CHITRADURGA NEWS | 31 DECEMBER 2025
ಹೊಳಲ್ಕೆರೆ: ಇಸಾಮುದ್ರ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಸಾಮೂಹಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ ಹಾಗೂ ಧಾರ್ಮಿಕ ಸಮಾರಂಭದಲ್ಲಿ ಶಾಸಕ ಎಂ.ಚಂದ್ರಪ್ಪ ಭಾಗವಹಿಸಿದ್ದರು.
ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿ ಅಂತಿಮ | ಬಿಜೆಪಿಯಿಂದ ಯಾರು ? | ಆಗ್ನೇಯ ಪದವೀದರರ ಕ್ಷೇತ್ರದ ಫೈಟ್
ನಂತರ ಮಾತನಾಡಿದ ಶಾಸಕರು, ದಿನನಿತ್ಯವೂ ಲಕ್ಷೋಪ ಲಕ್ಷ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿ ಹಾಗೂ ವೀರೇಂದ್ರಹೆಗಡೆರವರ ಆಶೀರ್ವಾದದಿಂದ ಐದು ಸಾರಿ ಎಂಎಲ್‍ಎ ಆಗಿದ್ದೇನೆ ಎಂದು ಹೇಳಿದರು.
ಪಟ್ಟಣದ ಮಧ್ಯಭಾಗದಲ್ಲಿ ಅತ್ಯುತ್ತಮ ಜಾಗ ನೀಡಿದ ಪರಿಣಾಮವಾಗಿ ವೀರೇಂದ್ರಹೆಗಡೆರವರು ನಾಲ್ಕು ಕೋಟಿ ರೂ.ಗಳನ್ನು ಖರ್ಚು ಮಾಡಿ ಭವ್ಯವಾದ ಕಟ್ಟಡ ಕಟ್ಟಿದ್ದಾರೆ. ಇಲ್ಲಿ ನಿಮ್ಮ ವ್ಯವಹಾರ ವಹಿವಾಟು ನಡೆಸಿ ಸ್ವಾವಲಂಭಿಯಾಗಿ ಬದುಕುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ. ಮಂಜುನಾಥಸ್ವಾಮಿಯ ಕೃಪಾಕಟಾಕ್ಷ ಎಲ್ಲರ ಮೇಲಿರಲಿ. ಮಕ್ಕಳಿಗೆ ಆಸ್ತಿ ಮಾಡುವ ಬದಲು ಶಿಕ್ಷಣವಂತರನ್ನಾಗಿಸಿ. ಆಗ ಗುರು-ಹಿರಿಯರನ್ನು ಗೌರವಿಸುವಂತ ಸಂಸ್ಕಾರ ಬೆಳೆಯುತ್ತದೆ ಎಂದು ಸ್ವ-ಸಹಾಯ ಸಂಘದ ಮಹಿಳೆಯರಿಗೆ ಕರೆ ನೀಡಿದರು.
ದೇಶದ ಪ್ರಧಾನಿ ನರೇಂದ್ರಮೋದಿರವರು ವೀರೇಂದ್ರ ಹೆಗಡೆರವರ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ರಾಜ್ಯಸಭೆ ಸದಸ್ಯರನ್ನಾಗಿ ಮಾಡಿದ್ದಾರೆ. ಕೋಗುಂಡೆ, ಇಸಾಮುದ್ರ ಯಳಗೋಡು ಸೇರಿದಂತೆ ಎಲ್ಲಾ ಪಂಚಾಯಿತಿಗಳಿಗೆ ಹಿರಿಯೂರಿನ ವಾಣಿ ವಿಲಾಸ ಸಾಗರದಿಂದ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ 300 ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದ್ದೇನೆ.
ಇದನ್ನೂ ಓದಿ: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ | ಚಿತ್ರದುರ್ಗದಲ್ಲಿ ಜನವರಿ 30 ರಂದು ಉದ್ಯೋಗ ಮೇಳ
ಇನ್ನು ಹದಿನೈದು ದಿನದೊಳಗೆ ಪೂಜೆ ಮಾಡಿ ಒಂದು ವರ್ಷದಲ್ಲಿ ನೀರು ಸರಬರಾಜು ಮಾಡಲಾಗುವುದು. ಎಲ್ಲಾ ಸರ್ಕಾರಿ ಶಾಲೆಯ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ಉಚಿತವಾಗಿ ಬಸ್‍ಗಳನ್ನು ಬಿಟ್ಟಿದ್ದೇನೆ. ಸದ್ಯದಲ್ಲಿಯೇ ಭರಮಸಾಗರದ ಕಡೆಗೂ ಉಚಿತ ಬಸ್‍ಗಳ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು.
ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಎಲ್ಲಾ ಕೆರೆಗಳಿಗೆ ನೀರು ತುಂಬಿಸಿದ ಪರಿಣಾಮ ತಾಲ್ಲೂಕಿನಾದ್ಯಂತ ಕೆರೆಗಳು ತುಂಬಿ ತುಳುಕುತ್ತಿವೆ. ರೈತರ ತೋಟಗಳು ಒಣಗಬಾರದೆಂದು ಅಜ್ಜಪ್ಪನಹಳ್ಳಿ ಬಳಿ 250 ಕೋಟಿ ರೂ.ಗಳ ವೆಚ್ಚದಲ್ಲಿ ದೊಡ್ಡ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸುತ್ತಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಇದನ್ನೂ ಓದಿ: ಆಗ್ನೇಯ ಪದವೀಧರರ ಕ್ಷೇತ್ರ | ಮತದಾರರ ಅಂತಿಮ ಪಟ್ಟಿ ಪ್ರಕಟ | ಜಿಲ್ಲೆಯಲ್ಲಿ 41,358 ಮತದಾರರು
ಭರಮಸಾಗರ ಬಿಜೆಪಿ.ಮಂಡಲ ಅಧ್ಯಕ್ಷ ಎನ್.ಟಿ.ಬಸವರಾಜ್, ಡಿ.ಎಸ್.ಪ್ರವೀಣ್‍ಕುಮಾರ್, ಮಂಜುನಾಥ, ಕಮಲಾಕ್ಷ, ಕೆ.ಎಸ್.ಸಿದ್ದಬಸಪ್ಪ, ಶಾಂತ ಅಶೋಕ್, ರವಿಚಂದ್ರ ಇನ್ನು ಮುಂತಾದವರು ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
