ಮುಖ್ಯ ಸುದ್ದಿ
ರಂಜಾನ್ ಅರ್ಥಪೂರ್ಣ ಆಚರಣೆ | ಸಾಮೂಹಿಕ ಪ್ರಾರ್ಥನೆ

CHITRADURGA NEWS | 10 APRIL 2024
ಚಿತ್ರದುರ್ಗ: ತ್ಯಾಗ, ಪ್ರೀತಿ, ಶಾಂತಿಯ ಸಂಕೇತವಾದ ರಂಜಾನ್ ಹಬ್ಬವನ್ನು ಜಿಲ್ಲಾದ್ಯಂತ ಮುಸ್ಲಿಮರು ಗುರುವಾರ ಅರ್ಥಪೂರ್ಣವಾಗಿ ಆಚರಿಸಿದರು.
ಚಿತ್ರದುರ್ಗದ ಜಾಮಿಯಾ ಈದ್ಗಾ, ಕೊಹಿನೂರ್ ಈದ್ಗಾ, ತಬ್ಲೀಗಿ ಜಮಾದ್ ಈದ್ಗಾ ಮೈದಾನದಲ್ಲಿ ರಂಜಾನ್ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ,
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಡಿಸಿಸಿ ಅಧ್ಯಕ್ಷ ತಾಜ್‌ಪೀರ್ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಮಾತನಾಡಿದ, ಬಿ.ಎನ್.ಚಂದ್ರಪ್ಪ, ‘ಎಲ್ಲ ಧರ್ಮಗಳ ಆಶಯವೂ ಶಾಂತಿ, ಸೌಹಾರ್ದದಿಂದ ಇರಬೇಕು ಎಂಬುದಾಗಿದೆ. ಅದನ್ನು ಎಲ್ಲರೂ ಪಾಲಿಸಬೇಕು’ ಎಂದರು.
ಕ್ಲಿಕ್ ಮಾಡಿ ಓದಿ: ಮನೆಯಿಂದಲೇ ಮತದಾನಕ್ಕೆ ಡೇಟ್ ಫಿಕ್ಸ್ | ಕೇವಲ ಮೂರು ದಿನ ಅವಕಾಶ
‘ಯಾವುದೇ ಧರ್ಮವೂ ಇನ್ನೊಂದು ಧರ್ಮಕ್ಕೆ ಕೇಡು ಬಯಸುವುದಿಲ್ಲ. ಎಲ್ಲ ಧರ್ಮಗಳು ಸಹೋದರತ್ವವನ್ನೇ ಸಾರಿವೆ ಮತ್ತು ಉತ್ತಮ ವಿಚಾರಗಳನ್ನು ಹೇಳಿವೆ. ಈ ಸೌಹಾರ್ದ ಪರಂಪರೆಯನ್ನು ಎಲ್ಲರೂ ಮುಂದುವರಿಸಿಕೊಂಡು ಹೋಗಬೇಕು. ಸಮಾಜದಲ್ಲಿ ಪ್ರತಿಯೊಬ್ಬರೂ ಸಹಬಾಳ್ವೆಯಿಂದ ಬದುಕಬೇಕು’ ಎಂದು ತಿಳಿಸಿದರು.
