
CHITRADURGA NEWS | 05 MARCH 2026
ಚಿತ್ರದುರ್ಗ: ಒಳ ಮೀಸಲಾತಿ ಅನ್ವಯ 56,432 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರದ ವಿರುದ್ದ ಗುರುವಾರ ಮಾದಿಗ ಸಮುದಾಯದಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಕಾಂಗ್ರೆಸ್ ಶಾಸಕರು ಮತ್ತು ಸಚಿವರುಗಳ ವಿರುದ್ದ ಧಿಕ್ಕಾರಗಳನ್ನು ಕೂಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ನಾಯಕರುಗಳ ಫೋಟೋಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿ, ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: 4ನೇ ದಿನಕ್ಕೆ ಕಾಲಿಟ್ಟ ರೈತರ ಉಪವಾಸ ಸತ್ಯಾಗ್ರಹ | ಭದ್ರೆಗೆ ಅನುದಾನಕ್ಕೆ ಬಿಗಿಪಟ್ಟು

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿದ ಪ್ರತಿಭಟನಾಕಾರರು ಏಕಾಏಕಿ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅಡ್ಡಗಟ್ಟಿ ಒಳ ನುಸುಳುವುದನ್ನು ತಡೆದರು.
ಒಳ ಮೀಸಲಾತಿಗಾಗಿ ಕಳೆದ 35 ವರ್ಷಗಳಿಂದಲೂ ಹೋರಾಟ ನಡೆಸಲಾಗುತ್ತಿದೆ. ಸುಪ್ರೀಂಕೋರ್ಟ್ ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಮಹತ್ತರ ತೀರ್ಪು ನೀಡಿದ್ದರು ರಾಜ್ಯ ಸರ್ಕಾರ ಇನ್ನು ಜಾರಿಗೊಳಿಸದೆ ಮಾದಿಗರನ್ನು ಯಾಮಾರಿಸಿಕೊಂಡು ಬರುತ್ತಿದೆ. ಹೆಚ್ಚು ಮೀಸಲಾತಿ ಸೌಲಭ್ಯಗಳನ್ನು ಪಡೆದಿರುವ ಪರಿಶಿಷ್ಟ ಜಾತಿ ಸಮುದಾಯಗಳು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರವರ ಆಶಯಗಳಿಗೆ ತದ್ವಿರುದ್ದವಾಗಿ ನಡೆದುಕೊಳ್ಳುತ್ತಿದ್ದಾರೆ.
ಎ.ಜೆ.ಸದಾಶಿವ ಆಯೋಗದ ವರದಿ, ಮಾಧುಸ್ವಾಮಿ ನೇತೃತ್ವದ ಸಂಪುಟ ಉಪ ಸಮಿತಿಯ ಶಿಫಾರಸ್ಸು ಹಾಗೂ ನಾಗಮೋಹನ್ದಾಸ್ ಆಯೋಗದ ವರದಿಗಳನ್ನು ಕೆಲ ಸಮುದಾಯಗಳು ಒಪ್ಪುತ್ತಿಲ್ಲದ ಕಾರಣ ಒಳ ಮೀಸಲಾತಿ ಜಾರಿಗೆ ಅಡ್ಡಿಯಾಗುತ್ತಿದೆ.
ಇದನ್ನೂ ಓದಿ: ನಾಳೆ ರಾಜ್ಯ ಬಜೆಟ್ | ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
ವಿಶ್ವವಿದ್ಯಾನಿಲಯಗಳಲ್ಲಿ ವಿಷಯವಾರು ನೇಮಕಾತಿ ಕೈಬಿಟ್ಟು ವಿಶ್ವವಿದ್ಯಾನಿಲಯಗಳನ್ನೇ ಒಂದು ಘಟಕವಾಗಿಸಿ ಮಾದಿಗ ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ್, ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಇವರುಗಳ ಪ್ರತಿಭಟನಾಕಾರರು ಹರಿಹಾಯ್ದರು.
ಪ್ರತಿಭಟನೆಯಲ್ಲಿ ನೇತ್ರಾನಂದ ಕೆ.ಎಸ್. ಕಿರಣ್ಕುಮಾರ್, ಜಗದೀಶ್, ಮಾರುತಿ, ಹುಲ್ಲೂರು ಕುಮಾರ್, ಕೋಟಿ ಅಳಗವಾಡಿ, ಕೆ.ಟಿ.ಶಿವಕುಮಾರ್, ಬ್ಯಾಲಾಳ್ ಜಯಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನರಸಿಂಹಮೂರ್ತಿ, ಪ್ರಸನ್ನ, ಕೆಂಚಪ್ಪ ಸೇರಿದಂತೆ ಇತರರು ಪಾಲ್ಗೊಂಡಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
