By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುರುಘಾ ಮಠ
    ಡಾ.ಕೆ.ಎಂ.ವೀರೇಶ್ ನಿಧನಕ್ಕೆ ಮುರುಘಾಮಠದಿಂದ ಸಂತಾಪ
    4 minutes ago
    Brochures regarding the corporation's schemes were released
    ಆರ್ಯವೈಶ್ಯ ಸಮುದಾಯದ ಆರ್ಥಿಕ, ಶೈಕ್ಷಣಿಕ ಪ್ರಗತಿಗೆ ಹಲವು ಯೋಜನೆ | ನಿಗಮದ ಅಧ್ಯಕ್ಷ ಕೆ.ವಿ.ರಾಮ್‌ಪ್ರಸಾದ್
    41 minutes ago
    ಬಾಪೂಜಿ‌ ವಿದ್ಯಾಸಂಸ್ಥೆಯ ಕೆ.ಎಂ.ವೀರೇಶ್ ಇನ್ನಿಲ್ಲ
    13 hours ago
    Immersion of Sri Gauri
    53 ಅಡಿ ಗಣಪತಿ ದೇವಸ್ಥಾನದಲ್ಲಿ ಶ್ರೀಗೌರಿ ವಿಸರ್ಜನೆ | ವಿಶೇಷ ಪೂಜೆ, ಅನ್ನ ಸಂತರ್ಪಣೆ
    1 day ago
    Inspection of preparations for the mega event to be held at the grounds adjacent to the Madara Channayya Gurupeetha
    ಭದ್ರಾ ಜಲ ಹರಿವಿನ ಐತಿಹಾಸಿಕ ಸಂಭ್ರಮ | ಸೆ.24ರಂದು ಸಿಎಂ ಶಿವಕುಮಾರ್‌ರಿಂದ ಗಂಗಾಪೂಜೆ | ಸಚಿವ ಚಲುವರಾಯಸ್ವಾಮಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 week ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 21 | ಮನೆಯಲ್ಲಿ ಶುಭ ಕಾರ್ಯಗಳು, ಬಾಲ್ಯದ ಗೆಳೆಯರ ಭೇಟಿ
    13 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 20 | ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ, ಧನಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 19 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 18 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 17 | ವ್ಯಾಪಾರದಲ್ಲಿ ಹೊಸ ಹೂಡಿಕೆ, ದೀರ್ಘಾವಧಿ ಸಾಲಗಳಿಂದ ಮುಕ್ತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 21 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    5 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 18 | ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 17 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 15 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    3 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 week ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    Pumpkin flower
    ಕುಂಬಳಕಾಯಿ ಹೂವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಈ ಪ್ರಯೋಜನ ಪಡೆಯಿರಿ
    12 hours ago
    Triphala
    ತ್ರಿಫಲವು ಮೂಲವ್ಯಾಧಿಗೆ ಪ್ರಯೋಜನಕಾರಿಯೇ ತಿಳಿಯಿರಿ
    13 hours ago
    Eat this to relieve fatigue during menstruation
    ಮುಟ್ಟಿನ ಸಮಯದಲ್ಲಿ ಕಾಡುವ ಆಯಾಸವನ್ನು ನಿವಾರಿಸಲು ಇದನ್ನು ತಿನ್ನಿ
    2 days ago
    low blood pressure
    ಲೋಬಿಪಿ ಸಮಸ್ಯೆ ಇರುವವರು ಈ ಆಹಾರ ಸೇವಿಸಿ
    2 days ago
    Herbs
    ಈ ಗಿಡಮೂಲಿಕೆಗಳು ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿಯಂತೆ
    3 days ago
Reading: ಆರ್ಯವೈಶ್ಯ ಸಮುದಾಯದ ಆರ್ಥಿಕ, ಶೈಕ್ಷಣಿಕ ಪ್ರಗತಿಗೆ ಹಲವು ಯೋಜನೆ | ನಿಗಮದ ಅಧ್ಯಕ್ಷ ಕೆ.ವಿ.ರಾಮ್‌ಪ್ರಸಾದ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಆರ್ಯವೈಶ್ಯ ಸಮುದಾಯದ ಆರ್ಥಿಕ, ಶೈಕ್ಷಣಿಕ ಪ್ರಗತಿಗೆ ಹಲವು ಯೋಜನೆ | ನಿಗಮದ ಅಧ್ಯಕ್ಷ ಕೆ.ವಿ.ರಾಮ್‌ಪ್ರಸಾದ್

