CHITRADURGA NEWS | 19 MAY 2025
ಚಿತ್ರದುರ್ಗ: ದಾವಣಗೆರೆಯಿಂದ ಚಿತ್ರದುರ್ಗ ಮೂಲಕ ತುಮಕೂರಿಗೆ ನೇರ ರೈಲು ಮಾರ್ಗ ನಿರ್ಮಾಣವಾಗುತ್ತಿದ್ದು, ಇದನ್ನು ಕಾರ್ಗೋ ಎಕಾನಮಿಕ್ ಕಾರಿಡಾರ್ ಮಾಡಿ ಎಂದು ಶಿರಾ ಶಾಸಕ ಟಿ.ಬಿ.ಜಯಚಂದ್ರ ರೈಲ್ವೇ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ದಾವಣಗೆರೆ – ಚಿತ್ರದುರ್ಗ – ತುಮಕೂರು ರೈಲು ಮಾರ್ಗ | 2027 ಡಿಸೆಂಬರ್‌ಗೆ ಪೂರ್ಣ | ಸಚಿವ ವಿ. ಸೋಮಣ್ಣ

ರಾಜ್ಯದಲ್ಲಿ ಉತ್ತಮ ನೀರಾವರಿ ವ್ಯವಸ್ಥೆ ಇದ್ದು, ಗುಣಮಟ್ಟದ ಕೃಷಿ ಬೆಳೆ ಬೆಳೆಯಲಾಗುತ್ತಿದೆ. ಆದರೆ ಸೂಕ್ತ ರೀತಿಯಲ್ಲಿ ಮಾರುಕಟ್ಟೆ ಮತ್ತು ಸಾಗಾಣಿಕೆ ವ್ಯವಸ್ಥೆ ಮಧ್ಯ ಕರ್ನಾಟಕದಲ್ಲಿ ಇಲ್ಲದ ಕಾರಣ, ಬೇರೆ ರಾಜ್ಯಗಳಿಗೆ ಹಾಗೂ ಜಾಗತಿಕ ಮಟ್ಟಕ್ಕೆ ಇಲ್ಲಿನ ಕೃಷಿ ಉತ್ಪನ್ನ ಸೇರಿದಂತೆ ಇತರೆ ಸಾಮಗ್ರಿಗಳನ್ನು ಸಕಾಲಕ್ಕೆ ಸಾಗಾಣಿಕೆ ಮಾಡಲು ಸಾಧ್ಯವಾಗುತ್ತಿಲ್ಲ.
ಇದರಿಂದ ರೈತರ ಆದಾಯ ಕೂಡ ವೃದ್ದಿಯಾಗುತ್ತಿಲ್ಲ. ಹೀಗಾಗಿ ಮಧ್ಯ ಕರ್ನಾಟಕಕ್ಕೆ ರೈಲ್ವೆ ಮಾರ್ಗದಲ್ಲಿ ಕೃಷಿ ಉತ್ಪನ್ನ ಸೇರಿದಂತೆ ವಿವಿಧ ಸಾಮಗ್ರಿಗಳ ಸಾಗಾಣಿಕೆಗೆ ವ್ಯವಸ್ಥೆ ಆಗುವುದು ಅತ್ಯಗತ್ಯವಾಗಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಕೃಷಿ ಭೂಮಿಯಿದ್ದು, ಇಲ್ಲಿನ ರೈತರು ಸಾಕಷ್ಟು ಬೆಳೆ ಬೆಳೆಯುತ್ತಾರೆ. ಆದರೆ, ಸಾಗಾಣಿಕೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಗೋ ಎಕನಾಮಿಕ್ ರೈಲ್ವೇ ಕಾರಿಡಾರ್ ನಿರ್ಮಾಣ ಮಾಡಿ ಎಂದು ಮನವಿ ಮಾಡಿದರು.
ಇದನ್ನೂ ಓದಿ: ಹಿರಿಯೂರು ಚಳ್ಳಕೆರೆಗೆ ರೈಲ್ವೆ ಮಾರ್ಗ ಕಲ್ಪಿಸಿ | ಸಚಿವ ಡಿ.ಸುಧಾಕರ್
ಈಗಾಗಲೆ ದಾವಣಗೆರೆ-ತುಮಕೂರು ನೇರ ರೈಲ್ವೆ ಮಾರ್ಗ ನಿರ್ಮಾಣವಾಗುತ್ತಿದ್ದು, ಈ ಮಾರ್ಗದಲ್ಲಿ ಬರುವ ಶಿರಾ ಬಳಿ ಅಥವಾ ಈ ಮಾರ್ಗದಲ್ಲಿ ರೈಲ್ವೆ ಇಲಾಖೆ ನಿರ್ಧರಿಸುವ ಯಾವುದೇ ಸ್ಥಳದಲ್ಲಿ ರೈಲ್ವೆ ಕಾರ್ಗೋ ಕಾರಿಡಾರ್ ನಿರ್ಮಾಣ ಮಾಡುವಂತೆ ಸಿರಾ ಶಾಸಕ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ರೈಲ್ವೆ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಕ್ರಿಯಿಸಿದ ಸಚಿವ ಸೋಮಣ್ಣ, ಈ ಕುರಿತು ರೈಲ್ವೆ ಅಧಿಕಾರಿಗಳೊಂದಿಗೆ ಸಾಧ್ಯಾಸಾಧ್ಯತೆಗಳ ಬಗ್ಗೆ ಪರಿಶೀಲಿಸಿ, ರೈಲ್ವೆ ಕಾರ್ಗೋ ಕಾರಿಡಾರ್ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
