ಲೋಕಸಮರ 2024
ಇಂದು ಮಾದಿಗ ಸಮುದಾಯ ಮುಖಂಡರ ಸಭೆ | ಕೆ. ಹೆಚ್. ಮುನಿಯಪ್ಪ ಭಾಗೀ

CHITRADURGA NEWS | 12 APRIL 2024
ಚಿತ್ರದುರ್ಗ: ನಗರದ ಎನ್.ಬಿ.ಟಿ. ಪಂಕ್ಷನ್ ಹಾಲ್ ನಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಮಾದಿಗ ಸಮುದಾಯ ಮುಖಂಡರ ಸಭೆ ನಡೆಯಲಿದೆ, ಸಭೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ವೇದ ಪಿಯು ಕಾಲೇಜು | ಅತ್ಯುತ್ತಮ ಸಾಧನೆಯ ಫಲಿತಾಂಶ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಚುನಾವಣಾ ಪ್ರಚಾರದಲ್ಲಿ ಸಕ್ರೀಯವಾಗಿ ಭಾಗವಹಿಸಿ ಜಯಶೀಲರನ್ನಾಗಿ ಮಾಡುವ ಉದ್ದೇಶದಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮಾದಿಗ ಸಮುದಾಯುದ ಮುಖಂಡರ ಸಭೆಯನ್ನು ಮಾಜಿ ಸಚಿವರಾದ ಹೆಚ್. ಆಂಜನೇಯ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ.
ಇದನ್ನೂ ಓದಿ: ಕೋಟೆನಾಡಿನಲ್ಲಿ ಶೇ.72.92 ರಷ್ಟು ವಿದ್ಯಾರ್ಥಿಗಳು ಪಾಸ್
ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಬಿ.ತಿಪ್ಪೇಸ್ವಾಮಿ ಜೆ.ಜೆ.ಹಟ್ಟಿ, ಲಿಡ್ಕರ್ ಮಾಜಿ ಅಧ್ಯಕ್ಷರಾದ ಓ.ಶಂಕರ್, ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಮುಂಡರಗಿ ನಾಗರಾಜ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಸವಿತ ರಘು ಸೇರಿದಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು ಮತ್ತು ಮಾಜಿ ಸದಸ್ಯರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರು ಮತ್ತು ಸದಸ್ಯರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಸದಸ್ಯರು ಮತ್ತು ಕೆಪಿಸಿಸಿ. ಜಿಲ್ಲಾ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಎಸ್.ಸಿ.ಘಟಕದ ಪದಾಧಿಕಾರಿಗಳು ಹಾಗೂ ಮಾದಿಗ ಸಮುದಾಯದ ಎಲ್ಲಾ ಪ್ರಮುಖ ಹೋರಾಟಗಾರರು ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ: ರಂಜಾನ್ ಅರ್ಥಪೂರ್ಣ ಆಚರಣೆ | ಸಾಮೂಹಿಕ ಪ್ರಾರ್ಥನೆ
ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದವರು ಆಗಮಿಸಬೇಕೆಂದು ಜಿಪಂ ಮಾಜಿ ಸದಸ್ಯರಾದ ಬಿ.ಪಿ.ಪ್ರಕಾಶ್ ಮೂರ್ತಿ, ಆರ್.ನರಸಿಂಹರಾಜು ತಿಳಿಸಿದ್ದಾರೆ.
