Connect with us

ಸಿದ್ದು ಬಜೆಟ್ | ಚಿತ್ರದುರ್ಗ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣ ಗ್ಯಾರೆಂಟಿ

ಚಿತ್ರದುರ್ಗ ಸರ್ಕಾರಿ ಮೆಡಿಕಲ್ ಕಾಲೇಜು

ಮುಖ್ಯ ಸುದ್ದಿ

ಸಿದ್ದು ಬಜೆಟ್ | ಚಿತ್ರದುರ್ಗ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣ ಗ್ಯಾರೆಂಟಿ

CHITRADURGA NEWS | 16 FEBRUARY 2024

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡನೆ ಮಾಡಿದ ಬಜೆಟ್‍ನಲ್ಲಿ ಮಧ್ಯ ಕರ್ನಾಟಕ ಚಿತ್ರದುರ್ಗ ಜಿಲ್ಲೆಗೆ ಸಿಕ್ಕಿದ ಮಹತ್ತರ ಕೊಡುಗೆಯಲ್ಲಿ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣದ ಭರವಸೆ ಕೂಡಾ ಒಂದಾಗಿದೆ.

ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಕಟ್ಟಡ, ವಿದ್ಯಾರ್ಥಿಗಳ ವಸತಿ ನಿಲಯ, ಸಿಬ್ಬಂದಿಗಳ ವಸತಿ ಗೃಹಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ: ಬರಿದಾಗುತ್ತಿದೆ ಸೂಳೆಕೆರೆ | 10 ಅಡಿ ಕುಸಿದ ನೀರಿನ ಮಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು 500 ಕೋಟಿ ರೂ.ಗಳ ವೆಚ್ಚದಲ್ಲಿ 2023-24ನೇ ಸಾಲಿನಿಂದ 150 ಎಂಬಿಬಿಎಸ್ ವಿದ್ಯಾರ್ಥಿಗಳ ದಾಖಲಾತಿಯೊಂದಿಗೆ ಪ್ರಾರಂಭಿಸಲಾಗಿರುತ್ತದೆ ಎಂದು ಬಜೆಟ್ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಸ್ಥಾಪನೆಯಾಗುತ್ತಿರುವ ಸರ್ಕಾರಿ ಮೆಡಿಕಲ್ ಕಾಲೇಜು 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಆಗಲಿದೆ ಎನ್ನುವ ಭರವಸೆ ಸಿಕ್ಕಿದೆ.

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಟ್ಟ ಕೊಡುಗೆ ಎಷ್ಟು ?

ಈಗಾಗಲೇ ಮೊದಲ ಬ್ಯಾಚ್ ಪ್ರಾರಂಭವಾಗಿದ್ದು, ಕಾಲೇಜು ಕಟ್ಟಡಕ್ಕೆ ಜಾಗದ ಸ್ವಚ್ಛತೆ ಇತ್ಯಾದಿ ಕೆಲಸಗಳು ನಡೆಯುತ್ತಿರುವುದರಿಂದ ಇದನ್ನು ಪ್ರಗತಿಯಲ್ಲಿರುವ ಕಾಮಗಾರಿ ಎಂದು ಪರಿಗಣಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಕಾಲೇಜಿಗೆ ಇಂತಿಷ್ಟೇ ಅನುದಾನ ಎಂದು ಮೀಸಲಿಡದೇ, ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಲಾಗಿದೆ.

ಇದನ್ನೂ ಓದಿ: ರೈತರ ಜೊತೆ ಕುಳಿತು ಕಷ್ಟ ಸುಖ ಆಲಿಸಿದ ಎಸ್ಪಿ

2024-25ನೇ ಸಾಲಿನಲ್ಲಿ ವೈದ್ಯಕೀಯ ವಿಜ್ಞಾನ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು ಎಂದು ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಈ ಅನುದಾನದಲ್ಲಿ ಚಿತ್ರದುರ್ಗ ಮೆಡಿಕಲ್ ಕಾಲೇಜಿಗೂ ಈ ವರ್ಷ ಇಂತಿಷ್ಟು ಅನುದಾನ ಮೀಸಲಿಡುವ ಸಾಧ್ಯತೆ ಇದೆ.

ಈ ಮೂಲಕ ಜಿಲ್ಲೆಯ ಜನರ ದಶಕಗಳ ಬೇಡಿಕೆಯಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣದ ಕನಸು ಹಂತ ಹಂತವಾಗಿ ನನಸಾಗುತ್ತಿದೆ.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version