By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಹಿರೇಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿದರು
    ಒಳಮೀಸಲಾತಿ ಗೊಂದಲ | ಸರ್ಕಾರದ ವಿರುದ್ಧ ಅಸಮಧಾನ
    2 hours ago
    SJMIT ಸ್ಫೂರ್ತಿ-2026 | ದೇಸಿ ಉಡುಗೆಗಳಲ್ಲಿ ಮಿಂಚಿದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು
    SJMIT ಸ್ಫೂರ್ತಿ-2026 | ದೇಸಿ ಉಡುಗೆಗಳಲ್ಲಿ ಮಿಂಚಿದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು
    3 hours ago
    ನೀಟ್ ಪರೀಕ್ಷೆ-2026 ಪೂರ್ವಭಾವಿ ಸಭೆ
    ಮೇ.3 ರಂದು ನೀಟ್ ಪರೀಕ್ಷೆ: ಬಿ.ಟಿ. ಕುಮಾರಸ್ವಾಮಿ ಸೂಚನೆ
    3 hours ago
    ಡಿ.ಸುಧಾಕರ್ ಪುತ್ರ ಸುಹಾಸ್
    ಕುಮಾರಸ್ವಾಮಿ ಹೇಳಿಕೆಗೆ ಡಿ.ಸುಧಾಕರ್ ಪುತ್ರ ಸುಹಾಸ್ ಬೇಸರ
    5 hours ago
    KSRTC ಬಸ್ ಪಲ್ಟಿ | ಪ್ರಯಾಣಿಕರು ಪಾರು
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    4 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    4 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    2 hours ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    1 day ago
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    6 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 28 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಶುಭ ಸುದ್ದಿ
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 27 | ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ, ಹಠಾತ್ ಆರ್ಥಿಕ ಲಾಭ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    4 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • Life Style
    Life StyleShow More
    Smoking
    ಧೂಮಪಾನದಿಂದ ಶ್ವಾಸಕೋಶಕ್ಕೆ ಮಾತ್ರವಲ್ಲ ಈ ಭಾಗಗಳಿಗೂ ಹಾನಿಯುಂಟಾಗುತ್ತದೆಯಂತೆ
    13 hours ago
    Eating nitrate-rich vegetables may reduce heart attacks
    ನೈಟ್ರೇಟ್ ಭರಿತ ತರಕಾರಿಗಳನ್ನು ತಿನ್ನುವುದರಿಂದ ಹೃದಯಾಘಾತ ಕಡಿಮೆಯಾಗುತ್ತದೆಯಂತೆ
    14 hours ago
    white spots on the skin
    ಚರ್ಮದ ಮೇಲಿನ ಬಿಳಿ ಕಲೆಗಳನ್ನು ತೆಗೆದುಹಾಕಲು ಈ ಮನೆಮದ್ದುಗಳನ್ನು ಹಚ್ಚಿ
    2 days ago
    high blood pressure
    ಅಧಿಕ ರಕ್ತದೊತ್ತಡ ರೋಗಿಗಳಿಗೆ ಯಾವ ತರಕಾರಿ, ಹಣ್ಣು ಉತ್ತಮ ಗೊತ್ತಾ?
    2 days ago
    Omega-3
    ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
    3 days ago
Reading: ಹಿರಿಯ ನಾಗರಿಕರು, ವಿಕಲಚೇತನರಿಗೆ ಸರ್ಕಾರಿ ಕಚೇರಿಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಿ | AC ವೆಂಕಟೇಶ್ ನಾಯ್ಕ್ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹಿರಿಯ ನಾಗರಿಕರು, ವಿಕಲಚೇತನರಿಗೆ ಸರ್ಕಾರಿ ಕಚೇರಿಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಿ | AC ವೆಂಕಟೇಶ್ ನಾಯ್ಕ್ ಸೂಚನೆ

News Desk Chitradurga News
Last updated: 8 February 2026 09:41
News Desk Chitradurga News
3 months ago
Share
ಕುಂದುಕೊರತೆಗಳ ನಿವಾರಣಾ ಸಭೆ
ಕುಂದುಕೊರತೆಗಳ ನಿವಾರಣಾ ಸಭೆ
SHARE

CHITRADURGA NEWS | 08 FEBRUARY 2026

ಚಿತ್ರದುರ್ಗ: ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗೆ ಅಧಿಕಾರಿಗಳು ಕುಳಿತುಕೊಳ್ಳಲು ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಿ, ಸೌಜನ್ಯದಿಂದ ವರ್ತಿಸಬೇಕು. ಈ ಕುರಿತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಗೆ ಸುತ್ತೊಲೆ ಹೊರಡಿಸುವಂತೆ ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್ ಸೂಚನೆ ನೀಡಿದರು.

