
CHITRADURGA NEWS | 02 SEPTEMBER 2026
ಚಿತ್ರದುರ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರರಾಗಿ ಹಿರಿಯೂರಿನ ಮಾನಸ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ನೇಮಕ ಮಾಡಿದ್ದಾರೆ.
ಇದನ್ನೂ ಓದಿ: ಶೀಘ್ರದಲ್ಲೇ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ಬರಪೀಡಿತ ಪಟ್ಟಿಗೆ | ಸಚಿವ ರಘುಮೂರ್ತಿ
ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರಿಗೆ ವಕ್ತಾರರಂತಹ ಪ್ರಮುಖ ಜವಾಬ್ದಾರಿ ನೀಡಲಾಗಿದೆ. ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್ಪೀರ್ ಅವರು ಮಾನಸ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾನಸ, ತಮ್ಮ ಮೇಲೆ ವಿಶ್ವಾಸವಿಟ್ಟು ಪಕ್ಷದ ನಾಯಕರು ವಕ್ತಾರರನ್ನಾಗಿ ನೇಮಕ ಮಾಡಿದ್ದು, ಕಾಂಗ್ರೆಸ್ ಪಕ್ಷದ ತತ್ವ–ಸಿದ್ಧಾಂತಗಳಿಗೆ ಅನುಗುಣವಾಗಿ ಜವಾಬ್ದಾರಿಯಿಂದ ಕೆಲಸ ಮಾಡುವುದಾಗಿ ಹೇಳಿದರು.
ತಮ್ಮ ಕುಟುಂಬ ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಿದ್ದು, ತಾವೂ ಸಹ ಸಾಮಾನ್ಯ ಕಾರ್ಯಕರ್ತೆಯಾಗಿ ಪಕ್ಷದಲ್ಲಿ ಕೆಲಸ ಮಾಡಿರುವುದಾಗಿ ತಿಳಿಸಿದರು. ಇದೀಗ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವುದಾಗಿ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್ಪೀರ್ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದ್ದು, ಸಾಮಾಜಿಕ ನ್ಯಾಯ ಪಕ್ಷದ ಮೂಲ ತತ್ವವಾಗಿದೆ. ಈ ತತ್ವವನ್ನು ಪಾಲಿಸಿಕೊಂಡು ಪಕ್ಷದ ಪರವಾಗಿ ವಕ್ತಾರರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿಕಾಂತ್, ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ್ ಬಾಬು, ಜಿ.ಪಂ. ಮಾಜಿ ಸದಸ್ಯ ಚಂದ್ರಪ್ಪ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಎನ್. ಮೈಲಾರಪ್ಪ, ಮುಖಂಡರಾದ ಜಾನ್ಹವಿ ನಾಗರಾಜ್, ಮರುಳಾರಾಧ್ಯ, ಮಂಜುನಾಥ್, ಹಿರಿಯೂರು ನಗರಸಭೆ ಮಾಜಿ ಉಪಾಧ್ಯಕ್ಷೆ ಅಂಬಿಕಾ, ವಾಣಿ, ಚಿದಾನಂದಮೂರ್ತಿ, ರಾಮಚಂದ್ರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

