CHITRADURGA NEWS | 13 MARCH 2026
ಹೊಳಲ್ಕೆರೆ: ಹೊಳಲ್ಕೆರೆ ತಾಲ್ಲೂಕಿನ ಸಿಂಗೇನಹಳ್ಳಿಯ ಸಹಕಾರ ಸಂಘದಲ್ಲಿ ಇತ್ತೀಚೆಗೆ ನಡೆದ ಹಾಲು ಕರೆಯುವ ಸ್ಪರ್ಧೆಯನ್ನು ಶಿಮುಲ್ ನಿರ್ದೇಶಕ ಜಿ.ಬಿ.ಶೇಖರ್ ಉದ್ಘಾಟಿಸಿದರು.

ಇದನ್ನೂ ಓದಿ: ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ಎಂಡಿ ಕೋರ್ಸ್ ಪ್ರಾರಂಭಕ್ಕೆ ಸ್ಥಳ ಪರೀಶೀಲನೆ
ನಂತರ ಮಾತನಾಡಿದ ಅವರು, ಹಸುಗಳಿಗೆ ಇಂಡಿ, ಬೂಸಾ ಜೊತೆಗೆ ಹಸಿರು ಮೇವು ನೀಡಿ ಸಕಾಲಕ್ಕೆ ಚಿಕಿತ್ಸೆ ಕೊಡಿಸಿ ಯಾವುದೇ ರೋಗಕ್ಕೆ ತುತ್ತಾಗದಂತೆ ಜಾನುವಾರುಗಳನ್ನು ಜೋಪಾನ ಮಾಡಿಕೊಳ್ಳಬೇಕು. ಕೃಷಿಯ ಜೊತೆ ರೈತರು ಹೈನುಗಾರಿಕೆ ಮೂಲಕ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬೇಕಲ್ಲದೆ ಬರಡು ರಾಸುಗಳ ಚಿಕಿತ್ಸಾ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಆರ್.ಪ್ರಸನ್ನ, ಹೊಳಲ್ಕೆರೆ ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರಂಗಸ್ವಾಮಿ, ಕೃಷಿಕ ಸಮಾಜದ ಅಧ್ಯಕ್ಷ ಮಹೇಶ್ವರಪ್ಪ, ಪಶು ವೈದ್ಯಾಧಿಕಾರಿಗಳು ಹಾಗೂ ಒಕ್ಕೂಟದ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಸ್ಪರ್ಧೆಯಲ್ಲಿ ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
