CHITRADURGA NEWS | 08 FEBRUARY 2026
ಚಿತ್ರದುರ್ಗ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮೆಕ್ಕೆಜೋಳ ಮಾರಾಟ ಮಾಡಲು ರೈತರ ನೋಂದಣಿ ಅವಧಿಯನ್ನು ಇದೇ ಫೆಬ್ರವರಿ 13ರವರೆಗೆ ಹಾಗೂ ಯುಎಂಪಿ ವೇದಿಕೆಯಡಿ ವಹಿವಾಟು ಅಂತ್ಯಗೊಳಿಸುವ ದಿನಾಂಕವನ್ನು ಫೆ.21 ರವರೆಗೆ ಪುನರ್ ನಿಗಧಿಪಡಿಸಿ ಆದೇಶಿಸಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | 7 ಫೆಬ್ರವರಿ | ರಾಶಿ ಅಡಿಕೆ ಬೆಲೆಯಲ್ಲಿ ತುಸು ಏರಿಕೆ
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳ ಬೆಳೆದ ರೈತರಿಗೆ ಬೆಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸುವ ಸಂಬಂಧ ಈ ಹಿಂದೆ ಜಿಲ್ಲಾವಾರು ನಿಗದಿಪಡಿಸಲಾಗಿದ್ದ ಮಿತಿಯನ್ನು ಹಿಂಪಡೆಯಲಾಗಿದೆ.
ಆಯಾ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಬೆಳೆದ ರೈತರುಗಳಿಗೆ ಮೊದಲು ನೋಂದಣಿ ಮಾಡಿಕೊಂಡವರಿಗೆ ಪ್ರಥಮ ಆದ್ಯತೆ ನೀಡುವ ಮೇರೆಗೆ ಮೆಕ್ಕೆಜೋಳ ಉತ್ಪನ್ನದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯನ್ನು ರಾಜ್ಯ ವ್ಯಾಪ್ತಿಗೆ ಗರಿಷ್ಟ ಪ್ರಮಾಣವನ್ನು 40 ಲಕ್ಷ ಕ್ವಿಂಟಾಲ್‍ಗೆ ನಿಗಧಿಪಡಿಸಿ ಆದೇಶಿಸಿದೆ.
ಇದನ್ನೂ ಓದಿ: ಹಿಂದುಗಳು ಸಂಘಟಿತರಾಗದಿದ್ದರೆ ಮುಂದೆ ದೊಡ್ಡ ಅಪಾಯ | ಮಾದಾರ ಚನ್ನಯ್ಯ ಶ್ರೀ
ಈ ಯೋಜನೆಯಡಿ ರೈತರು ತಮ್ಮ ಉತ್ಪನ್ನವನ್ನು ಮಾರಾಟ ಮಾಡಿ ಬೆಲೆ ವ್ಯತ್ಯಾಸದ ಸೌಲಭ್ಯ ಪಡೆಯುವಂತೆ ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
