
CHITRADURGA NEWS | 31 AUGUST 2025
ಚಿತ್ರದುರ್ಗ: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ” ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಅಂಬೇಡ್ಕರ್ ಅವರದ್ದು ಸಾಮಾಜಿಕ ನ್ಯಾಯದ ದೃಷ್ಠಿಕೋನ | ಕೆ.ವಿ.ಪ್ರಭಾಕರ್

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.
ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ “ಅಸ್ಪøಶ್ಯತೆ ನಿವಾರಣೆ”. “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ.
ಇದನ್ನೂ ಓದಿ: ಇ-ಪೌತಿ ಆಂದೋಲನ | ಸದುಪಯೋಗಕ್ಕೆ ಡಿಸಿ ಮನವಿ
ಅರ್ಜಿಗಳನ್ನು 2025 ನೇ ಸೆಪ್ಟೆಂಬರ್ 19 ರ ಒಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ. ನಂ. 17. ಭಗವಾನ್ ಮಹಾವೀರ ರಸ್ತೆ, (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು – 560 001 ಅಥವಾ ಇ – ಮೇಲ್ ವಿಳಾಸ informationdiprawards@gmail.com ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
