
CHITRADURGA NEWS | 13 October 2025
ಹೊಳಲ್ಕೆರೆ: ತಾಲ್ಲೂಕಿನ ಎಂ.ಜಿ.ಕಟ್ಟೆ ಗ್ರಾಮದಲ್ಲಿ 1.89 ಕೋಟಿ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಚೆಕ್‍ಡ್ಯಾಂವನ್ನು ಶಾಸಕ ಎಂ.ಚಂದ್ರಪ್ಪ ಉದ್ಘಾಟಿಸಿ, ಬಾಗೀನ ಅರ್ಪಿಸಿದರು.

ಇದನ್ನೂ ಓದಿ: ದೆಹಲಿ ಪೊಲೀಸ್ | ನೇಮಕಾತಿಗೆ ಅರ್ಜಿ ಆಹ್ವಾನ
ಈ ವೇಳೆ ಮಾತನಾಡಿದ ಶಾಸಕರು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಎಲ್ಲಾ ರೀತಿಯ ಸಹಕಾರ ನೀಡಿ ಹುಡುಕಿ, ಹುಡುಕಿ ಅಭಿವೃದ್ದಿ ಕೆಲಸಗಳನ್ನು ಮಾಡಿಸುತ್ತಿದ್ದೇನೆ. ತೋಟಗಳು ಒಣಗಿದರೆ ರೈತರ ಮನಸ್ಸಿಗೆ ನೋವಾಗುತ್ತದೆನ್ನುವುದನ್ನು ಅರ್ಥಮಾಡಿಕೊಂಡು ಚೆಕ್‍ಡ್ಯಾಂಗಳನ್ನು ಕಟ್ಟಿಸಿದ್ದೇನೆ ಎಂದು ಹೇಳಿದರು.
ಸಣ್ಣ ಊರು ಎಂದು ಯಾವ ಗ್ರಾಮವನ್ನು ಉದಾಸೀನ ಮಾಡಿಲ್ಲ. ಎಲ್ಲಾ ಕಡೆ ಚೆಕ್‍ಡ್ಯಾಂಗಳನ್ನು ಕಟ್ಟಿಸಿ ಮಳೆ ನೀರು ವ್ಯರ್ಥವಾಗಿ ಹರಿದು ಹೋಗುವುದನ್ನು ತಡೆದ ಪರಿಣಾಮ ತುಂಬಿ ತುಳುಕುತ್ತಿವೆ. ಸಾರ್ವಜನಿಕರ ಸಂತೋಷವೆ ನನಗೆ ಆಶೀರ್ವಾದ.
ಮೂರು ಕೋಟಿ ರೂ.ವೆಚ್ಚದಲ್ಲಿ ನಂದನ ಹೊಸೂರು ಕೆರೆ ರಿಪೇರಿ ಮಾಡಿಸಿದ್ದೇನೆ. ಕೆರೆಯಾಗಳಹಳ್ಳಿ ಕೆರೆಗೆ ಒಂದು ಕೋಟಿ ರೂ.ಗಳನ್ನು ನೀಡಿದ್ದೆ. ಈಗ ಮತ್ತೊಂದು ಕೋಟಿ ರೂ. ಕೊಟ್ಟಿದ್ದೇನೆ. ವಿಧಾನಸೌಧ ಕಟ್ಟಿರುವುದು ಕೇವಲ 90 ಲಕ್ಷ ರೂ.ಗಳಲ್ಲಿ. ಮತಿಘಟ್ಟ ರಸ್ತೆಗೆ 35 ಕೋಟಿ ರೂ.ಗಳನ್ನು ಕೊಟ್ಟಿದ್ದೇನೆ.
ಇದನ್ನೂಓದಿ: ಸಾಣೇಹಳ್ಳಿ ನಾಟಕೋತ್ಸವ ಪೂರ್ವಭಾವಿ ಸಭೆ
ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತಂದು ಪ್ರತಿ ಮನೆ ಮನೆಗೂ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ 367 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇನೆ. ಇನ್ನು 50 ವರ್ಷಗಳ ಕಾಲ ನೀರಿಗೆ ಸಮಸ್ಯೆಯಿರುವುದಿಲ್ಲ. ತೇಕಲವಟ್ಟಿ ಬಳಿ 23 ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗುತ್ತಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರವೀಣ್, ಸದಸ್ಯರುಗಳಾದ ಸತೀಶ್, ಮಂಜಣ್ಣ, ಬಿಜೆಪಿ ಮುಖಂಡರಾದ ಚಂದ್ರಣ್ಣ, ಸಿದ್ದಣ್ಣ, ರಂಗಸ್ವಾಮಿ, ಸಿದ್ದಪ್ಪ, ತಿಮ್ಮಣ್ಣ, ಶ್ರೀನಿವಾಸ್, ಎಲೆರಾಜಪ್ಪ, ದಿನೇಶ್ ಹಾಗೂ ಗ್ರಾಮದ ಮುಖಂಡರುಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
