CHITRADURGA NEWS | 01 SEPTEMBER 2026
ಚಿತ್ರದುರ್ಗ: ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಅಂತ್ಯೋದಯ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿದಾರರ ಕುಟುಂಬದ ಎಲ್ಲಾ ಸದಸ್ಯರು ಈಗಾಗಲೇ ಇ-ಕೆವೈಸಿ ಮಾಡಿಸಿ 05 ವರ್ಷ ಪೂರೈಸಿದವರು ಮಾತ್ರ ತಮ್ಮ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಇ-ಕೆವೈಸಿ (ಬಯೋ ದೃಢೀಕರಣ) ಮಾಡಿಸಿಕೊಳ್ಳಲು ತಿಳಿಸಿದೆ.
ಇದನ್ನೂ ಓದಿ: ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡುವಾಗ ಇತ್ತೀಚಿನ ಜಾತಿ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ಮೊಬೈಲ್ ಹಾಗೂ ರೇಷನ್ ಕಾರ್ಡ್ನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿದೆ.
ಇ-ಕೆವೈಸಿ ಮಾಡಿಸದೇ ಹೋದಲ್ಲಿ ಅಂತಹ ಪಡಿತರ ಚೀಟಿಯ ಫಲಾನುಭವಿಗಳು ಸರ್ಕಾರದ ಸೌಲಭ್ಯದಿಂದ ವಂಚಿತರಾಗಬಹುದು. ಆದ್ದರಿಂದ 2026ರ ಸೆಪ್ಟೆಂಬರ್ 01 ರಿಂದ 15 ರವರೆಗೆ ಇ-ಕೆವೈಸಿ ಕಾರ್ಯ ನಡೆಯಲಿದ್ದು, ಪಡಿತರ ಚೀಟಿದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

