
CHITRADURGA NEWS | 12 JUNE 2024
ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ರಾಜ್ಯದಲ್ಲೇ ತಲ್ಲಣ ಸೃಷ್ಟಿಸಿದೆ. ಪ್ರಕರಣ ಖಂಡಿಸಿ ಕೋಟೆನಾಡಿನಲ್ಲಿ ಬುಧವಾರ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ.
ಬೆಳಗ್ಗೆ 11 ಗಂಟೆಗೆ ನಗರದ ನೀಲಕಂಠ ದೇವಸ್ಥಾನದಿಂದ ಪ್ರತಿಭಟನೆ ಪ್ರಾರಂಭವಾಗಲಿದ್ದು, ಜಿಲ್ಲಾಧಿಕಾರಿ ಕಚೇರಿವರೆಗೆ ರ‍್ಯಾಲಿ ಸಾಗಲಿದೆ. ಉನ್ನತ ಮಟ್ಟದ ತನಿಖೆಗೆ ಸಂಘಟನೆಗಳು ಆಗ್ರಹಿಸುತ್ತಿವೆ.
ಪ್ರತಿಭಟನೆಗೆ ವಿಎಚ್‌ಪಿ, ಭಜರಂಗದಳ, ವೀರಶೈವ ಸಮಾಜ, ವೀರಶೈವ ಲಿಂಗಾಯತ ಮಹಾಸಭಾ, ಜಂಗಮ ಸಮುದಾಯ ಸೇರಿದಂತೆ ಹಲವು ಸಮುದಾಯಗಳು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿವೆ.
ಕ್ಲಿಕ್ ಮಾಡಿ ಓದಿ: ನಟ ದರ್ಶನ್‍ಗೆ ನನ್ನ ಮಗನಿಗೆ ಬಂದ ಸ್ಥಿತಿ ಬರಲಿ

‘ರೇಣುಕಾಸ್ವಾಮಿ ಮುಗ್ಧನಾಗಿದ್ದು, ಅವರ ಕೊಲೆಗೆ ನ್ಯಾಯ ಸಿಗಬೇಕು. ಮುಂದೆ ಇಂತಹ ಘಟನೆಗಳು ನಡೆಯಬಾರದು. ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು’ ಎಂದು ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.
ಇದು ಕೇವಲ ಒಬ್ಬ ವ್ಯಕ್ತಿಯ ಕೊಲೆಯಲ್ಲ. ಬದಲಿಗೆ, ಮಾನವೀಯತೆ, ಮನುಷ್ಯತ್ವದ ಕೊಲೆ. ಕಾನೂನು ಕೈಗೆತ್ತಿಕೊಂಡು ಕೃತ್ಯ ಎಸಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾದವರಿಗೆ ತಕ್ಕ ಶಿಕ್ಷೆ ಆಗಬೇಕಿದೆ. ನ್ಯಾಯಯುತ ತನಿಖೆ ಆಗಬೇಕು, ಅನ್ಯಾಯಕ್ಕೆ ಅವಕಾಶ ನೀಡಬಾರದು ಎಂದು ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಪ್ರತಿಕ್ರಿಯಿಸಿದ್ದಾರೆ.
ರೇಣುಕಾಸ್ವಾಮಿ ಹಂತಕರಿಗೆ ಶಿಕ್ಷೆ ಆಗಬೇಕು ಎಂದು ವೀರಶೈವ ಸಮಾಜದ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಎಸ್ಎಂಎಲ್ ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ.
ಕೃತ್ಯಕ್ಕೆ ಕಾರಣರಾದವರು ಎಷ್ಟೇ ದೊಡ್ಡವರಾಗಿರಲಿ, ಯಾವುದೇ ಪ್ರಭಾವಕ್ಕೆ ಒಳಗಾಗದೇ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಸಮಾಜಘಾತುಕ ಕೃತ್ಯ ನಡೆಸಿದವ ರನ್ನು ಕಾನೂನಿನಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡದೆ ಶಿಕ್ಷೆಗೆ ಒಳಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
