Connect with us

Protest; ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಚಿತ್ರದುರ್ಗದಲ್ಲಿ ಶೋಷಿತ ಸಮುದಾಯಗಳಿಂದ ಬೃಹತ್ ಪ್ರತಿಭಟನೆ 

ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಚಿತ್ರದುರ್ಗದಲ್ಲಿ ಶೋಷಿತ ಸಮುದಾಯಗಳಿಂದ ಬೃಹತ್ ಪ್ರತಿಭಟನೆ 

ಮುಖ್ಯ ಸುದ್ದಿ

Protest; ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಚಿತ್ರದುರ್ಗದಲ್ಲಿ ಶೋಷಿತ ಸಮುದಾಯಗಳಿಂದ ಬೃಹತ್ ಪ್ರತಿಭಟನೆ 

CHITRADURGA  NEWS | 06 AUGUST 2024

ಚಿತ್ರದುರ್ಗ: ಯಾವುದೇ ಕಪ್ಪು ಚುಕ್ಕೆಯಿಲ್ಲದೆ 2ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರನ್ನು ಹಗರಣದಲ್ಲಿ ಸಿಲುಕಿಸಲು ಬಿಜೆಪಿ ಮತ್ತು ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹೊರಟಿರುವುದಕ್ಕೆ ಪ್ರತಿಯಾಗಿ ಚಿತ್ರದುರ್ಗದಲ್ಲಿ ಬೃಹತ್ ಪ್ರತಿಭಟನೆ(Protest) ನಡೆಸಲಾಯಿತು.

ಕ್ಲಿಕ್ ಮಾಡಿ ಓದಿ: Devotees meating: ಸಿರಿಗೆರೆ, ಸಾಣೇಹಳ್ಳಿ ಮಠಗಳಿಗೆ ಉತ್ತರಾಧಿಕಾರಿ ನೇಮಕಕ್ಕೆ ಭಕ್ತರ ಪಟ್ಟು | ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ನಡೆದ ಸಭೆ

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆ ಉದ್ದೇಶಿಸಿ ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ, ಬಿಜೆಪಿ-ಜೆಡಿಎಸ್ ಅಧಿಕಾರದಲ್ಲಿದ್ದಾಗ ನಡೆಸಿದ ಅವ್ಯವಹಾರ, ಭ್ರಷ್ಠಾಚಾರ, ಸ್ವಜನಪಕ್ಷಪಾತ ಮರೆತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹೊರಟಿದ್ದಾರೆ.

ವಾಲ್ಮೀಕಿ ಅಭಿವೃದ್ದಿ ನಿಗಮ ಹಾಗೂ ಮುಡಾ ನಿವೇಶನ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರವಿಲ್ಲ. ನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಪ್ರಜಾಪ್ರಭುತ್ವಕ್ಕೆ ಅಪಚಾರವೆಸಗಿ, ವಾಮ ಮಾರ್ಗದಿಂದ ಅಧಿಕಾರ ಹಿಡಿದಿದ್ದ ವಿರೋಧಿಗಳು ವಿನಾ ಕಾರಣ ತೇಜೋವಧೆ ಮಾಡಲು ಹೊರಟಿದ್ದಾರೆ ಎಂದರು.

ಕ್ಲಿಕ್ ಮಾಡಿ ಓದಿ: Mallikarjuna Swamiji: ಮಲ್ಲಿಕಾರ್ಜುನ ಸ್ವಾಮೀಜಿ 30ನೇ ಸ್ಮರಣೋತ್ಸವ | ಒಂಟಿಕಂಬದ ಮಠದಲ್ಲಿ ಸಿದ್ಧತೆ

ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಚಿತ್ರದುರ್ಗದಲ್ಲಿ ಶೋಷಿತ ಸಮುದಾಯಗಳಿಂದ ಬೃಹತ್ ಪ್ರತಿಭಟನೆ

ಸಮಸ್ತ ಶೋಷಿತ ಸಮುದಾಯ ಸಿದ್ದರಾಮಯ್ಯನವರ ಪರವಾಗಿದೆ. ಎದೆಗುಂದುವುದು ಬೇಡ. ಬಿಜೆಪಿ, ಜೆಡಿಎಸ್ ಕುತಂತ್ರ ನಡೆಯಲ್ಲ. 9 ರಂದು ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹೋಗೋಣ ಎಂದು ಹೇಳಿದರು.

ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್ ಮಾತನಾಡಿ, ಸಾಮಾಜಿಕ ನ್ಯಾಯದ ಹರಿಕಾರ, ಬಡವರ ಪರವಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಮತ್ತು ಜೆಡಿಎಸ್ ಕುತಂತ್ರ ನಡೆಸುತ್ತಿದೆ.

ಯಾವುದೇ ಕಳಂಕವಿಲ್ಲದೆ ಅಧಿಕಾರ ನಡೆಸುತ್ತಿರುವ ಸಿದ್ದರಾಮಯ್ಯನವರ ವಿರುದ್ದ ಪಿತೂರಿ ನಡೆಸುತ್ತಿರುವ ವಿರೋಧಿಗಳು ರಾಜ್ಯಪಾಲರ ಮೂಲಕ ನೋಟಿಸ್ ಕೊಡಿಸಿರುವುದರಲ್ಲಿ ಅರ್ಥವಿಲ್ಲ. ರಾಜ್ಯಪಾಲರ ವಿರುದ್ದ ಗೋಬ್ಯಾಕ್ ಚಳುವಳಿ ನಡೆಸುವುದಾಗಿ ಎಚ್ಚರಿಸಿದರು.

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಬಿ.ಟಿ.ಜಗದೀಶ್ ಮಾತನಾಡಿ, ಸಿದ್ದರಾಮಯ್ಯನವರು ಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿ, ಉಪ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಸ್ವಚ್ಚ ಆಡಳಿತ ನಡೆಸುತ್ತಿರುವುದು ವಿರೋಧ ಪಕ್ಷಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ.

ಕ್ಲಿಕ್ ಮಾಡಿ ಓದಿ: VV Sagar: ವಿವಿ ಸಾಗರದತ್ತ ಭದ್ರೆ ಪಯಣ | ಬೆಟ್ಟದಾವರೆ ಮೋಟರ್‌ ಪಂಪ್‌ ಚಾಲನೆ

ಇಲ್ಲಿಯವರೆಗೂ ಹದಿನೈದು ಬಜೆಟ್ ಮಂಡಿಸಿ ಎಲ್ಲಾ ನಿಗಮಗಳಿಗೂ ಹಣ ಮಂಜೂರು ಮಾಡಿದ್ದಾರೆ. ಅದರ ನಿರ್ವಹಣೆ ಏನಿದ್ದರು ವ್ಯವಸ್ಥಾಪಕ ನಿರ್ದೇಶಕರಿಗೆ ಸೇರಿದ್ದು, ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಭಾಗಿಯಾಗಿಲ್ಲ, ಸಿದ್ದರಾಮಯ್ಯನವರಿಗೆ ರಾಜ್ಯಪಾಲರು ನೀಡಿರುವ ನೋಟಿಸ್ ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಶೋಷಿತ ಸಮುದಾಯಗಳು ಒಂದಾಗಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಡಾ.ಕೆ. ಅನ್ವರ್ ಭಾಷಾ, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಸೇರಿದಂತೆ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು, ಕಾರ್ಯಕರ್ತರು ಇದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version