News Desk Chitradurga News
Last updated: 21 September 2026 20:11
News Desk Chitradurga News
41 minutes ago
Share
Brochures regarding the corporation's schemes were released
ನಿಗಮದ ಯೋಜನೆಗಳ ಕುರಿತಾದ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು
SHARE

CHITRADURGA NEWS | 21 SEPTEMBER 2026

ಚಿತ್ರದುರ್ಗ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸಮುದಾಯದ ಬಾಂಧವರ ಆರ್ಥಿಕ ಮತ್ತು ಶೈಕ್ಷಣಿಕ ಪ್ರಗತಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಅರ್ಹರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ನಿಗಮದ ಅಧ್ಯಕ್ಷ ಕೆ.ವಿ. ರಾಮ್ ಪ್ರಸಾದ್ ಮನವಿ ಮಾಡಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 21 | ರಾಗಿ, ಶೇಂಗಾ ರೇಟ್ ಎಷ್ಟಿದೆ?

ನಗರದ ವಾಸವಿ ಮಹಲ್ ಪಕ್ಕದಲ್ಲಿರುವ ಕನ್ನಿಕಾಪರಮೇಶ್ವರ ದೇವಸ್ಥಾನದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಈ ಭಾಗದ ಆರ್ಯವೈಶ್ಯ ಮಂಡಳಿಗಳು, ವಾಸವಿ ಸೇನೆ, ವಾಸವಿ ಯುವಜನ ಶಕ್ತಿ ಹಾಗೂ ಮಹಿಳಾ ಮಂಡಳಿಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ನಿಗಮದ ವಿವಿಧ ಯೋಜನೆಗಳ ಕುರಿತು ಮನದಟ್ಟು ಮಾಡಿಕೊಡಲಾಗಿದೆ ಎಂದರು.

ನಿಗಮದ ವತಿಯಿಂದ ‘ಸ್ವಯಂ ಉದ್ಯೋಗ ನೇರ ಸಾಲ ಯೋಜನೆ’, ‘ಅರಿವು ಶಿಕ್ಷಣ ಯೋಜನೆ’, ‘ಆಹಾರ ವಾಹಿನಿ ಯೋಜನೆ’ ಹಾಗೂ ‘ವಾಸವಿ ಗಂಗಾ ಕಲ್ಯಾಣ ಯೋಜನೆ’ಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಫಲಾನುಭವಿಗಳಿಗೆ ಅಗತ್ಯ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.

ಕಳೆದ ಸಾಲಿನಲ್ಲಿ ಸುಮಾರು 2,650 ಅರ್ಜಿಗಳು ಬಂದಿದ್ದವು. ನಿಗಮದ ಮೂಲ ಬಜೆಟ್ 10 ಕೋಟಿ ರೂ. ಹಾಗೂ ಸಾಲ ಮರುಪಾವತಿಯಿಂದ ಬಂದ ಹಣ ಸೇರಿ ಒಟ್ಟು ರೂ.12 ಕೋಟಿ ಮೊತ್ತದಲ್ಲಿ ಸೌಲಭ್ಯ ಕಲ್ಪಿಸಲಾಗಿತ್ತು. ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದ ಬಳಿಕ ಬಜೆಟ್‍ನಲ್ಲಿ ಹೆಚ್ಚುವರಿಯಾಗಿ 5 ಕೋಟಿ ರೂ. ಅನುದಾನ ಒದಗಿಸಿದರು. ಇದರಿಂದಾಗಿ ಒಟ್ಟು 1,720 ಅರ್ಹ ಅರ್ಜಿದಾರರಿಗೆ ಸಾಲ ಹಾಗೂ ಸೌಲಭ್ಯ ವಿತರಿಸಲು ಸಾಧ್ಯವಾಯಿತು ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಬಾಪೂಜಿ‌ ವಿದ್ಯಾಸಂಸ್ಥೆಯ ಕೆ.ಎಂ.ವೀರೇಶ್ ಇನ್ನಿಲ್ಲ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರ ಬೆಂಬಲದಿಂದ ನಿಗಮದ ಕಾರ್ಯಚಟುವಟಿಕೆಗಳು ಚುರುಕಿನಿಂದ ಸಾಗುತ್ತಿವೆ. ಅಲ್ಲದೆ, ಸಾಲ ಮರುಪಾವತಿ ಪ್ರಕ್ರಿಯೆಯೂ ಉತ್ತಮವಾಗಿದ್ದು, ಶೇ. 85ರಷ್ಟು ಸಾಲ ಮರುಪಾವತಿಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಸಮುದಾಯದ ಅರ್ಹರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿ ನಿಗಮದ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಕೋರಿದರು.

