
CHITRADURGA NEWS | 28 JUNE 2024
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಹಾಗೂ ಸ್ಯಾಂಡಲ್‌ವುಡ್‌ಗೂ ಅವಿನಾಭಾವ ಸಂಬಂಧ. ವರನಟ ಡಾ.ರಾಜ್‌ಕುಮಾರ್ ಕಂಪನಿ ನಾಟಕದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ್ದು ಈ ನೆಲದಿಂದಲೇ.
ನಟ, ನಿರ್ದೇಶರು, ನಿರ್ಮಾಪಕರು, ವಿತರಕರು ಹೀಗೆ ಚಿತ್ರರಂಗದ ಎಲ್ಲ ವಿಭಾಗದಲ್ಲೂ ಚಿತ್ರದುರ್ಗದ ಉಸಿರಿದೆ.
ಇದೀಗ ಅಮ್ಮಾ ಎಂಟರ್‌ಪ್ರೈಸಸ್ ಮೂಲಕ ಚಿತ್ರದುರ್ಗದ ಟಿ.ಆನಂದಪ್ಪ ಅವರು ನಿರ್ಮಾಣ ಮಾಡಿರುವ ‘ಮೆಜೆಸ್ಟಿಕ್–2’ ಚಿತ್ರ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ.
ಬೆಂಗಳೂರಿನ ಹೃದಯವಾಗಿರುವ ಮೆಜೆಸ್ಟಿಕ್‌ನಲ್ಲಿ ನಡೆಯುವ ಘಟನೆಗಳನ್ನು ಕಥೆಯಾಗಿ ಹೊಂದಿರುವ ಈ ಚಿತ್ರ ಮಹಾಶಿವರಾತ್ರಿಯ ಶುಭ ದಿನದಂದು ಸೆಟ್ಟೇರಿತ್ತು. ಇದೀಗ ಹಿರಿಯ ನಟಿ ಶ್ರುತಿ ಆ ತಂಡ ಸೇರಿಕೊಂಡಿದ್ದಾರೆ.

ಇತ್ತೀಚೆಗೆ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದ ಚಿತ್ರೀಕರಣ ರಾಮೋಹಳ್ಳಿಯಲ್ಲಿ ನಡೆಯಿತು. ಪೆಟ್ರೋಲ್ ಪ್ರಸನ್ನ ಅವರ ತಾಯಿಯಾದ ಶೃತಿ ಅವರನ್ನು ವಿಲನ್‌ಗಳು ಕಿಡ್ಯಾಪ್ ಮಾಡಿರುತ್ತಾರೆ. ನಾಯಕ ಭರತ್ ಹಾಗೂ ಪೆಟ್ರೋಲ್ ಪ್ರಸನ್ನ ಇಬ್ಬರೂ ಶೃತಿ ಅವರನ್ನು ಹುಡುಕಿಕೊಂಡು ಬರುವ ದೃಶ್ಯವನ್ನು ಅಲ್ಲಿ ಚಿತ್ರೀಕರಿಸಿಕೊಳ್ಳಲಾಯಿತು.
ಕ್ಲಿಕ್ ಮಾಡಿ ಓದಿ: ಕೆಎಸ್‌ಸಿಎ ಕ್ರಿಕೆಟ್ ಆಯ್ಕೆ ಟ್ರಯಲ್ಸ್ 30ಕ್ಕೆ | ಬೆಳಗಟ್ಟದ ಸಿಸಿಎ ಟರ್ಫ್ ಮೈದಾನ
ಬೆಂಗಳೂರಿನ ಕೇಂದ್ರಬಿಂದು ಮೆಜೆಸ್ಟಿಕ್ ಏರಿಯಾದಲ್ಲಿ ಏನೇನೆಲ್ಲಾ ಅಕ್ರಮ ಚಟುವಟಿಕೆಗಳು ನಡೆಯುತ್ತವೆ, ಅಲ್ಲಿನ ರೌಡಿಸಂ ಹೇಗಿರುತ್ತದೆ? ಎಂಬುದನ್ನು ಮೆಜೆಸ್ಟಿಕ್ 2 ಚಿತ್ರದ ಮೂಲಕ ನಿರ್ದೇಶಕ ರಾಮು ಹೇಳಲು ಹೊರಟಿದ್ದಾರೆ.
ಚಿತ್ರದ ಮೂಲಕ ನಿರ್ಮಾಪಕ, ವಿತರಕ ಶಿಲ್ಪಾ ಶ್ರೀನಿವಾಸ್ ಪುತ್ರ ಭರತ್ ನಾಯಕನಾಗುತ್ತಿದ್ದಾರೆ. ನಾಯಕಿಯಾಗಿ ನಟಿ ಸಂಹಿತಾ ವಿನ್ಯಾ ಬಣ್ಣಹಚ್ಚಿದ್ದಾರೆ. ವಿನು ಮನಸು ಸಂಗೀತ ನಿರ್ದೇಶನವಿದ್ದು, ವೀನಸ್ ಮೂರ್ತಿ ಛಾಯಾಚಿತ್ರಗ್ರಹಣವಿದೆ.
ಕ್ಲಿಕ್ ಮಾಡಿ ಓದಿ: ಈ ವರ್ಷವೂ ಚಿತ್ರದುರ್ಗಕ್ಕೆ ಭದ್ರೆ ಹರಿಯುವುದು ಅನುಮಾನ
22 ವರ್ಷಗಳ ಹಿಂದೆ ತೆರೆಕಂಡು ದೊಡ್ಡ ದಾಖಲೆ ಬರೆದಿದ್ದ ಮೆಜೆಸ್ಟಿಕ್ ಸಿನಿಮಾ ನಟ ದರ್ಶನ್ ಅವರಿಗೆ ಒಳ್ಳೆ ಹೆಸರನ್ನು ತಂದುಕೊಟ್ಟಿತ್ತು. ಆ ಚಿತ್ರಕ್ಕೆ ಆರಂಭದಲ್ಲಿ ಕಾನ್ಸೆಪ್ಟ್, ಸ್ಕ್ರಿಪ್ಟ್ ಬರೆದಿದ್ದ ರಾಮು ನಿರ್ದೇಶನದಲ್ಲೇ ಈಗ ತೆರೆಗೆ ಬರಲು ಸಿದ್ದವಾಗಿರುವ ‘ಮೆಜೆಸ್ಟಿಕ್ 2’ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

