
CHITRAUDRGA NEWS | 12 APRIL 2026
ಚಿತ್ರದುರ್ಗ: ಪೊಲೀಸ್ ಎಂದು ಹೇಳಿ ಬೆದರಿಸಿ ಮೊಬೈಲ್, ಹಣ ದರೋಡೆ ಮಾಡಿದ್ದ ವ್ಯಕ್ತಿಯನ್ನು ಕೋಟೆ ಠಾಣೆ ಪೊಲೀಸರು ಬಂದಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ: ರಸ್ತೆ ಸುರಕ್ಷತಾ ಸಮಿತಿ ಸಭೆ | ಅಪಘಾತಗಳ ತಡೆಗೆ ವೈಜ್ಞಾನಿಕ ಕ್ರಮ ಅಗತ್ಯ
ನಗರದ ಐಯುಡಿಪಿ ಬಡಾವಣೆಯ ರಮೇಶ ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿದ್ದ ಯೂಟ್ಯೂಬ್ ಚಾನೆಲ್ ಲೋಗೋ, ಪತ್ರಿಕಾ ಸಂಘದ ಗುರುತಿನ ಚೀಟಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಏಪ್ರಿಲ್ 5 ರಂದು ಚಿತ್ರದುರ್ಗದ ಆಜಾದ್ ಮಿಲ್ ರಸ್ತೆಯಲ್ಲಿ ಸಲೀಂ ಎಂಬ ವ್ಯಕ್ತಿಯನ್ನು ಅಡ್ಡಗಟ್ಟಿ ಬೈಕಿನಲ್ಲಿ ಹತ್ತಿಸಿಕೊಂಡು ಎಪಿಎಂಸಿ ಮಾರುಕಟ್ಟೆಗೆ ಕರೆದೊಯ್ದು ಕಪಾಳಕ್ಕೆ ಹೊಡೆದು ಕೈಯಲ್ಲಿದ್ದ ಮೊಬೈಲ್ ಹಾಗೂ 8700 ರೂ. ನಗದು ಕಿತ್ತುಕೊಂಡು ಪರಾರಿಯಾಗಿದ್ದ ರಮೇಶ ಬಂದಿತ.
ಪೊಲೀಸರ ಹೆಸರೇಳಿಕೊಂಡು ವಂಚಿಸಿದ್ದ ಆರೋಪಿ ಬಂಧನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಹಾಗೂ ಎಎಸ್ಪಿ ಡಾ.ಶಿವಕುಮಾರ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಅರುಣ್ ನಾಗೇಗೌಡ, ಕೋಟೆ ಠಾಣೆ ಪಿಐ ಪ್ರಕಾಶ್ ಪಾಟೀಲ್, ಪಿಎಸ್ಐ ಪುಷ್ಪಲತಾ ಹಾಗೂ ಸಿಬ್ಬಂದಿಯ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಏ.11 ರಂದು ಬಿಗ್ಬಾಸ್ ಹೋಟೆಲ್ ಬಳಿ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಇದನ್ನೂ ಓದಿ: ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬಂದಿತ ರಮೇಶನಿಂದ ಪೊಲೀಸರು ಕಳುವಾಗಿದ್ದ ಮೊಬೈಲ್ನೊಂದಿಗೆ ಇತರೆ 4 ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಂಡಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
