ಮುಖ್ಯ ಸುದ್ದಿ
ಮುರುಘಾಮಠ | ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ 14 ನವಜೋಡಿ ದಾಂಪತ್ಯಕ್ಕೆ ಪದಾರ್ಪಣೆ

CHITRADURGA NEWS | 05 APRIL 2025
ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆದ 35ನೇ ವರ್ಷದ ನಾಲ್ಕನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸಮದಲ್ಲಿ 14 ನವಜೋಡಿಗಳು ದಾಂಪತ್ಯಕ್ಕೆ ಪದಾರ್ಪಣೆ ಮಾಡಿದರು.
Also Read: ಬೆಸ್ಕಾಂ ಎಇಇ ಸೇರಿ ಮೂರು ಜನರಿಗೆ ಜೈಲು ಶಿಕ್ಷೆ | ವಿದ್ಯುತ್ ತಗುಲಿ ಬಾಲಕ ಮೃತಪಟ್ಟಿದ್ದ ಪ್ರಕರಣ
ಸಾಮೂಹಿಕ ಕಲ್ಯಾಣ ಮಹೋತ್ಸಮದ ಅಧ್ಯಕ್ಷತೆ ವಹಿಸಿದ್ದ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಪಿ.ಎಸ್.ಶಂಕರ್ ಮಾತನಾಡಿ, 12ನೇ ಶತಮಾನದ ವಚನಕಾರರು ಕಾಯಕ, ದಾಸೋಹಕ್ಕೆ ಪ್ರಾಧಾನ್ಯತೆ ನೀಡಿ, ಸಮ ಸಮಾಜಕ್ಕಾಗಿ ಪ್ರಯತ್ನಿಸಿದರು.
ದುಡಿಯುವ ವರ್ಗದಲ್ಲಿ ಜಾತಿ ಅಸ್ಪೃಶ್ಯತೆ ಇರುವುದಿಲ್ಲ. ಪ್ರತಿಯೊಬ್ಬರು ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು. ಕಾಯಕದಲ್ಲಿ ಪ್ರಾಮಾಣಿಕತೆ ಇದ್ದಾಗ ಮಾತ್ರ ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಹೇಳಿದರು.
ವಿವಾಹಗಳು ಸರಳವಾಗಿರಬೇಕು. ಬದುಕನ್ನು ಸರಳಗೊಳಿಸಿಕೊಳ್ಳಬೇಕು. ಉತ್ತಮ ಸಂಸ್ಕಾರ, ಸಂಸ್ಕೃತಿಯನ್ನು ಬೆಳೆಸಿಕೊಂಡು ಮುಂದಿನ ಪೀಳಿಗೆಗೆ ಶ್ರೇಷ್ಠ ದಾರಿ ಮಾಡಿಕೊಡಬೇಕು.
Also Read: ಗೋವಿಂದ ಕಾರಜೋಳ ಭಾಷಣಕ್ಕೆ ಆಕ್ಷೇಪ | ಆರೆಸ್ಸೆಸ್ಸ್, ಮೋಹನ್ ಭಾಗವತ್ ಹೆಸರಿಗೆ ತಕರಾರು
ಶ್ರೀಮಠದಲ್ಲಿ 35 ವರ್ಷಗಳಿಂದ ನಿರಂತರವಾಗಿ ವಿವಾಹ ಕಾರ್ಯಕ್ರಮ ನಡೆದುಕೊಂಡು ಬರುತ್ತಿರುವುದು ಶ್ಲಾಘನೀಯ.
ದಿವ್ಯಸಾನ್ನಿಧ್ಯ ವಹಿಸಿದ್ದ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿ, ಸಾರ್ವಜನಿಕವಾಗಿ ಗುರುತಿಸಿಕೊಂಡಿರುವುದರಿಂದ ಶ್ರೀಮಠವು ಜನಸಾಮಾನ್ಯರಿಗೆ ಸಾಮೂಹಿಕ ಕಲ್ಯಾಣ ಮಹೋತ್ಸವವನ್ನು ಪ್ರತಿತಿಂಗಳು ನಡೆಸುತ್ತಿದೆ.
ದುಂದುವೆಚ್ಚ ಮಾಡದೆ, ಆದರ್ಶ ವಿವಾಹಕ್ಕೆ ಒಳಗಾಗಿರುವ ಇಂದಿನ ನವಜೋಡಿಗಳು ಮುಂದಿನ ಜನರಿಗೆ ದಾರಿ ದೀಪವಾಗಬೇಕು. ಶ್ರೀಮಂತರು ಅದ್ಧೂರಿಯಾಗಿ ಮದುವೆ ಮಾಡುತ್ತಾರೆ. ಇಂತಹ ದುಂದುವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ನಾವು ಇತರರಿಗೆ ಮಾದರಿಯಾಗುವಂತೆ ಬದುಕಬೇಕು ಎಂದರು.
ಡಾ. ಬಸವಪ್ರಭು ಸ್ವಾಮೀಜಿ ಮಾತನಾಡಿ, ಸಂಸಾರ ಎನ್ನುವುದು ಸಾಗರ ಇದ್ದ ಹಾಗೆ. ಸಂಸಾರದಲ್ಲಿ ಪ್ರೀತಿ, ನಂಬಿಕೆ, ವಿಶ್ವಾಸ ಇರಬೇಕು ಎಂದು ಹೇಳಿದರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಶ್ರೀ ಬಸವನಾಗಿದೇವ ಸ್ವಾಮಿಗಳು ಮಾತನಾಡಿದರು.
ಜಮುರಾ ಕಲಾವಿದ ಉಮೇಶ್ ಪತ್ತಾರ್ ಪ್ರಾರ್ಥನೆ ಮಾಡಿದರು. ವಿಜಯದೇವರು ಸ್ವಾಗತಿಸಿದರು. ಟಿ.ಪಿ. ಜ್ಞಾನಮೂರ್ತಿ ಕಾರ್ಯಕ್ರಮ ನಿರೂಪಿಸಿದರು.
