
CHITRADURGA NEWS | 10 AUGUST 2024
ಚಿತ್ರದುರ್ಗ: ಹಿಂದುಳಿದ ವರ್ಗಗಳ ಪ್ರವರ್ಗ-2ಎ ಗೆ ಸೇರಿದ ಮಡಿವಾಳ ಮತ್ತು ಇದರ ಉಪಜಾತಿಗೆ ಸೇರಿದ ಜನಾಂಗದವರ ಆರ್ಥಿಕ ಅಭಿವೃದ್ಧಿಗಾಗಿ 2024-25ನೇ ಸಾಲಿನ ವಿವಿಧ ಯೋಜನೆಯಡಿ ಅನುಕೂಲವಾಗುವಂತೆ ಸಾಲ ಸೌಲಭ್ಯ(loan facility;) ಪಡೆಯಲು ಸೇವಾಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಕ್ಲಿಕ್ ಮಾಡಿ ಓದಿ: Tourist spot; ನಮ್ಮೂರಿನ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ವೋಟ್ ಮಾಡಿ | ನಮ್ಮ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿ ಇಲ್ಲಿದೆ ನೋಡಿ
ಈ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣೀಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಯೋಜನೆಗಳಡಿ ಸೌಲಭ್ಯಗಳನ್ನು ಪಡೆಯಲು ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.
ಕ್ಲಿಕ್ ಮಾಡಿ ಓದಿ: Controversy: ಲಿಂಗಾಯತ ಸ್ವತಂತ್ರ ಧರ್ಮ: ಸಾಣೇಹಳ್ಳಿ ಶ್ರೀ | ಹಿಂದೂ ಎನ್ನುವುದು ವಿಶಾಲ ಮಹಾಸಾಗರ: ವಚನಾನಂದ ಶ್ರೀ
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ www.kmmd.karnatak.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080-22374832, 850770004 ಮತ್ತು 8050770005 ಅಥವಾ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
