CHITRADURGA NEWS | 17 JANUARY 2026
ಚಿತ್ರದುರ್ಗ: ನಗರದ ಹೊರವಲಯದ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಆವರಣದಲ್ಲಿ ಆದಿಶಕ್ತಿ ಶ್ರೀ ಮಾತಂಗೇಶ್ವರಿ ದೇವಸ್ಥಾನ ನಿರ್ಮಾಣಕ್ಕೆ ಸಂಕಲ್ಪ ಮಾಡಲಾಗಿದೆ. ಜನವರಿ 20 ರಂದು ಬೆಳಗ್ಗೆ 10.30ರಂದು ದೇಗುಲ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಲಿದೆ ಎಂದು ಶಿವಶರಣ ಶ್ರೀ ಮಾದಾರ ಚನ್ನಯ್ಯ ಸೇವಾ ಸಮಿತಿ ರಾಜ್ಯಾಧ್ಯಕ್ಷ ಮಂಜುನಾಥ್ ಹೂಡಿ ತಿಳಿಸಿದರು.
ಶ್ರೀಮಠದ 20 ಗುಂಟೆ ಜಾಗದಲ್ಲಿ ಸುಮಾರು 4 ಕೋಟಿ ರೂ.ವೆಚ್ಚದಲ್ಲಿ ಭವ್ಯ ದೇಗುಲ ನಿರ್ಮಾಣವಾಗಲಿದ್ದು, ಅಯೋಧ್ಯೆ ಶ್ರೀರಾಮ ವಿಗ್ರಹ ಕೆತ್ತನೆ ಮಾಡಿದ್ದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಮಾತಂಗೇಶ್ವರಿ ದೇವಿಯ ವಿಗ್ರಹ ಕೆತ್ತನೆ ಮಾಡಲಿದ್ದಾರೆ ಎಂದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 17 | ಹತ್ತಿ ರೇಟ್ ಎಷ್ಟಿದೆ?
ಈ ಸಂಬಂಧ ಶನಿವಾರ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಂಜುನಾಥ್ ಹೂಡಿ ವಿವರಿಸಿದರು. ಭೂಮಿ ಪೂಜೆಕಾರ್ಯಕ್ರಮದಲ್ಲಿ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ , ಶ್ರೀ ಬಸವಮೂರ್ತಿ ಮಾದರಚನ್ನಯ್ಯ ಸ್ವಾಮೀಜಿ, ಹಂಪಿ ಹೇಮಕೂಟದ ಶ್ರೀ ಪೂರ್ಣಾನಂದ ಭಾರತಿ ಸ್ವಾಮೀಜಿ, ಹಿರಿಯೂರು ಆದಿಜಾಂಬವ ಮಠದ ಶ್ರೀ ಞಷಡಾಕ್ಷರಮುನಿ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.
ಮೈಸೂರು ಮತ್ತು ಕೊಡಗು ಸಂಸದರಾದ ಯದುವೀರ ಕೃಷ್ಣದತ್ತ ಒಡೆಯರ್ ಕಾರ್ಯಕ್ರಮ ಉದ್ಘಾಟಿಸುವರು. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಶಂಕುಸ್ಥಾಪನೆ ನೆರವೇರಿಸುವರು.
ಇದನ್ನೂ ಓದಿ: ಅಡಿಕೆ ಧಾರಣೆ | 17 ಜನವರಿ | ಇಂದಿನ ಅಡಿಕೆ ರೇಟ್
ಇದೇ ವೇಳೆ ಮಾದಾರ ಚನ್ನಯ್ಯ ಗುರುಪೀಠದಿಂದ ಹೊರಬರಲಿರುವ ಹೊಸ ಮಾಸ ಪತ್ರಿಕೆ ʼ ಶರಣರ ಚೆನ್ನುಡಿʼಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಲೋಕಾರ್ಪಣೆ ಮಾಡಲಿದ್ದಾರೆ. ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್ ಕ್ಯಾಲೆಂಡರ್ ಬಿಡುಗಡೆ ಮಾಡುವರು. ಮುಖ್ಯ ಅತಿಥಿಗಳಾಗಿ ಕೇಂದ್ರದ ಮಾಜಿ ಸಚಿವರಾದ ಎ.ನಾರಾಯಣಸ್ವಾಮಿ, ಮಾಜಿ ಸಚಿವರಾದ ಎಚ್.ಆಂಜನೇಯ, ಎಂ.ಶಿವಣ್ಣ, ಶಾಸಕ ಬಸವರಾಜು ಮತ್ತಿಮೋಡು, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕ ತಿಮ್ಮರಾಯಪ್ಪ ಭಾಗವಹಿಸುವರು. ಸಂಸದ ಗೋವಿಂದ ಎಂ ಕಾರಜೋಳ, ಶಾಸಕರಾದ ಟಿ.ರಘುಮೂರ್ತಿ, ದುರ್ಯೋಧನ ಐಹೊಳೆ ಮತ್ತಿತರರು ಭಾಗವಹಿಸುವರು.
ಇದೇ ಸಂದರ್ಭದಲ್ಲಿ ಶ್ರೀ ಬಸವಮೂರ್ತಿ ಮಾದಾಚನ್ನಯ್ಯ ಶ್ರೀಗಳ ಪೂರ್ವಾಶ್ರಮದ ಪ್ರಾಥಮಿಕ ಪ್ರೌಢಶಾಲಾ ಶಿಕ್ಷಕರಾದ, ನಿವೃತ್ತ ಶಿಕ್ಷಕರಾದ ಟಿ.ಬಸವರಾಜಪ್ಪ, ಮಸ್ರತ್‌ನಾಜ್ ಬೇಗಂ, ಡಿ.ಟಿ.ವೆಂಕಟೇಶ್‌ರೆಡ್ಡಿ, ಎಚ್.ಎಸ್.ಲಲಿತಮ್ಮ, ಬಸವರಾಜಪ್ಪ, ಎ.ಆರ್.ಶಿವಮೂರ್ತಿ ಅವರಿಗೆ ಗುರುವಂದನೆ ಸಲ್ಲಿಸಲಾಗುವುದು. ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಕೆಳಗೋಟೆ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ದಶಕದ ಕನಸು ಭದ್ರೆಗೆ ಅನುದಾನ ಕೊರತೆ ಬೇಸರದ ವಿಚಾರ | ಪಿ.ಕೋದಂಡರಾಮಯ್ಯ
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಕೆ.ಜಿ.ಜಗದೀಶ್, ಶ್ರೀ ಶಿವಶರಣ ಮಾದರಚನ್ನಯ್ಯ ಸೇವಾ ಸಮಿತಿ ರಾಜ್ಯ ಉಪಾಧ್ಯಕ್ಷ ರವಿ ಮಲ್ಲಾಪುರ, ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಿ.ಪ್ರೇಮನಾಥ್, ಸಮಾಜ ಕಲ್ಯಾಣ ಇಲಾಖೆ ನಿವೃತ್ತ ಅಧಿಕಾರಿ ಡಿ.ಟಿ.ಜಗನ್ನಾಥ್, ಮತ್ತಿತರು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
