
CHITRADURGA NEWS | 07 APRIL 2026
ಚಿತ್ರದುರ್ಗ: ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಮ್ಮ ಇಲಾಖೆಯಲ್ಲಿ ಯಾವುದೇ ಬಿಲ್ ಬಾಕಿ ಇಲ್ಲ. ಇನ್ನೊಂದು ವರ್ಷದಲ್ಲಿ ಚಿತ್ರದುರ್ಗ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
ಜಿಲ್ಲಾ ಆಸ್ಪತ್ರೆ ಹಾಗೂ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿ ವೀಕ್ಷಣೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಹಾಸ್ಟೆಲ್ ಹಾಗೂ ಆಡಳಿತ ಕಚೇರಿಯ ಕಾಮಗಾರಿಗಳು ಬಹುತೇಕ ಮುಗಿದಿವೆ ಎಂದರು.
ಡಿಸಿ ಕಚೇರಿ ಕಟ್ಟಡವನ್ನು ಮೆಡಿಕಲ್ ಕಾಲೇಜಿಗೆ ನೀಡುತ್ತಿದ್ದಾರೆ. ಅಲ್ಲಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್‌ಗಳನ್ನು ಸ್ಥಳಾಂತರ ಮಾಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಇದನ್ನೂ ಓದಿ: ಕೈಮಗ್ಗ ಮತ್ತು ಜವಳಿ ಇಲಾಖೆ | ಸಹಾಯಧನಕ್ಕೆ ಅರ್ಜಿ ಅಹ್ವಾನ
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರವಾಗಿದೆ. ಇಲ್ಲಿಯೂ ಸಾಕಷ್ಟು ಕೆಲಸ ಆಗಬೇಕಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಸಾಕಷ್ಟು ಸುಧಾರಣೆ ಆಗಬೇಕಾಗಿದೆ. ಇಲ್ಲಿನ ಸಿಟಿ ಸ್ಕ್ಯಾನ್ ಹಾಗೂ ಎಂಆರ್‌ಐ ಯಂತ್ರಗಳು ಕೆಟ್ಟು ಹೋಗಿರುವುದು ನನ್ನ ಗಮನಕ್ಕೆ ಬಂದಿದೆ. ಕೂಡಲೇ ರಿಪೇರಿ ಅಥವಾ ಹೊಸದನ್ನು ಹಾಕಿಸುವ ಬಗ್ಗೆ ಗಮನಹರಿಸುತ್ತಿದ್ದೇವೆ ಎಂದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
