
CHITRADURGA NEWS | 04 MARCH 2026
ಚಿತ್ರದುರ್ಗ: ಒಳಮೀಸಲಾತಿ ಮಸೂದೆಗೆ ರಾಜ್ಯಪಾಲರು ಸಹಿ ಹಾಕಿದ್ದರೂ, ಸರ್ಕಾರ ಹೊಸದಾಗಿ ನೇಮಕ ಮಾಡಿಕೊಳ್ಳಲು ಉದ್ದೇಶಿಸಿರುವ ವಿವಿಧ ವೃಂದದ ಹುದ್ದೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ಒಳಮೀಸಲಾತಿ ಅನ್ವಯಿಸದೇ ಇರುವುದು ಮಾದಿಗರಿಗೆ ಮಾಡುವ ಅನ್ಯಾಯ ಎಂದು ಚಳ್ಳಕೆರೆ ಮಾದಿಗ ಸಮುದಾಯದ ಮುಖಂಡರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ತಮ್ಮ ಅಳಲನ್ನು ತೋಡಿಕೊಂಡರು.
ಇದನ್ನೂ ಓದಿ: ಅಸಿಸ್ಟೆಂಟ್ ಹುದ್ದೆ | RBI ನಿಂದ ಅರ್ಜಿ ಅಹ್ವಾನ

ಮಾರ್ಚ್ 5ರಂದು ನಡೆಯುವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತು ನಮ್ಮ ಸಮಾಜದ ಸಚಿವರಾದ ಕೆ.ಎಚ್. ಮುನಿಯಪ್ಪ ಹಾಗೂ ಆರ್.ಬಿ. ತಿಮ್ಮಾಪುರ್ ಈ ವಿಷಯದ ಕುರಿತು ದ್ವನಿ ಎತ್ತಲಿದ್ದಾರೆ. ಅದಕ್ಕೆ ನಿಮ್ಮ ಬೆಂಬಲ ಇರಬೇಕು ಎಂದು ಒತ್ತಾಯಿಸಿದರು.
ಶೋಷಿತ ಸಮುದಾಯಗಳ ಪರವಾಗಿ ನೀವು ನಿಮ್ಮ ಚಿಕ್ಕಪ್ಪ ಮಾಜಿ ಶಾಸಕ ದಿವಂಗತ ಎನ್. ಜಯಣ್ಣ ಅವರು ವಿಶೇಷವಾಗಿ ಮಾದಿಗ ಸಮುದಾಯದ ಮೇಲೆ ಪ್ರೀತಿ ಇಟ್ಟುಕೊಂಡು ಬಂದವರು. ಮಾದಿಗ ಸಮುದಾಯವೂ ಕೂಡ ನಿಮ್ಮ ರಾಜಕೀಯ ಯಶಸ್ವಿಗೆ ತುಂಬಾ ಶ್ರಮಿಸಿದೆ. ಆದ್ದರಿಂದ ನೀವು ನಮ್ಮ ಪರವಾಗಿ ದ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಸರ್ಕಾರ ಒಳಮೀಸಲಾತಿ ಜಾರಿ ಮಾಡಿದೆ. ಚುನಾವಣಾ ಪ್ರಣಾಳಿಕೆಯಂತೆ ಒಳಮೀಸಲಾತಿ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಆದ್ದರಿಂದ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವ ಡಿ. ಸುಧಾಕರ್ ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 04 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪಿ. ಪ್ರಕಾಶಮೂರ್ತಿ, ಸಂಪೂರ್ಣ ಒಳಮೀಸಲಾತಿ ಹೋರಾಟ ಸಮಿತಿಯ ಟಿ. ವಿಜಯಕುಮಾರ್, ಎನ್. ಪ್ರಕಾಶ್, ನನ್ನಿವಾಳ ನಾಗರಾಜ್, ದ್ಯಾವರನಹಳ್ಳಿ ತಿಪ್ಪೇಸ್ವಾಮಿ, ಹಳೇಟೌನ್ ವೆಂಕಟೇಶ್, ನೆಲಗೇತನಹಟ್ಟಿ ನಾಗರಾಜ್ ಇನ್ನಿತರರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
