
ಚಿತ್ರದುರ್ಗ ನ್ಯೂಸ್.ಕಾಂ: ಭಾರತ-ಪಾಕಿಸ್ತಾನದ ನಡುವೆ ನಡೆಯುತ್ತಿರುವ ಕ್ರಿಕೇಟ್ ಪಂದ್ಯದಲ್ಲಿ ಭಾರತ ತಂಡದ ಗೆಲುವು ಸಾಧಿಸಲಿ ಎಂದು ಪ್ರಾರ್ಥಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ನಗರದ ರಾಜ ಉತ್ಸವಾಂಬ ಶ್ರೀ ಉಚ್ಚಂಗಿಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
ವಿಶ್ವದಲ್ಲೇ ಅತೀ ದೊಡ್ಡ ಕ್ರೀಡಾಂಗಣ ಎಂದು ಹೆಸರಾಗಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಎರಡು ದೇಶಗಳ ನಡುವೆ ಕ್ರಿಕೇಟ್ ಕದನ ನಡೆಯುತ್ತಿದ್ದು, ಇದರಲಿ ಭಾರತ ಗೆದ್ದ ಗೆಲ್ಲುತ್ತದೆ ಎಂದು ಕಾರ್ಯಕರ್ತರು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಸಿರಿಗೆರೆಯಲ್ಲಿ ಹೈವೋಲ್ಟೇಜ್ ಸಭೆ: ಸದ್ಧರ್ಮ ನ್ಯಾಯಪೀಠಕ್ಕೆ ಅಧಿಕಾರಿಗಳ ದೌಡು
ಭಾರತ ತಂಡದ ಈ ಪ್ರಾರ್ಥನೆಯಲ್ಲಿ ನೂರಾರು ವಿದ್ಯಾರ್ಥಿನಿಯರು ಭಾಗವಹಿಸಿ ಭಾರತ ತಂಡದ ಪರವಾಗಿ ಜಯ ಘೋಷಣೆ ಹಾಕಿದರು.
ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಉಪಾಧ್ಯಕ್ಷೆ ರತ್ನಮ್ಮ, ಕಾರ್ಯದರ್ಶಿ ಜಗದೀಶ್, ವಿಶ್ವನಾರಾಯಣಮೂರ್ತಿ, ಮಣಿಕಂಠ, ಅಖಿಲೇಶ್, ಮಹಮದ್ ರಫಿ, ಪ್ರದೀಪ್ ಆರ್. ಅವಿನಾಶ್, ಅಭಿμÉೀಕ್, ನಾಗರಾಜ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
