By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮೆಡಿಕಲ್ ಕಾಲೇಜು ನೇಮಕಾತಿ ಅಕ್ರಮ | ಸಚಿವರಿಗೆ ಪತ್ರ | ಕೆ.ಎಸ್.ನವೀನ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮೆಡಿಕಲ್ ಕಾಲೇಜು ನೇಮಕಾತಿ ಅಕ್ರಮ | ಸಚಿವರಿಗೆ ಪತ್ರ | ಕೆ.ಎಸ್.ನವೀನ್

ಮುಖ್ಯ ಸುದ್ದಿ

ಮೆಡಿಕಲ್ ಕಾಲೇಜು ನೇಮಕಾತಿ ಅಕ್ರಮ | ಸಚಿವರಿಗೆ ಪತ್ರ | ಕೆ.ಎಸ್.ನವೀನ್

News Desk Chitradurga News
Last updated: 23 April 2025 19:29
News Desk Chitradurga News
2 months ago
Share
ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿದರು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 23 APRIL 2025

ಚಿತ್ರದುರ್ಗ: ಚಿತ್ರದುರ್ಗ ಮೆಡಿಕಲ್ ಕಾಲೇಜು ನೇಮಕಾತಿಯಲ್ಲಿ ಮಾನದಂಡಗಳನ್ನು ಗಾಳಿಗೆ ತೂರಿ ಲಕ್ಷಾಂತರ ರೂ.ಗಳ ಅವ್ಯವಹಾರವಾಗಿರುವುದು ತನಿಖೆಯಾಗಬೇಕು ಎಂದು ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು.

Also Read: ಸಿರಿಗೆರೆಯಲ್ಲಿ ಏ.25 ರಂದು ಕನ್ನಡ ಕರಡು ತಿದ್ದುವ ಕಾರ್ಯಾಗಾರ

ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು.

ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಚಿತ್ರದುರ್ಗಕ್ಕೆ ಆಗಮಿಸಿ ನೇಮಕಾತಿಯಲ್ಲಿ ಆಗಿರುವ ಭ್ರಷ್ಟಾಚಾರದ ಬಗ್ಗೆ ಗಮನ ಕೊಡಬೇಕು.

ಕೆ.ಡಿ.ಪಿ.ಸಭೆಯಲ್ಲಿ ಇಂತಹ ವಿಷಯಗಳು ಚರ್ಚೆಗೆ ಬರುವುದಿಲ್ಲ. 2013 ರಲ್ಲಿ ಮೆಡಿಕಲ್ ಕಾಲೇಜು ಮಂಜೂರಾಗಿದ್ದು, 2025 ರಲ್ಲಿ ಆರಂಭಗೊಂಡಿದೆ. ನೇಮಕಾತಿ ಅವ್ಯವಹಾರದಲ್ಲಿ ಭಾಗಿಯಾಗಿರುವವರನ್ನು ಕೂಡಲೆ ಸೇವೆಯಿಂದ ವಜಾಗೊಳಿಸಬೇಕು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಶರಣ ಪ್ರಕಾಶ್ ಪಾಟೀಲ್‍ ಅವರಿಗೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.

ಪ್ರವಾಸಿ ತಾಣ ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರಗಾಮಿಗಳು ನಡೆಸಿರುವ ದಾಳಿಯಲ್ಲಿ 26 ಮಂದಿ ಅಮಾಯಕರು ಬಲಿಯಾಗಿರುವುದನ್ನು ನಾವುಗಳು ಖಂಡಿಸುತ್ತೇವೆ.

Also Read: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?

ದುಷ್ಟಕೂಟಕ್ಕೆ ನಮ್ಮ ದೇಶದ ಪ್ರಧಾನಿ ಮೋದಿರವರು ತಕ್ಕ ಪಾಠ ಕಲಿಸದೆ ಬಿಡುವುದಿಲ್ಲ. ದಾಳಿಯಲ್ಲಿ ಬಲಿಯಾದವರಿಗೆ ಸಂಜೆ ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಕ್ಯಾಂಡಲ್ ಮೆರವಣಿಗೆ ನಡೆಸಲಾಗುವುದು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಜನಾಕ್ರೋಶ ಯಾತ್ರೆ ಏ.25 ರಂದು ಬೆಳಿಗ್ಗೆ 11 ಕ್ಕೆ ಚಿತ್ರದುರ್ಗ ಪ್ರವೇಶಿಸಬೇಕಿತ್ತು ಆದರೆ ಜಮ್ಮು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರು ನಡೆಸಿರುವ ದಾಳಿಗೆ 26 ಮಂದಿ ಬಲಿಯಾಗಿದ್ದು, ಕರ್ನಾಟಕದ ಇಬ್ಬರ ಮೃತದೇಹಗಳು ರಾಜ್ಯಕ್ಕೆ ಬರುತ್ತಿರುವುದರಿಂದ ಶೋಕ ವ್ಯಕ್ತಪಡಿಸುವುದಕ್ಕಾಗಿ ಜನಾಕ್ರೋಶ ಯಾತ್ರೆಯನ್ನು ಮುಂದೂಡಿರುವುದಾಗಿ ತಿಳಿಸಿದರು.

