Connect with us

    ಕಾಡುಗೊಲ್ಲ ಸಮುದಾಯಕ್ಕೆ ವಿಧಾನ ಪರಿಷತ್ ಸದಸ್ಯ ಸ್ಥಾನ ಕಲ್ಪಿಸಿ | ಕೆಪಿಸಿಸಿ ಮಾಜಿ ಕಾರ್ಯದರ್ಶಿ ನಂದಿಹಳ್ಳಿ ಪಾತಪ್ಪ

    kadugoola

    ಮುಖ್ಯ ಸುದ್ದಿ

    ಕಾಡುಗೊಲ್ಲ ಸಮುದಾಯಕ್ಕೆ ವಿಧಾನ ಪರಿಷತ್ ಸದಸ್ಯ ಸ್ಥಾನ ಕಲ್ಪಿಸಿ | ಕೆಪಿಸಿಸಿ ಮಾಜಿ ಕಾರ್ಯದರ್ಶಿ ನಂದಿಹಳ್ಳಿ ಪಾತಪ್ಪ

    CHITRADURGA NEWS | 29 MAY 2024
    ಚಿತ್ರದುರ್ಗ: ಕಾಡುಗೊಲ್ಲರು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಆದ್ದರಿಂದ ಸಮುದಾಯಕ್ಕೆ ವಿಧಾನ ಪರಿಷತ್ ಸದಸ್ಯ ಸ್ಥಾನ ಕಲ್ಪಿಸಬೇಕು ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ನಂದಿಹಳ್ಳಿ ಪಾತಪ್ಪ ಆಗ್ರಹಿಸಿದರು.

    ಹಿರಿಯೂರು ನಗರದ ವೇದಾವತಿ ಬಡಾವಣೆಯ ಶ್ರೀಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾಡುಗೊಲ್ಲ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದ ಅವರು, ‘ಮಧ್ಯ ಕರ್ನಾಟಕ ಭಾಗದಲ್ಲಿ ಬುಡಕಟ್ಟು ಕಾಡುಗೊಲ್ಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇತರೆ ಸಮುದಾಯಗಳಂತೆ ಅಭಿವೃದ್ಧಿ ಹೊಂದಿ ಸಮಾಜದ ಮುಖ್ಯವಾಹಿನಿಗೆ ಬರಲು ರಾಜಕೀಯ ಪ್ರಾತಿನಿಧ್ಯದ ಅವಶ್ಯಕತೆ ಇದೆ. ಈ ಕಾರಣಕ್ಕೆ ಈ ಬಾರಿ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು.

    ಕ್ಲಿಕ್ ಮಾಡಿ ಓದಿ: ಮತ್ತೆ ಬಂಪರ್ ಬೆಲೆಯತ್ತ ಅಡಿಕೆ | ಭೀಮಸಮುದ್ರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಹೆಚ್ಚಳ

    ‘ತಾಲ್ಲೂಕಿನಲ್ಲಿ ಮಾಜಿ ಸಚಿವ ಕೆ.ಎಚ್. ರಂಗನಾಥ್ ಅವರ ಕಾಲದಿಂದಲೂ ಕಾಡುಗೊಲ್ಲರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಹಲವರು ಶ್ರಮಿಸಿದ್ದಾರೆ’ ಎಂದು ತಿಳಿಸಿದರು.

    ‘ಜಿಲ್ಲೆಯಲ್ಲಿ ಬಹುಸಂಖ್ಯಾತರಾಗಿರುವ ಸಮುದಾಯಕ್ಕೆ ಒಂದೇ ಒಂದು ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ಕೊಡಲಿಲ್ಲ. ಜಿಲ್ಲೆಯಿಂದ ಐದು ಜನ ಶಾಸಕರಾಗಲು ಕಾಡುಗೊಲ್ಲರ ಪಾತ್ರ ಮಹತ್ವದ್ದಾಗಿದೆ. ಇದನ್ನು ಕೈ ಹೈಕಮಾಂಡ್ ಗಮನದಲ್ಲಿ ಇಟ್ಟುಕೊಳ್ಳಬೇಕು’ ಎಂದರು.

    ‘ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಕಾಡುಗೊಲ್ಲರಿಗೆ ಟಿಕೆಟ್ ನೀಡುವ ಭರವಸೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರು ಕೊಟ್ಟಿದ್ದರು. ಆದರೆ, ಟಿಕೆಟ್ ನೀಡಲಿಲ್ಲ. ಸಮುದಾಯವನ್ನು ಕೇವಲ ಮತ ಬ್ಯಾಂಕ್‌ಗೆ ಬಳಸಿಕೊಳ್ಳದೆ ಪರಿಷತ್‌ ಚುನಾವಣೆಗಾದರೂ ಪರಿಗಣಿಸುವ ಮೂಲಕ ಸಾಮಾಜಿಕ ನ್ಯಾಯ ಕೊಡಿಸಬೇಕು’ ಎಂದು ಒತ್ತಾಯಿಸಿದರು.

    ಕ್ಲಿಕ್ ಮಾಡಿ ಓದಿ: ಜಿಲ್ಲಾ ಆಸ್ಪತ್ರೆಯಲ್ಲಿ ಕೀಲು,‌‌ ಮೂಳೆ ಆಪರೇಷನ್ ಇನ್ ಪ್ಲಾಂಟ್ಸ್ ಉಚಿತ

    ‘ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕಾಡುಗೊಲ್ಲರ ಮತಗಳನ್ನು ಪಡೆದು ಸಚಿವ, ಶಾಸಕರಾಗಿರುವವರು ಧ್ವನಿ ಇಲ್ಲದ ಸಮುದಾಯಕ್ಕೆ ಧ್ವನಿಯಾಗಬೇಕು. ಇಲ್ಲದಿದ್ದರೆ ಮುಂಬರುವ ಚುನಾವಣೆಗಳಲ್ಲಿ ನಮ್ಮ ಶಕ್ತಿ ಪ್ರದರ್ಶಿಸಬೇಕಾಗುತ್ತದೆ’ ಎಂದು ನಗರಸಭೆ ಮಾಜಿ ಸದಸ್ಯ ಶಿವಣ್ಣ ಎಚ್ಚರಿಸಿದರು.

    ಹಿರಿಯ ಮುಖಂಡ ಎ.ಜಿ. ತಿಮ್ಮಯ್ಯ,ನಗರಸಭೆ ಮಾಜಿ ಅಧ್ಯಕ್ಷೆ ಶಿವರಂಜಿನಿ ಯಾದವ್‌, ಸದಸ್ಯ ಚಿತ್ರಜಿತ್ ಯಾದವ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಕರಿಯಣ್ಣ, ಸದಸ್ಯ ಹರೀಶ್, ತಿಪ್ಪೇಸ್ವಾಮಿ ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top