By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಸಿದ್ದು ಬಜೆಟ್ | ಚಿತ್ರದುರ್ಗ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣ ಗ್ಯಾರೆಂಟಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಸಿದ್ದು ಬಜೆಟ್ | ಚಿತ್ರದುರ್ಗ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣ ಗ್ಯಾರೆಂಟಿ

ಮುಖ್ಯ ಸುದ್ದಿ

ಸಿದ್ದು ಬಜೆಟ್ | ಚಿತ್ರದುರ್ಗ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣ ಗ್ಯಾರೆಂಟಿ

chitradurganews.com
Last updated: 16 February 2024 14:35
chitradurganews.com
1 year ago
Share
ಚಿತ್ರದುರ್ಗ ಸರ್ಕಾರಿ ಮೆಡಿಕಲ್ ಕಾಲೇಜು
ಚಿತ್ರದುರ್ಗ ಸರ್ಕಾರಿ ಮೆಡಿಕಲ್ ಕಾಲೇಜು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 16 FEBRUARY 2024

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡನೆ ಮಾಡಿದ ಬಜೆಟ್‍ನಲ್ಲಿ ಮಧ್ಯ ಕರ್ನಾಟಕ ಚಿತ್ರದುರ್ಗ ಜಿಲ್ಲೆಗೆ ಸಿಕ್ಕಿದ ಮಹತ್ತರ ಕೊಡುಗೆಯಲ್ಲಿ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣದ ಭರವಸೆ ಕೂಡಾ ಒಂದಾಗಿದೆ.

ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಕಟ್ಟಡ, ವಿದ್ಯಾರ್ಥಿಗಳ ವಸತಿ ನಿಲಯ, ಸಿಬ್ಬಂದಿಗಳ ವಸತಿ ಗೃಹಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ: ಬರಿದಾಗುತ್ತಿದೆ ಸೂಳೆಕೆರೆ | 10 ಅಡಿ ಕುಸಿದ ನೀರಿನ ಮಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು 500 ಕೋಟಿ ರೂ.ಗಳ ವೆಚ್ಚದಲ್ಲಿ 2023-24ನೇ ಸಾಲಿನಿಂದ 150 ಎಂಬಿಬಿಎಸ್ ವಿದ್ಯಾರ್ಥಿಗಳ ದಾಖಲಾತಿಯೊಂದಿಗೆ ಪ್ರಾರಂಭಿಸಲಾಗಿರುತ್ತದೆ ಎಂದು ಬಜೆಟ್ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಸ್ಥಾಪನೆಯಾಗುತ್ತಿರುವ ಸರ್ಕಾರಿ ಮೆಡಿಕಲ್ ಕಾಲೇಜು 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಆಗಲಿದೆ ಎನ್ನುವ ಭರವಸೆ ಸಿಕ್ಕಿದೆ.

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಟ್ಟ ಕೊಡುಗೆ ಎಷ್ಟು ?

ಈಗಾಗಲೇ ಮೊದಲ ಬ್ಯಾಚ್ ಪ್ರಾರಂಭವಾಗಿದ್ದು, ಕಾಲೇಜು ಕಟ್ಟಡಕ್ಕೆ ಜಾಗದ ಸ್ವಚ್ಛತೆ ಇತ್ಯಾದಿ ಕೆಲಸಗಳು ನಡೆಯುತ್ತಿರುವುದರಿಂದ ಇದನ್ನು ಪ್ರಗತಿಯಲ್ಲಿರುವ ಕಾಮಗಾರಿ ಎಂದು ಪರಿಗಣಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಕಾಲೇಜಿಗೆ ಇಂತಿಷ್ಟೇ ಅನುದಾನ ಎಂದು ಮೀಸಲಿಡದೇ, ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಲಾಗಿದೆ.

ಇದನ್ನೂ ಓದಿ: ರೈತರ ಜೊತೆ ಕುಳಿತು ಕಷ್ಟ ಸುಖ ಆಲಿಸಿದ ಎಸ್ಪಿ

2024-25ನೇ ಸಾಲಿನಲ್ಲಿ ವೈದ್ಯಕೀಯ ವಿಜ್ಞಾನ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು ಎಂದು ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಈ ಅನುದಾನದಲ್ಲಿ ಚಿತ್ರದುರ್ಗ ಮೆಡಿಕಲ್ ಕಾಲೇಜಿಗೂ ಈ ವರ್ಷ ಇಂತಿಷ್ಟು ಅನುದಾನ ಮೀಸಲಿಡುವ ಸಾಧ್ಯತೆ ಇದೆ.

ಈ ಮೂಲಕ ಜಿಲ್ಲೆಯ ಜನರ ದಶಕಗಳ ಬೇಡಿಕೆಯಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣದ ಕನಸು ಹಂತ ಹಂತವಾಗಿ ನನಸಾಗುತ್ತಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BudgetChief MinisterChitradurgaChitradurga Institute of Medical SciencesMedical CollegeSiddaramaiahState Govt.ಚಿತ್ರದುರ್ಗಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಬಜೆಟ್ಮುಖ್ಯಮಂತ್ರಿಮೆಡಿಕಲ್ ಕಾಲೇಜುರಾಜ್ಯ ಸರ್ಕಾರಸಿದ್ದರಾಮಯ್ಯ
Share This Article
Facebook Email Print
Previous Article ಬರಿದಾಗುತ್ತಿದೆ ಸೂಳೆಕೆರೆ | 10 ಅಡಿಗೆ ಕುಸಿದ ನೀರಿನ ಮಟ್ಟ | ಜಲ ಕಂಟಕದ ಆತಂಕ
Next Article ಶೀಘ್ರ ಮೊಳಕಾಲ್ಮುರು ಬಂದ್‌ಗೆ ದಿನಾಂಕ ಘೋಷಣೆ | ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗ್ರಹ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up