ಮುಖ್ಯ ಸುದ್ದಿ
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಭೆ ಫೆ.04ಕ್ಕೆ | ಸಂಪೂರ್ಣ ಮಾಹಿತಿಯೊಂದಿಗೆ ಹಾಜರಾಗಿ

Published on
CHITRADURGA NEWS | 31 JANUARY 2025
ಚಿತ್ರದುರ್ಗ: ಇತ್ತೀಚಿಗೆ ಮೈಕ್ರೋಫೈನಾನ್ಸ್, ಲೇವಾದೇವಿ, ಗಿರವಿ ಹಣಕಾಸು ಸಂಸ್ಥೆಗಳಿಂದ ತನ್ನ ಸಾಲಗಾರರಿಗೆ ಅತಿಯಾಗಿ ಬಡ್ಡಿ ವಿಧಿಸುತ್ತಿರುವುದು ಹಾಗೂ ಸಾಲ ವಸೂಲಾತಿ ಸಮಯದಲ್ಲಿ ಸಾಲಗಾರರಿಗೆ ಕಿರುಕುಳ ನೀಡುತ್ತಿರುವುದು ಕಂಡುಬಂದಿರುವುದರಿಂದ, ಈ ಬಗ್ಗೆ ಕ್ರಮ ಕೈಗೊಳ್ಳಲು ಫೆ.04ರಂದು ಸಂಜೆ 4ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳ ಸಭೆ ನಿಗಧಿಪಡಿಸಲಾಗಿದೆ.
Also Read: ಕುಂಭ ಮೇಳದಲ್ಲಿ ಚಿತ್ರದುರ್ಗ ಮೂಲದ ನಾಗಾಸಾಧು ನಿಧನ
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯ ಅಧ್ಯಕ್ಷತೆ ವಹಿಸುವರು. ಸಭೆಗೆ ಚಿತ್ರದುರ್ಗ ಜಿಲ್ಲೆಯಲ್ಲಿನ ಮೈಕ್ರೋಫೈನಾನ್ಸ್, ಲೇವಾದೇವಿ, ಗಿರವಿ ಹಣಕಾಸು ಸಂಸ್ಥೆಗಳ ವ್ಯವಸ್ಥಾಪಕರು ಸಂಪೂರ್ಣ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ಆರ್.ಎಸ್.ದಿಲೀಪ್ ಕುಮಾರ್ ತಿಳಿಸಿದ್ದಾರೆ.
Continue Reading
Related Topics:Chitradurga, Chitradurga news, Chitradurga Updates, DC Venkatesh, District Collector's Office, District Cooperative Society, Information, Kannada Latest News, Kannada News, meeting, Micro Finance, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಜಿಲ್ಲಾ ಸಹಕಾರ ಸಂಘ, ಜಿಲ್ಲಾಧಿಕಾರಿ ಕಚೇರಿ, ಡಿಸಿ ವೆಂಕಟೇಶ್, ಮಾಹಿತಿ, ಮೈಕ್ರೋ ಫೈನಾನ್ಸ್, ಸಭೆ

Click to comment