CHITRADURGA NEWS | 07 AUGUST 2025
ಚಿತ್ರದುರ್ಗ: ಶ್ರಾವಣ ಮಾಸದ ನೂಲು ಹುಣ್ಣಿಮೆ ನಿಮಿತ್ತ ಪ್ರತಿ ವರ್ಷದಂತೆ ನಗರದ ಬುರುಜನಹಟ್ಟಿ ಗರಡಿಮನೆಯಲ್ಲಿ ಆಗಸ್ಟ್ 9 ರಂದು ಮಟ್ಟಿ ಪೂಜಾ ಮಹೋತ್ಸವ ಆಯೋಜಿಸಲಾಗಿದೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಹತ್ತಿ ರೇಟ್ ಎಷ್ಟಿದೆ?
ಬುರುಜನಹಟ್ಟಿ ಗರಡಿಮನೆ ಯುವಕರ ಸಂಘದಿಂದ ನಡೆಸಲಾಗುವ ಮಟ್ಟಿಪೂಜಾ ಮಹೋತ್ಸವದಲ್ಲಿ ಶ್ರೀ ಆಂಜನೇಯಸ್ವಾಮಿ, ಶ್ರೀ ಗೋಪಾಲಕೃಷ್ಣಸ್ವಾಮಿ, ಬೇತಾಳ ಸ್ವಾಮಿ ಹಾಗೂ ಮಟ್ಟಿಗೆ ವಿಶೇಷ ಅಲಂಕಾರದೊಂದಿಗೆ ಆಗಸ್ಟ್ 9ರ ಸಂಜೆ 7ಕ್ಕೆ ಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗಿಸಲಾಗುತ್ತದೆ.
ಆಗಸ್ಟ್ 10ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮಟ್ಟಿಯಲ್ಲಿ ತೆಂಗಿನಕಾಯಿ ಹುಡುಕಾಟದಲ್ಲಿ ವಿಜೇತರಾದವರಿಗೆ ವರ್ಷದ ಪೈಲ್ವಾನ್ ಎಂದು ಬಿರುದು ನೀಡಿ ಬಹುಮಾನ ನೀಡಲಾಗುತ್ತದೆ.
ಇದನ್ನೂ ಓದಿ: ರಾಜ್ಯ ಪ್ರಶಸ್ತಿಗೆ ಅರ್ಜಿ ಅಹ್ವಾನ
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಿ, ತನು ಮನ ಧನದೊಂದಿಗೆ ಸಹಕರಿಸಬೇಕು ಎಂದು ಸಂಘದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
