CHITRADURGA NEWS | 28 JANUARY 2026
ಚಿತ್ರದುರ್ಗ: ತಾಲ್ಲೂಕಿನ ಭೀಮಸಮುದ್ರ ಬಳಿಯಿರುವ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವ ಫೆಬ್ರವರಿ 22 ರಿಂದ 27ರವರೆಗೆ ನಡೆಯಲಿದೆ ಎಂದು ದೇವಸ್ಥಾನದ ಟ್ರಸ್ಟ್ ನಾ ಉಪಾಧ್ಯಕ್ಷರಾದ ಬಿ.ಎಸ್.ವಿಶ್ವನಾಥಪ್ಪ ಪಟೇಲ್ ತಿಳಿಸಿದ್ದಾರೆ.

ಇದನ್ನೂ ಓದಿ: 2 ದಿನ ರೈತರಿಗೆ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಫೆ.22 ರಂದು ರುದ್ರಾಭಿಷೇಕ, ಕಂಕಣಧಾರಣೆ, ಪಲ್ಲಕ್ಕಿ ಉತ್ಸವ, ಧ್ವಜಾರೋಹಣ ಸೇವೆ, 23ರಂದು ಅಶ್ವೋತ್ಸವ, ಫೆ.24 ರಂದು ವೃಷಭೋತ್ಸವ, ಫೆ.25 ರಂದು ಹೂವಿನ ಉತ್ಸವ, ಗಜೋತ್ಸವ, 10 ಗಂಟೆಗೆ ಕೆಂಡದಾರ್ಚನೆ ಸೇವೆ, ಫೆ.26 ರಂದು ಬೆಳಿಗ್ಗೆ 11 ಗಂಟೆಗೆ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.
ಈ ಸಂದರ್ಭದಲ್ಲಿ ಮಧು-ವರನಿಗೆ ಬಟ್ಟೆ, ವಧುವಿಗೆ ತಾಳಿಯನ್ನು ನೀಡಲಾಗುವುದು. ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವವರು ದೇವಸ್ಥಾನದಲ್ಲಿ ಹೆಸರನ್ನು ನೊಂದಾಯಿಸಬಹುದಾಗಿದೆ.
ಸಂಜೆ 4 ಗಂಟೆಗೆ ಹೂವಿನ ಅಡ್ಡಪಲ್ಲಕ್ಕಿ, ನಂತರ 5 ಗಂಟೆಗೆ ಸ್ವಾಮಿಯ ರಥೋತ್ಸವ ಕಾರ್ಯಕ್ರಮ ನಡೆಯಲಿದೆ. ಜಾತ್ರೆಗೆ ಆಗಮಿಸಿದ ಭಕ್ತಾಧಿಗಳಿಗೆ ಅನ್ನ ದಾಸೋಹವನ್ನು ಏರ್ಪಡಿಸಲಾಗಿದೆ.
ಫೆ.27 ರಂದು ಕಂಕಣ ವಿಸರ್ಜನೆ ಹಾಗೂ ಮಹಾಮಂಗಳಾರತಿಯೊಂದಿಗೆ ಸ್ವಾಮಿಯ ರಥೋತ್ಸವದ ಸೇವೆಗಳು ಮುಕ್ತಾಯವಾಗಲಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
