CHITRADURGA NEWS | 10 MAY 2025
ಚಿತ್ರದುರ್ಗ: ದೇಶದ ಹೆಮ್ಮೆಯ ವೀರ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ ಅವರ ಜೀವ ರಕ್ಷಣೆಗಾಗಿ ನಗರದ ಮೆದೇಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಅಯ್ಯಪ್ಪ ಸ್ವಾಮಿ ದೇವರಿಗೆ ವಿಶೇಷವಾದ ಹೂವಿನ ಅಲಂಕಾರ, ಮಹಾಮೃತ್ಯುಂಜಯ ಹೋಮ ನೆರವೇರಿಸಲಾಯಿತು.
Also Read: ಭಾರತ-ಪಾಕ್ ಸಮರ | ವಿವಿ ಸಾಗರ ಜಲಾಶಯ ಪ್ರವಾಸಕ್ಕೆ ಪ್ರವೇಶ ನಿಷೇಧ | ಡ್ಯಾಂ ಭದ್ರತೆಗೆ ಯೋಜನೆ
ಪಾಕಿಸ್ತಾನದ ಉಗ್ರರ ವಿರುದ್ಧ ಹೋರಾಡುತ್ತಿರುವ ಭೂ ಸೇನೆ, ವಾಯು ಸೇನೆ ಹಾಗೂ ನೌಕಾ ಸೇನೆ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ಮಹಾಮೃತ್ಯುಂಜಯ ಹಮ್ಮಿಕೊಳ್ಳಲಾಯಿತು.
ಪಹಲ್ಗಾವ್ ನಲ್ಲಿ ಭಾರತೀಯರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತೀಕವಾಗಿ ಆಪರೇಷನ್ ಸಿಂಧೂರ ಯಶಸ್ವಿಗಾಗಿ ಪೂಜೆ ಮಾಡಲಾಯಿತು.
ವಿಶೇಷ ಪೂಜೆ ನಂತರ ದೇವಸ್ಥಾನಕ್ಕೆ ಬಂದಂತಹ ಸಾರ್ವಜನಿಕರಿಗೆ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಯಿತು.
Also Read: ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಶರಣ್ ಕುಮಾರ್, ಕಾರ್ಯದರ್ಶಿ ಎಂ.ಪಿ.ವೆಂಕಟೇಶ್, ದೇವಸ್ಥಾನದ ನಿರ್ದೇಶಕರಾದ ಮೋಹನ್ ಕುಮಾರ್, ರೇಷ್ಮೆ ಮಂಜುನಾಥ್, ವಕೀಲರಾದ ವಿಜಯಕುಮಾರ್, ರಮೇಶ್ ಮೋಹನ್ ಗಾಂಧಿ, ದೇವಸ್ಥಾನದ ಪ್ರಧಾನ ಅರ್ಚಕರಾದ ರಘು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
