
ಚಿತ್ರದುರ್ಗ ನ್ಯೂಸ್.ಕಾಂ: ಮಧ್ಯ ಪ್ರದೇಶದ ಸರ್ಕಾರದಿಂದ ಅಲ್ಲಿನ ನರ್ಮದಾ ನದಿ ತೀರದಲ್ಲಿ ನಿರ್ಮಿಸಿರುವ ಏಕತಾ ಧಾಮ ಹಾಗೂ 106 ಅಡಿ ಎತ್ತರದ ಶ್ರೀ ಶಂಕರಾಚಾರ್ಯರ ಮೂರ್ತಿಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಧ್ಯ ಪ್ರದೇಶ ಸರ್ಕಾರದಿಂದ ಚಿತ್ರದುರ್ಗದ ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿಗೆ ಆಹ್ವಾನ ನೀಡಲಾಗಿದೆ.
ಖುದ್ದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೇ ಮಾದಾರ ಚನ್ನಯ್ಯ ಶ್ರೀಗಳಿಗೆ ಪತ್ರ ಬರೆದು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.
ಹಿಂದೆ ಶಂಕರಾಚಾರ್ಯರು ಸಂಚಾರ ಮಾಡಿದ್ದ, ಧ್ಯಾನ ಮಾಡಿದ್ದ ಮಧ್ಯ ಪ್ರದೇಶದ ಖಾಂಡ್ವಾದಲ್ಲಿ ನರ್ಮದಾ ನದಿಗೆ ಅಭಿಮುಖವಾಗಿ ಮಾಂಧತಾ ಪರ್ವತದ ಮೇಲೆ ಮೇಲೆ ವಿಶಾಲವಾದ ಏಕತಾ ಧಾಮ ನಿರ್ಮಿಸಿ, ಅಲ್ಲಿ ಶ್ರೀ ಶಂಕರಾಚಾರ್ಯರ 106 ಅಡಿ ಎತ್ತದ ಪ್ರತಿಮೆ ಸ್ಥಾಪಿಸಲಾಗಿದೆ.
ಸೆ.18 ರಂದು ಏಕತಾ ಧಾಮದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೆ ಚಿತ್ರದುರ್ಗದ ಶ್ರೀ ಮಾದಾರ ಚನ್ನಯ್ಯ ಶ್ರೀಗಳಿಗೆ ಆಹ್ವಾನ ನೀಡಲಾಗಿದೆ.

ಇದನ್ನೂ ಓದಿ: ಸಚಿವ ಡಿ.ಸುಧಾಕರ್ ರಾಜಿನಾಮೆಗೆ ಬಿಜೆಪಿ-ಜೆಡಿಎಸ್ ಆಗ್ರಹ
ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರ್ಕಾರ 2141 ಕೋಟಿ ರೂ. ವೆಚ್ಚದಲ್ಲಿ ಅಲ್ಲಿನ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಾಣ ಮಾಡಲಾಗಿದ್ದು, ಭವಿಷ್ಯದ ದಿನಗಳಲ್ಲಿ ಪ್ರವಾಸೋದ್ಯಮಕ್ಕೆ ಈ ಸ್ಥಳ ದೊಡ್ಡ ಕೊಡುಗೆ ನೀಡಲಿದೆ ಎಂದು ಸರ್ಕಾರ ಹೇಳಿದರು.
ಇದೇ ವೇಳೆ ಅದ್ವೆöÊತ ಕೇಂದ್ರದ ಭೂಮಿ ಪೂಜೆಯೂ ನಡೆಯಲಿದ್ದು, ಈ ಎರಡೂ ಕಾರ್ಯಕ್ರಮಗಳಲ್ಲಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಭಾಗವಹಿಸಲಿದ್ದಾರೆ ಮಾದಾರ ಚನ್ನಯ್ಯ ಗುರುಪೀಠದ ವ್ಯವಸ್ಥಾಪಕ ಬಿ.ಹರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ 2014ರಲ್ಲಿ ಮಧ್ಯ ಪ್ರದೇಶದಲ್ಲಿ ನಡೆದಿದ್ದ ಮಾ ನರ್ಮದಾ ಕುಂಭಮೇಳದಲ್ಲೂ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಭಾಗವಹಿಸುವಂತೆ ಆಹ್ವಾನ ಬಂದಿತ್ತು. ಆಗಲೂ ಶ್ರೀಗಳು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
