CHITRADURGA NEWS | 04 FEBRUARY 2026
ಚಿತ್ರದುರ್ಗ: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಶುಶ್ರೂಷಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು 18 ಡಿಸೆಂಬರ್ 2025 ರಂದು ಅಧಿಸೂಚನೆ ಹೊರಡಿಸಲಾಗಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | 3 ಫೆಬ್ರವರಿ | ಯಾವ ಅಡಿಕೆಗೆ ಎಷ್ಟು ರೇಟ್ ?
ಆದರೆ, ಕೆಲವು ಮಧ್ಯವರ್ತಿಗಳು ಇದರ ದುರುಪಯೋಗ ಪಡೆದುಕೊಂಡು ಶುಶ್ರೂಷಾಧಿಕಾರಿಗಳ ಉದ್ಯೋಗ ಕೊಡಿಸುವುದಾಗಿ ಸಾರ್ವಜನಿಕರಿಗೆ ಆಮಿಷವೊಡ್ಡಿ ಹಣದ ಬೇಡಿಕೆಯಿಡುತ್ತಿರುವುದು ಸಂಸ್ಥೆಯ ಅಧಿಕಾರಿಗಳ ಗಮನಕ್ಕೆ ಬಂದಿದೆ.
ಸಂಸ್ಥೆಯಲ್ಲಿ ಪಾರದರ್ಶಕ ಹಾಗೂ ನಿಯಮಾನುಸಾರವೇ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಉದ್ಯೋಗ ಕೊಡಿಸುವುದಾಗಿ ನಂಬಿಸುವ ಮಧ್ಯವರ್ತಿಗಳಿಗೆ ಸಾರ್ವಜನಿಕರು ಯಾವುದೇ ಕಾರಣಕ್ಕೂ ಹಣ ನೀಡಿ ಮೋಸ ಹೋಗಬಾರದು.
ಇದನ್ನೂ ಓದಿ:
ಕೆಲಸ ಕೊಡಿಸುವ ಆಮಿಷವೊಡ್ಡಿ ಯಾರಾದರೂ ಹಣ ಕೇಳಿದರೆ, ಅವರ ಪೂರ್ಣ ವಿಳಾಸ ಮತ್ತು ಮೊಬೈಲ್ ಸಂಖ್ಯೆಯೊAದಿಗೆ ತಕ್ಷಣವೇ ಸಂಸ್ಥೆಯ ಗಮನಕ್ಕೆ ತರುವಂತೆ ಚಿತ್ರದುರ್ಗ ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ಬಿ.ವೈ.ಯುವರಾಜರಾಜ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