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ, ಭಾರತದ ಪ್ರವಾಸಿ ತಾಣ ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಭಯೋತ್ಪಾದಕರ ದಾಳಿಗೆ 26 ಮಂದಿ ಬಲಿಯಾಗಿರುವುದು ಅತ್ಯಂತ ಖಂಡನೀಯ. ಈ ವಿಚಾರದಲ್ಲಿ ಯಾವ ಪಕ್ಷಗಳು ರಾಜಕಾರಣ ಮಾಡಬಾರದು. ದೇಶದ ಐಕ್ಯತೆ ದೃಷ್ಟಿಯಿಂದ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕು. ಪುಲ್ವಾಮಾ ದಾಳಿ ನಡೆದಾಗ ಅದಕ್ಕೆ ಪ್ರತಿಯಾಗಿ ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲಾ ಎಂದು ವಿರೋಧ ಪಕ್ಷದವರು ಗೇಲಿ ಮಾಡಿದ್ದುಂಟು. ಒಟ್ಟಾರೆ ಪಹಲ್ಗಾಮ್ ದಾಳಿಗೆ ರಾಜಕೀಯ ಬಣ್ಣ ಹಚ್ಚುವುದು ಬೇಡ ಎಂದರು.

Also Read: ಕಾಶ್ಮೀರದ ಪಹಲ್‌ಗಾಮದಲ್ಲಿ ಉಗ್ರರ ದಾಳಿ | ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕದಿಂದ ಸಹಾಯವಾಣಿ | ಇಲ್ಲಿದೆ ವಿವರ

ಸುದ್ದಿಗೊಷ್ಟಿಯಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಜಿ.ಟಿ.ಸುರೇಶ್‍ಸಿದ್ದಾಪುರ, ಸಂಪತ್, ನಗರ ಮಂಡಲ ಅಧ್ಯಕ್ಷ ಲೋಕೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗರಾಜ್, ಕರ್ನಾಟಕ ರಾಜ್ಯ ರೈತ ಮೋರ್ಚ ಕಾರ್ಯದರ್ಶಿ ಮಲ್ಲಿಕಾರ್ಜುನ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್‍ ಯಾದವ್, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ವಕ್ತಾರ ನಾಗರಾಜ್‍ ಬೇದ್ರೆ, ಛಲವಾದಿ ತಿಪ್ಪೇಸ್ವಾಮಿ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesIllegalK. S. NaveenKannada Latest NewsKannada NewsletterMedical CollegeMinister Sharan Prakash PatilRecruitmentಅಕ್ರಮಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೆ.ಎಸ್.ನವೀನ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ನೇಮಕಾತಿಪತ್ರಮೆಡಿಕಲ್ ಕಾಲೇಜುಸಚಿವ ಶರಣ ಪ್ರಕಾಶ್ ಪಾಟೀಲ್
Share This Article
Facebook Email Print
Previous Article ಸಿರಿಗೆರೆಯಲ್ಲಿ ಏ.25 ರಂದು ಕನ್ನಡ ಕರಡು ತಿದ್ದುವ ಕಾರ್ಯಾಗಾರ
Next Article ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ
Leave a Comment

Leave a Reply Cancel reply

Your email address will not be published. Required fields are marked *

ದೇಹದಲ್ಲಿ ಫೈಬರ್ ಅಂಶ ಹೆಚ್ಚಿಸಲು ಊಟ-ಉಪಾಹಾರದಲ್ಲಿ ಈ ಆಹಾರಗಳನ್ನು ಸೇರಿಸಿ
Life Style
today bhavishya
Astrology: ದಿನ ಭವಿಷ್ಯ | 13 ಜೂನ್ 2025 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
Dina Bhavishya
Shivananda patil meating
ಹೊಸದುರ್ಗದಲ್ಲಿ ಗಾರ್ಮೆಂಟ್ಸ್‌ | ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್‌ | ಜವಳಿ ಪಾರ್ಕ್‌ ಸ್ಥಳ ನಿಗಧಿ
ಹೊಸದುರ್ಗ
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಿಗೆ ಅರ್ಜಿ 
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up