
CHITRADURGA NEWS | 20 SEPTEMBER 2025
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಕೊವೇರಹಟ್ಟಿಯ ಮೃತ ವಿದ್ಯಾರ್ಥಿನಿ ವರ್ಷಿತಾ ಅವರ ತಾಯಿಗೆ ಅಡುಗೆ ಸಹಾಯಕರ ನೌಕರಿ ಆದೇಶವನ್ನು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಿತರಿಸಿದರು.
ಇದನ್ನೂ ಓದಿ: ಕಾಲೇಜು ವಿದ್ಯಾರ್ಥಿನಿಯ ಕೊಲೆ | ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆ
ಕೊವೇರಹಟ್ಟಿಯ ವರ್ಷಿತಾ ಎಂಬ ವಿದ್ಯಾರ್ಥಿನಿಯ ಮೃತ ದೇಹ ಇತ್ತೀಚೆಗೆ ಚಿತ್ರದುರ್ಗ ತಾಲ್ಲೂಕಿನ ಗೋನೂರು ಬಳಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ಆರ್ಥಿಕವಾಗಿ ಆಧಾರ ನೀಡುವ ಉದ್ದೇಶದಿಂದ, ವರ್ಷಿತಾ ಅವರ ತಾಯಿ ಟಿ. ಜ್ಯೋತಿ ಅವರಿಗೆ ಬುರುಜನರೊಪ್ಪದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಅಡುಗೆ ಸಹಾಯಕರ ಹುದ್ದೆಗೆ ನೇಮಕ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮೃತ ವಿದ್ಯಾರ್ಥಿನಿ ವರ್ಷಿತಾ ತಂದೆ ತಿಪ್ಪೇಸ್ವಾಮಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