ಆರ್ಯವೈಶ್ಯ ಸಮುದಾಯದ ಬಡವರ ನೆರವಿಗೆ ಸರ್ಕಾರ ಬದ್ಧ: ಎಷ್ಟೇ ಆರ್ಥಿಕ ಸಂಕಷ್ಟ ಎದುರಾದರೂ ಕಷ್ಟವನ್ನು ಹೊರಹಾಕಿಕೊಳ್ಳದ ಸ್ವಾಭಿಮಾನಿ ಸ್ವಭಾವದಿಂದಾಗಿ ಆರ್ಯವೈಶ್ಯ ಸಮುದಾಯದಲ್ಲಿರುವ ಬಡವರ ನಿಖರ ಅಂಕಿ-ಅಂಶಗಳು ಲಭ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಿಗಮದ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಮೂಡಿಸಿ, ಅರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಿ. ರಾಮ್‍ಪ್ರಸಾದ್ ತಿಳಿಸಿದರು.

ಬಹುರಾಷ್ಟ್ರೀಯ ಕಂಪನಿಗಳಿಂದ ವ್ಯಾಪಾರಕ್ಕೆ ಹೊಡೆತ: ಆರ್ಯವೈಶ್ಯ ಸಮುದಾಯವು ಸಾಂಪ್ರದಾಯಿಕವಾಗಿ ದಾನ-ಧರ್ಮ ಹಾಗೂ ವ್ಯಾಪಾರ-ವಹಿವಾಟಿಗೆ ಹೆಸರಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಆಗಮನದಿಂದ ಸಣ್ಣ ಹಾಗೂ ಮಧ್ಯಮ ವ್ಯಾಪಾರಿಗಳ ವಹಿವಾಟಿಗೆ ಭಾರಿ ಹೊಡೆತ ಬಿದ್ದಿದೆ. ಪರಿಣಾಮವಾಗಿ ಸಮುದಾಯದಲ್ಲೂ ಅನೇಕ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟ ಮತ್ತು ಬಡತನ ಎದುರಿಸುತ್ತಿವೆ. ಈ ವಾಸ್ತವ ಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರಲಾಗಿದ್ದು, ಕಡುಬಡವರಿಗೆ ಹೆಚ್ಚಿನ ಯೋಜನಾ ಸೌಲಭ್ಯ ತಲುಪಿಸಲು ಮನವಿ ಮಾಡಲಾಗಿದೆ ಎಂದರು.

ಇದನ್ನೂ ಓದಿ: 53 ಅಡಿ ಗಣಪತಿ ದೇವಸ್ಥಾನದಲ್ಲಿ ಶ್ರೀಗೌರಿ ವಿಸರ್ಜನೆ | ವಿಶೇಷ ಪೂಜೆ, ಅನ್ನ ಸಂತರ್ಪಣೆ

ಸಮುದಾಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಮುಖ ಮನವಿಗಳ ಪೈಕಿ ಎರಡು ಬೇಡಿಕೆಗಳನ್ನು ಕೇವಲ 15 ದಿನಗಳಲ್ಲೇ ಸರ್ಕಾರ ಈಡೇರಿಸಿದೆ. ಉಳಿದ ತಾಂತ್ರಿಕ ತೊಡಕುಗಳಿರುವ ಬೇಡಿಕೆಗಳನ್ನು ಶೀಘ್ರದಲ್ಲೇ ಪರಿಹರಿಸುವ ಭರವಸೆ ಸಿಕ್ಕಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮುದಾಯದ ಏಳಿಗೆಗೆ ಸಂಪೂರ್ಣ ಸಹಕಾರ ಹಾಗೂ ಶಕ್ತಿ ತುಂಬುವ ಭರವಸೆ ನೀಡಿದ್ದಾರೆ ಎಂದರು.

