತ್ತು ತರಕಾರಿಗಳನ್ನು ಹೇಗೆ ಸೇವಿಸಬೇಕು
ಅಂದಹಾಗೇ ಜನರು ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನುವುದನ್ನು ನಿಲ್ಲಿಸಲು ಸಾಧ್ಯವಿಲ್ಲ. ಆದರೆ ನೀವು ಅವುಗಳನ್ನು ಸ್ವಲ್ಪ ಎಚ್ಚರಿಕೆಯಿಂದ ಸೇವಿಸಬಹುದು. ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನುವ ಮೊದಲು ಚೆನ್ನಾಗಿ ತೊಳೆಯಬೇಕು. ನೀರಿಗೆ ಉಪ್ಪು ಸೇರಿಸಿ ಕನಿಷ್ಠ 30 ನಿಮಿಷಗಳ ಕಾಲ ನೆನೆಯಲು ಬಿಡಿ. ಇದು ಹಣ್ಣುಗಳು ಮತ್ತು ತರಕಾರಿಗಳಿಂದ ಯಾವುದೇ ರಾಸಾಯನಿಕಗಳನ್ನು ತೆಗೆದುಹಾಕಬಹುದು. ಆದರೆ ಅಪ್ಪಿತಪ್ಪಿಯೂ ಹಣ್ಣುಗಳು ಅಥವಾ ತರಕಾರಿಗಳನ್ನು ತೊಳೆಯದೆ ಸೇವಿಸಬೇಡಿ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
