CHITRADURGA NEWS | 14 MAY 2026
ಚಿತ್ರದುರ್ಗ: ಜಿಲ್ಲಾ ಮಾದಿಗ ನೌಕರರ ಸಾಂಸ್ಕøತಿಕ ಸಂಘದ ವತಿಯಿಂದ 2025-26ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

ಇದನ್ನೂ ಓದಿ: ಭೋವಿ ಅಭಿವೃದ್ದಿ ನಿಗಮದಿಂದ ಉಚಿತ ಟೈಲರಿಂಗ್ ತರಬೇತಿ
2026ರ ಜೂನ್ ಎರಡನೇ ವಾರದಲ್ಲಿ ನಡೆಯಲಿರುವ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಈ ಪುರಸ್ಕಾರಕ್ಕೆ ಎಸ್‍ಎಸ್‍ಎಲ್‍ಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಹಾಗೂ ಪಿಯುಸಿಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಮಾದಿಗ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸುವಂತೆ ಜಿಲ್ಲಾ ಮಾದಿಗ ನೌಕರರ ಸಾಂಸ್ಕøತಿಕ ಸಂಘದ ಜಿಲ್ಲಾಧ್ಯಕ್ಷ ಡಿ.ಟಿ.ಶ್ರೀನಿವಾಸನ್, ಪ್ರಧಾನ ಕಾರ್ಯದರ್ಶಿ ಎಂ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ತಮ್ಮ ಸ್ವ-ವಿವರದೊಂದಿಗೆ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿ ಹಾಗೂ ಎರಡು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಅರ್ಜಿಯನ್ನು ಸಲ್ಲಿಸಲು ಸೂಚಿಸಿದೆ.
ಇದನ್ನೂ ಓದಿ: ರುಡ್‍ಸೆಟ್ ಸಂಸ್ಥೆಯಿಂದ ಸ್ವಯಂ ಉದ್ಯೋಗ ತರಬೇತಿ
ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕಿನವರು ಬಿ.ಹೆಚ್.ಶಿವಪ್ರಕಾಶ್- 9535384938, ಚಳ್ಳಕೆರೆ ಡಿ.ಭೂತಪ್ಪ- 9945187205, ಹೊಳಲ್ಕೆರೆ ಹನುಮಂತಪ್ಪ ಹೇಮಂತ್- 9945765723, ಮೊಳಕಾಲ್ಮೂರು ಹನುಮಂತಪ್ಪ-9481182227, ಹಿರಿಯೂರು ಮಂಜುನಾಥ್- 9900883280 ಹಾಗೂ ಹೊಸದುರ್ಗ ತಾಲ್ಲೂಕಿನವವರು ಆರ್.ಮೂರ್ತಪ್ಪ-9448272979 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
