
CHITRADURGA NEWS | 02 AUGUST 2024
ಚಿತ್ರದುರ್ಗ: ನಗರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ(MBBS) ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣವನ್ನು ನಿಸ್ಪಕ್ಷಪಾತವಾಗಿ ತನಿಖೆ ಮಾಡುವಂತೆ ಎಬಿವಿಪಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.
ಕ್ಲಿಕ್ ಮಾಡಿ ಓದಿ: BEST FORMER: ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚನ್ನರಾಯಪಟ್ಟಣ ಮೂಲದ ಮನೋಜ್ ಎಂಬ ವೈದ್ಯಕೀಯ ಶಿಕ್ಷಣದ ಎರಡನೇ ವರ್ಷದ ವಿದ್ಯಾರ್ಥಿಯು ಚಿತ್ರದುರ್ಗ ನಗರದ ಬಸವೇಶ್ವರ ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಬುಧವಾರ ರಾತ್ರಿ ಅದೇ ವಿದ್ಯಾರ್ಥಿನಿಲಯದ ಜೆ.ಎಂ.ಐ.ಟಿ ಕ್ಯಾಂಪಸ್‌ನಲ್ಲಿದ್ದಂತಹ ನಿಲಯದ ಕೊಠಡಿಯಲ್ಲಿ ಆತ್ಯಹತ್ಯೆಗೆ ಶರಣಾಗಿರುತ್ತಾರೆ.
ಈ ಹಿನ್ನಲೆಯಲ್ಲಿ ವಿದ್ಯಾರ್ಥಿಯ ಸಾವಿಗೆ ಕಾರಣವನ್ನು ಸೂಕ್ತವಾದ ಹಾಗೂ ನಿಷ್ಪಕ್ಷಪಾತವಾದ ತನಿಖೆಯ ಮೂಲಕ ವಿದ್ಯಾರ್ಥಿಯ ಸಾವಿಗೆ ನ್ಯಾಯ ಒದಗಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಕ್ಲಿಕ್ ಮಾಡಿ ಓದಿ: Child marriage: ಬಾಲ್ಯ ವಿವಾಹ ಪ್ರಕರಣ | ಎಫ್‌ಐಆರ್ ದಾಖಲು
ಈ ವೇಳೆ ನಗರ ಕಾರ್ಯದರ್ಶಿ ಗೋಪಿ, ಸಾಮಾಜಿಕ ಜಾಲತಾಣ ವಿಭಾಗದ ಚಿತ್ರಸ್ವಾಮಿ, ಹಾಸ್ಟೆಲ್ ಪ್ರಮುಖ್ ಪಿ.ಕೆ.ಸುದೀಪ್, ಕಾರ್ಯಕರ್ತರಾದ ಸಂಜಯ್, ನಿತೀಶ್, ಅನಿಲ್, ವರವೇಶ್, ಪ್ರಶಾಂತ್, ಅಪ್ಪು ಮತ್ತು ವೆಂಕಿ ಇತರರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
