
CHITRADURGA NEWS | 27 OCTOBER 2025
ಚಿತ್ರದುರ್ಗ: ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಮದಕರಿ ನಾಯಕ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಬೇಕೆಂದು ಮಾಜಿ ಸಚಿವ ಬಿ.ಶ್ರೀರಾಮುಲು ಒತ್ತಾಯಿಸಿದರು.
ಇದನ್ನೂ ಓದಿ: ಕನ್ನಡ ಪುಸ್ತಕ ಹಬ್ಬ | ರಾಷ್ಟ್ರೋತ್ಥಾನ ಸಾಹಿತ್ಯ – ಸಂಸ್ಕೃತಿ ಉತ್ಸವ

ನಾಯಕ ಸಮಾಜದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ರಾಜವೀರ ಮದಕರಿ ನಾಯಕ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಳೆದ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಚಿತ್ರದುರ್ಗದಲ್ಲಿ ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣ ಮಾಡುವುದಾಗಿ ಕೇಂದ್ರ ಸರ್ಕಾರದ ಗೃಹಸಚಿವ ಅಮಿತ್ ಶಾ ತಿಳಿಸಿದ್ದರು.
ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿಲ್ಲ. ಹಾಗಾಗಿ ಈಗ ಕಾಂಗ್ರೇಸ್ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಿ.ಸುಧಾಕರ್ ಜಾಗ ನೀಡಿದ್ದಾರೆ. ಇದರಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲು ಸಮಾಜ ಸಹಕಾರ ನೀಡಲಿದೆ ಎಂದರು.
ಚಿತ್ರದುರ್ಗದ ಪಾಳೇಗಾರರು ಉತ್ತಮ ಆಡಳಿತಕ್ಕೆ ಹೆಸರುವಾಸಿಯಾಗಿದ್ದರು. ನೆರೆ ರಾಜ್ಯಗಳ ರಾಜರು ಚಿತ್ರದುರ್ಗದ ಮೇಲೆ ದಂಡೆತ್ತಿ ಬಂದರೂ ಅವರು ಗೆಲ್ಲಲು ಸಾಧ್ಯವಾಗಲಿಲ್ಲ ಕಾರಣ ತಮ್ಮ ಸಾಮ್ರಾಜ್ಯ ರಕ್ಷಣೆಗೆ ಭದ್ರ ಕೋಟೆ ನಿರ್ಮಾಣ ಮಾಡಲಾಗಿತ್ತು. ಎಲ್ಲ ಸಮುದಾಯಗಳ ಹಿತರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡಿದರು. ಮದಕರಿ ನಾಯಕ ಮಾಡಿರುವ ಕೆಲಸ ಸೂರ್ಯ, ಚಂದ್ರ ಇರುವವರೆಗೆ ಶಾಶ್ವತವಾಗಿರುತ್ತವೆ ಎಂದು ಹೇಳಿದರು.
ಇದನ್ನೂ ಓದಿ: ರೈತರಿಗೆ ಬೆಸ್ಕಾಂ ಮನವಿ | ವಿದ್ಯುತ್ ಸಮಸ್ಯೆ ಇದ್ದರೆ ವಾಟ್ಸಪ್ ಮಾಡಿ
ಇಂತಹ ಪ್ರಾಮಾಣಿಕ, ದಕ್ಷ ಆಡಳಿತ ನಡೆಸಿದ ಪಾಳೇಗಾರರ ವಶಸ್ಥರು ಇಂದು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಪ್ರಾಮಾಣಿಕತೆಯಿಂದ ಜೀವನ ಮಾಡಿದ ಪರಿಣಾಮ ಇಂದು ಅವರು ಬಡತನದಲ್ಲಿ ಜೀವಿಸುತ್ತಿದ್ದಾರೆ. ಹಾಗಾಗಿ ಅವರನ್ನು ಮುಂದಿನ ದಿನಗಳಲ್ಲಿ ಮುಖ್ಯವಾಹಿನಿಗೆ ತರುವ ಕೆಲಸ ಮಾಡಲಾಗುವುದು. ಮೈಸೂರಿನ ರಾಜ ವಂಶಸ್ಥರಿಗೆ ನೀಡುವಂತೆ ಮದಕರಿ ನಾಯಕ ವಂಶಸ್ಥರಿಗೂ ಗೌರವ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ನಾಯಕ ಸಮಾಜ ಸ್ವಾಭಿಮಾನಿ ಸಮಾಜ. ಪರಿಶ್ರಮದಿಂದ ಬದುವಕ ಸಮಾಜ. ಇಂತಹ ನಾಯಕ ಸಮಾಜದ ಮುಕುಟ ಮಣಿ ಮದಕರಿ ನಾಯಕರ ಹೆಸರಿನಲ್ಲಿ ಥೀಮ್ ಪಾರ್ಕ್ ನಿರ್ಮಿಸಲು ಅಗತ್ಯವಿರುವ ಜಾಗ ಕಾಯ್ದಿರಿಸಲಾಗಿದೆ.
ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಿ ಪಾರ್ಕ್ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗುವುದು. ಮದಕರಿ ನಾಯಕರು ಸಾಮಾಜಿಕವಾಗಿ ಅನೇಕ ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ. ಅವನ್ನು ಜಗತ್ತಿಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು.
ಇದನ್ನೂ ಓದಿ: ಪತ್ರಕರ್ತರ ಸಂಘದ ಚುನಾವಣೆ | 49 ನಾಮಪತ್ರ ಸಲ್ಲಿಕೆ
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, ನಾಯಕ ಸಮಾಜ ಎಲ್ಲ ರಾಜಕೀಯವನ್ನು ಬದಿಗೊತ್ತಿ ಒಂದುಗೂಡಬೇಕು. ಯಾರು ಯಾವುದೇ ರಾಜಕೀಯ ಪಕ್ಷದಲ್ಲಿದ್ದರೂ ಚಿಂತೆಯಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡಬೇಕು. ಉಳಿದಂತೆ ಸಮಾಜದ ವಿಚಾರ ಬಂದಾಗ ಭಿನ್ನಾಭಿಪ್ರಾಯ ಮರೆತು ಒಂದಾಗಬೇಕು. ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಲಾಗುವುದು. ಅದರಂತೆ ಪ್ರತಿ ವರ್ಷ ದುರ್ಗೋತ್ಸವ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಸಾನಿಧ್ಯವಹಿಸಿ ಮಾತನಾಡಿದರು.
ಮಾದಾರ ಚೆನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಇಮ್ಮಡಿ ಕೇತೇಶ್ವರ ಸ್ವಾಮೀಜಿ ಸಮ್ಮುಖ ವಹಿಸಿದ್ದರು.
ಕಾರ್ಯಕ್ರಮದ ರೂವಾರಿ ಹಾಗೂ ಉದ್ಯಮಿ ಶ್ರೀನಿವಾಸ ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ಕಲ್ಲವ್ವನಾಗತಿಹಳ್ಳಿ ತಿಪ್ಪೇಸ್ವಾಮಿ, ಕಾಂಗ್ರೇಸ್ ಮುಖಂಡ ಯೋಗೀಶ್ ಬಾಬು, ಗುಡ್ಡದೇಶ್ವರಪ್ಪ, ರತ್ನಮ್ಮ ಸೇರಿದಂತೆ ಸಮಾಝದ ಅನೇಕ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 27 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಬಳಿಕ ಕನಕ ವೃತ್ತದಿಂದ ಮದಕರಿ ನಾಯಕ ವೃತ್ತದವರೆಗೆ ಮದಕರಿ ನಾಯಕರ ಕಲಾ ಕೃತಿಯ ಮೆರವಣಿಗೆ ನಡೆಸಲಾಯಿತು. ರಾತ್ರಿ 7.30 ರಿಂದ ಮದಕರಿ ನಾಯಕ ವೃತ್ತದಲ್ಲಿ ಲೇಸರ್ ಲೈಟಿಂಗ್ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಸಂಖ್ಯೆಯ ಜನರು ಈ ಸೊಬಗನ್ನು ಕಣ್ತ್ತುಂಬಿಕೊಂಡರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
