CHITRADURGA NEWS | 23 JUNE 2026
ಚಿತ್ರದುರ್ಗ: ಭಾರತೀಯ ಜನಸಂಘದ ಸಂಸ್ಥಾಪಕರಾದ ಡಾ.ಶ್ಯಾಮ ಪ್ರಸಾದ ಮುಖರ್ಜಿ ಅವರ ಬಲಿದಾನ ದಿವಸವನ್ನು ಮಂಗಳವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಚರಣೆ ಮಾಡಲಾಯಿತು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
ಸಂಸದ ಗೋವಿಂದ ಕಾರಜೋಳ ಶ್ಯಾಮ ಪ್ರಸಾದ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ದೇಶದ ಏಕತೆ, ಅಖಂಡತೆ ಮತ್ತು ರಾಷ್ಟ್ರಭಕ್ತಿಯ ಪ್ರತೀಕವಾಗಿದ್ದ ಮಹಾನ್ ಚಿಂತಕರಾದ ಶ್ಯಾಮ ಪ್ರಸಾದ ಮುಖರ್ಜಿ ಅವರ ತ್ಯಾಗ ಮತ್ತು ಆದರ್ಶಗಳು ಸದಾ ನಮ್ಮೆಲ್ಲರಿಗೂ ಪ್ರೇರಣೆಯಾಗಿವೆ.
ಒಂದು ದೇಶದಲ್ಲಿ ಎರಡು ಸಂವಿಧಾನ, ಎರಡು ಪ್ರಧಾನ, ಎರಡು ಧ್ವಜ ಇರಲು ಸಾಧ್ಯವಿಲ್ಲ ಎಂಬ ಅವರ ಸಂಕಲ್ಪ ರಾಷ್ಟ್ರದ ಏಕೀಕರಣಕ್ಕೆ ದಿಕ್ಸೂಚಿಯಾಯಿತು ಎಂದರು.
ಇದನ್ನೂ ಓದಿ: ಹಾಗಲಕಾಯಿಯ ಕಹಿಯನ್ನು ಕಡಿಮೆ ಮಾಡಲು ಈ ಟ್ರಿಕ್ ಫಾಲೋ ಮಾಡಿ
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಉಪಾಧ್ಯಕ್ಷರಾದ ಡಾ.ಸಿದ್ದಾರ್ಥ, ನಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಎಸ್.ಸಿ.ಮೋರ್ಚಾದ ಅಧ್ಯಕ್ಷ ಪರಶುರಾಮ್, ಜಿಲ್ಲಾ ಕಾರ್ಯದರ್ಶಿ ರಜನಿ, ಶಂಭು, ಶಿವು, ಬಸಮ್ಮ, ಬಸಣ್ಣ, ನಗರ ಕಾರ್ಯದರ್ಶಿ ಸತೀಶ್ ಆಚಾರ್, ವಿರೇಶ್, ಕಿರಣ್, ತಿಪ್ಪೇಸ್ವಾಮಿ, ಕವಿತಾ, ಶಿಲ್ಪ, ಯಶೋಧ ಸೇರಿದಂತೆ ಇತರರು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