ರೂ. 3 ಕೋಟಿ ವಿದ್ಯಾರ್ಥಿವೇತನ ವಿತರಣೆ: ಕಳೆದ ಸಾಲಿನಲ್ಲಿ ನಿಗಮಕ್ಕೆ ಲಭ್ಯವಿದ್ದ ಅನುದಾನದಲ್ಲಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ರೂ.3 ಕೋಟಿಗೂ ಅಧಿಕ ಮೊತ್ತದ ವಿದ್ಯಾರ್ಥಿವೇತನವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ. ಸಂಪೂರ್ಣ ಪರಿಶೀಲನೆ ನಡೆಸಿ ಪಾರದರ್ಶಕವಾಗಿ ಸೌಲಭ್ಯ ತಲುಪಿಸಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು, ಸ್ಥಳೀಯ ಆರ್ಯವೈಶ್ಯ ಮಂಡಳಿಗಳು ಹಾಗೂ ಸಂಸ್ಥೆಗಳ ನೆರವಿನಿಂದ ಅರ್ಹ ಬಡ ಕುಟುಂಬಗಳ ನಿಖರ ಮಾಹಿತಿ ಸಂಗ್ರಹಿಸಿ, ಸರ್ಕಾರದಿಂದ ಹೆಚ್ಚಿನ ನೆರವು ಕೊಡಿಸಲು ಶ್ರಮಿಸುವುದಾಗಿ ಅವರು ಭರವಸೆ ನೀಡಿದರು.

ಇದನ್ನೂ ಓದಿ: ಭದ್ರಾ ಜಲ ಹರಿವಿನ ಐತಿಹಾಸಿಕ ಸಂಭ್ರಮ | ಸೆ.24ರಂದು ಸಿಎಂ ಶಿವಕುಮಾರ್‌ರಿಂದ ಗಂಗಾಪೂಜೆ | ಸಚಿವ ಚಲುವರಾಯಸ್ವಾಮಿ

ಇದೇ ಸಂದರ್ಭದಲ್ಲಿ ನಿಗಮದ ಯೋಜನೆಗಳ ಕುರಿತಾದ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಜಿಲ್ಲಾ ಆರ್ಯವೈಶ್ಯ ಸಂಘದ ಅಧ್ಯಕ್ಷ ಶಶಿಧರ ಗುಪ್ತ, ನಗರ ಅಧ್ಯಕ್ಷ ಎಲ್.ಇ.ಶ್ರೀನಿವಾಸ ಬಾಬು, ಉಪಾಧ್ಯಕ್ಷರಾದ ಹೆಚ್.ಎಂ.ಮಂಜುನಾಥ್, ಪಿ.ಎಲ್.ಸುರೇಶ್ ಬಾಬು, ಪ್ರಧಾನ ಕಾರ್ಯದರ್ಶಿ ನಾಗರಾಜ್.ಎಸ್, ಎಸ್.ಕೆ.ಪಿ. ಬ್ಯಾಂಕ್ ಅಧ್ಯಕ್ಷ ಪ್ರಾಣೇಶ್, ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಸಾತ್ವಿಕ್, ಅಭಿವೃದ್ಧಿ ಅಧಿಕಾರಿಗಳಾದ ವಿರೇಶ್.ಬಿ.ಟಿ. ದೇವೇಂದ್ರಪ್ಪ ಯಾಳಗಿ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Arya Vaishya CommunityChitradurgaChitradurga newsK.V. RamprasadProjectsಆರ್ಯವೈಶ್ಯ ಸಮುದಾಯಕೆ.ವಿ.ರಾಮ್‌ಪ್ರಸಾದ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಯೋಜನೆಗಳು
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 21 | ರಾಗಿ, ಶೇಂಗಾ ರೇಟ್ ಎಷ್ಟಿದೆ?
Next Article ಮುರುಘಾ ಮಠ ಡಾ.ಕೆ.ಎಂ.ವೀರೇಶ್ ನಿಧನಕ್ಕೆ ಮುರುಘಾಮಠದಿಂದ ಸಂತಾಪ
Leave a Comment

Leave a Reply Cancel reply

Your email address will not be published. Required fields are marked *

ಮುರುಘಾ ಮಠ
ಡಾ.ಕೆ.ಎಂ.ವೀರೇಶ್ ನಿಧನಕ್ಕೆ ಮುರುಘಾಮಠದಿಂದ ಸಂತಾಪ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 21 | ರಾಗಿ, ಶೇಂಗಾ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Pumpkin flower
ಕುಂಬಳಕಾಯಿ ಹೂವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಈ ಪ್ರಯೋಜನ ಪಡೆಯಿರಿ
Life Style
ಬಾಪೂಜಿ‌ ವಿದ್ಯಾಸಂಸ್ಥೆಯ ಕೆ.ಎಂ.ವೀರೇಶ್ ಇನ್ನಿಲ್ಲ
ನಿಧನವಾರ್ತೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up