ಇದನ್ನೂ ಓದಿ: ಅಡಿಕೆ ಧಾರಣೆ | 7 ಫೆಬ್ರವರಿ | ರಾಶಿ ಅಡಿಕೆ ಬೆಲೆಯಲ್ಲಿ ತುಸು ಏರಿಕೆ

ನಗರದ ಉಪವಿಭಾಗಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪಾಲಕರ ಮತ್ತು ಪೋಷಕರ ಸಂರಕ್ಷಣಾ ಕಾಯ್ದೆಯ ಅನುಷ್ಠಾನ, ವಿಕಲಚೇತನರ ಪುನರ್ವಸತಿ ಕೇಂದ್ರದ ಯೋಜನೆಯ ಜಿಲ್ಲಾ ಸಮನ್ವಯ ಸಮಿತಿ ಸಭೆ ಹಾಗೂ ವಿಕಲಚೇತನರ ಕುಂದುಕೊರತೆಗಳ ನಿವಾರಣಾ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ಸರ್ಕಾರಿ ಬಸ್‌ಗಳಲ್ಲಿ ನಿಗದಿ ಪಡಿಸಿದ ಆಸನಗಳಲ್ಲಿ ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗಾಗಿ ಕುಳಿತು ಪ್ರಯಾಣಿಸಲು ನಿರ್ವಾಹಕರು ಅವಕಾಶ ಕಲ್ಪಿಸಿ ಕೊಡಬೇಕು. ಈ ಕುರಿತು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಬಸ್ ನಿರ್ವಾಹಕರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್ ಹೇಳಿದರು.

ಲೋಕಾದಾಲತ್ ಮೂಲಕ ಹಿರಿಯ ನಾಗರಿಕರ ಪ್ರಕರಣಗಳ ವಿಲೇವಾರಿ:

ಫೆ.28 ರಂದು ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕಾದಾಲತ್ ಜರುಗಲಿದೆ. ಈ ವೇಳೆ ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬಾಕಿರುವ ಹಿರಿಯ ನಾಗರಿಕರ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಪಕ್ಷಗಾರರ ಮನ ಒಲಿಸಬೇಕು. 

ಇದನ್ನೂ ಓದಿ: ಹಿಂದುಗಳು ಸಂಘಟಿತರಾಗದಿದ್ದರೆ ಮುಂದೆ ದೊಡ್ಡ ಅಪಾಯ | ಮಾದಾರ ಚನ್ನಯ್ಯ ಶ್ರೀ

ಪೊಷಕರ ನಿರ್ವಹಣೆಗೆ ಹಣ ನೀಡುವಂತೆ ಆದೇಶ ಮಾಡಿದರು, ಕೆಲ ಮಕ್ಕಳು ಆದೇಶ ಪಾಲನೆ ಮಾಡುತ್ತಿಲ್ಲ. ಈ ಕುರಿತು ಹಿರಿಯ ನಾಗರಿಕರು ಪುನಃ ಕಚೇರಿಗೆ ಅಲೆಯುವಂತಾಗಿದೆ. ಹಿರಿಯ ನಾಗರಿಕರ ಕಲ್ಯಾಣಧಿಕಾರಿಗಳು ನಿರ್ವಹಣೆ ನೀಡಿದ ಆದೇಶಗಳು ಜಾರಿಯಾಗುವಂತೆ ಕ್ರಮ ವಹಿಸಬೇಕು. 

ನಗರದಲ್ಲಿ ಕಾಯ್ದೆಯಡಿ ನೊಂದಣಿಯಾಗದೆ ಕಾರ್ಯಚರಣೆ ನಡೆಸುತ್ತಿರುವ ವೃದ್ಧಾಶ್ರಮಗಳ ನೊಂದಣಿ ಕ್ರಮ ವಹಿಸಬೇಕು. ಸಂಧ್ಯಾ ಸುರಕ್ಷಾ ಯೋಜನೆಯಡಿ ರೂ.800 ಪಿಂಚಣಿ ಪಡೆಯುತ್ತಿರುವ 60 ವರ್ಷ ಮೇಲ್ಪಟ್ಟವರಿಗೆ 65 ವರ್ಷ ದಾಟಿದ ನಂತರ ರೂ.1,200 ನೀಡಲು ಸರ್ಕಾರ ಆದೇಶ ನೀಡಿದೆ. ಈ ಕುರಿತು ಪಿಂಚಣಿ ಅದಾಲತ್‌ಗಳ ಮೂಲಕ ಹಿರಿಯ ನಾಗರಿಕರಿಗೆ ಮಾಹಿತಿ ನೀಡಬೇಕು ಎಂದು ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್ ಸೂಚಿಸಿದರು.

ವಿಕಲಚೇತನರ ಅನುದಾನ ಬಳಕೆಗೆ ನಿರ್ದೇಶನ :

ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಶೇ.5 ರಷ್ಟು ಅನುದಾನವನ್ನು ವಿಕಲಚೇತನರ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸಲು ಸ್ಪಷ್ಟ ನಿರ್ದೇಶನವಿದೆ. ಆದರೆ ಗ್ರಾಮ ಪಂಚಾಯಿತಿಗಳು ಅನುದಾನ ಬಳಕೆ ಮಾಡುತ್ತಿಲ್ಲ. ವಿಕಲಚೇತನರಿಗೆ ಯಾವುದೇ ಕಾರ್ಯಕ್ರಮಗಳನ್ನು ರೂಪಿಸುತ್ತಿಲ್ಲ. ಕೂಡಲೇ ಅಧಿಕಾರಿಗಳು ಅನುದಾನ ಬಳಕೆಗೆ ಕ್ರಮ ಕೈಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್ ನಿರ್ದೇಶನ ನೀಡಿದರು.

