
CHITRADURGA NEWS | 30 DECEMBER 2024
ಚಿತ್ರದುರ್ಗ: ಮಹಿಳಾ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಎಂ.ಸಿ.ಅರ್ಪಿತಾ ಅವರನ್ನು ನೇಮಕ ಮಾಡಲಾಗಿದೆ.
Also Read: ಮಂಗಳವಾರ ಆಡುಮಲ್ಲೇಶ್ವರ ಮೃಗಾಲಯಕ್ಕೆ ರಜೆ ಇಲ್ಲ !

ಕಾಂಗ್ರೆಸ್ ಯುವ ವಿದ್ಯಾರ್ಥಿ ಘಟಕದಲ್ಲಿ ಒಂದು ದಶಕದ ಕಾಲ ಕಾರ್ಯಕರ್ತೆಯಾಗಿ ಪಕ್ಷ ಸಂಘಟನೆಯಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ಜಿಲ್ಲಾಧ್ಯಕ್ಷೆ ಗೀತಾನಂದಿನಿ ಗೌಡ ನೇಮಕ ಮಾಡಿ ಆದೇಶಿಸಿದ್ದಾರೆ.
ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಸೇರಿ ಎಲ್ಲ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಲು ಸಂಘಟನೆ ಕಾರ್ಯಕೈಗೊಳ್ಳುವಂತೆ ತಿಳಿಸಿದ್ದಾರೆ.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಕಾಂಗ್ರೆಸ್ ಘಟಕದಲ್ಲಿ ಅರ್ಪಿತಾ ಅವರ ಸಂಘಟನಾ ಸಾಮರ್ಥ್ಯ ಪರಿಗಣಿಸಿ ಅವರಿಗೆ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸುವಂತೆ ಮಾಜಿ ಸಚಿವ ಎಚ್.ಆಂಜನೇಯ, ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್ ಶಿಫಾರಸ್ಸು ಮಾಡಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