ಇದನ್ನೂ ಓದಿ: ನಿವೃತ್ತ ಶಿಕ್ಷಕ ತಿಪ್ಪೇಶಾಚಾರ್ಯ ನಿಧನ | ಬಸವೇಶ್ವರ ಆಸ್ಪತ್ರೆಗೆ ನೇತ್ರದಾನ

ಚಿತ್ರದುರ್ಗ ಜಿಲ್ಲೆಯಲ್ಲಿ ಎರಡು ಅನುದಾನಿತ ವೃದ್ದಾಶ್ರಮಗಳು ಕಾರ್ಯನಿರ್ವಹಿಸುತ್ತಿವೆ. ಸಂಧ್ಯಾ ಸುರಕ್ಷಾ ಯೋಜನೆಯಡಿ 60 ವರ್ಷ ಮೇಲ್ಪಟ್ಟ 42,198 ಫಲಾನುಭವಿಗಳು ರೂ.800 ಹಾಗೂ 65 ವರ್ಷ ಮೇಲ್ಪಟ್ಟ 1,10,475 ಫಲಾನುಭವಿಗಳು ರೂ.1200 ಪಿಂಚಣಿ ಪಡೆಯುತ್ತಿದ್ದಾರೆ. 

ಹಿರಿಯ ನಾಗರಿಕರಿಗೆ ಸಂಬಂಧಿಸಿದಂತೆ ಜನವರಿ ಅಂತ್ಯಕ್ಕೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ 35 ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ 19 ಪ್ರಕರಣಗಳು ದಾಖಲಾಗಿವೆ. 2011 ಜನಗಣತಿ ಅನುಸಾರ ಜಿಲ್ಲೆಯಲ್ಲಿ 35,971 ವಿಕಲಚೇತನರು ಇದ್ದು, 35,074 ವಿಕಲಚೇತನರಿಗೆ ಯುಡಿಐಡಿ ಕಾರ್ಡ್ ನೀಡಲಾಗಿದೆ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಕಲ್ಯಾಣಧಿಕಾರಿ ವೈಶಾಲಿ.ಜೆ ತಿಳಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ.ರೇಣುಪ್ರಸಾದ್, ಉಪವಿಭಾಗಾಧಿಕಾರಿ ಕಚೇರಿ ತಹಶೀಲ್ದಾರ್ ನರಸಿಂಹಮೂರ್ತಿ, ಜಿಲ್ಲಾಸ್ಪತ್ರೆ ನಿವಾಸಿ ವೈದ್ಯಾಧಿಕಾ ಡಾ.ಆನಂದ್ ಪ್ರಕಾಶ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDisabledGovernment OfficeSenior citizensಚಿತ್ರದುರ್ಗಚಿತ್ರದುರ್ಗ ನ್ಯೂಸ್ವಿಕಲಚೇತನರುಸರ್ಕಾರಿ ಕಚೇರಿಹಿರಿಯ ನಾಗರಿಕರು
Share This Article
Facebook Email Print
Previous Article ಬ್ರೊಕೊಲಿ ಬ್ರೊಕೊಲಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆಯೇ?
Next Article ಮೆಕ್ಕೆಜೋಳ ಮೆಕ್ಕೆಜೋಳ ಖರೀದಿ | ಫೆ.13ರವರೆಗೆ ನೋಂದಣಿ ಅವಧಿ ವಿಸ್ತರಣೆ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
ಸುದ್ದಿಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಹಿರೇಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿದರು
ಒಳಮೀಸಲಾತಿ ಗೊಂದಲ | ಸರ್ಕಾರದ ವಿರುದ್ಧ ಅಸಮಧಾನ
ಮುಖ್ಯ ಸುದ್ದಿ
SJMIT ಸ್ಫೂರ್ತಿ-2026 | ದೇಸಿ ಉಡುಗೆಗಳಲ್ಲಿ ಮಿಂಚಿದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು
SJMIT ಸ್ಫೂರ್ತಿ-2026 | ದೇಸಿ ಉಡುಗೆಗಳಲ್ಲಿ ಮಿಂಚಿದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು
ಮುಖ್ಯ ಸುದ್ದಿ
ನೀಟ್ ಪರೀಕ್ಷೆ-2026 ಪೂರ್ವಭಾವಿ ಸಭೆ
ಮೇ.3 ರಂದು ನೀಟ್ ಪರೀಕ್ಷೆ: ಬಿ.ಟಿ. ಕುಮಾರಸ್ವಾಮಿ ಸೂಚನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up