By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    21 hours ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    21 hours ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    1 day ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    2 days ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    22 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    15 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    6 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    20 hours ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    21 hours ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    2 days ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    2 days ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    3 days ago
Reading: ಸಚಿವ ಡಿ.ಸುಧಾಕರ್ ಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ | ಸಹಕಾರ ಕ್ಷೇತ್ರದ ಗಣನೀಯ ಸೇವೆಗೆ ಸಂದ ಗೌರವ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಚಿವ ಡಿ.ಸುಧಾಕರ್ ಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ | ಸಹಕಾರ ಕ್ಷೇತ್ರದ ಗಣನೀಯ ಸೇವೆಗೆ ಸಂದ ಗೌರವ

News Desk Chitradurga News
Last updated: 21 August 2025 17:06
News Desk Chitradurga News
1 year ago
Share
ಸಚಿವ ಡಿ.ಸುಧಾಕರ್ ಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ
SHARE

CHITRADURGA NEWS | 21 AUGUST 2025

ಚಿತ್ರದುರ್ಗ: ಸಹಕಾರ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಗಣನೀಯ ಸೇವೆ ಸಲ್ಲಿಸಿರುವ ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಿ.ಸುಧಾಕರ್ ಅವರ ಸಹಕಾರಿ ಸೇವೆ ಗುರುತಿಸಿ, ಸರ್ಕಾರ 2024ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿದೆ.

ಇದನ್ನೂ ಓದಿ: ಮಳೆಯಿಂದ ಈರುಳ್ಳಿ ಬೆಳೆ ಹಾನಿ | ಪರಿಹಾರಕ್ಕೆ ಅರ್ಜಿ

ಬೆಂಗಳೂರಿನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರು ಹಾಗೂ ಶಾಸಕರಾದ ಜಿ.ಟಿ. ದೇವೇಗೌಡ ಅವರು ಸಚಿವ ಡಿ.ಸುಧಾಕರ್ ಅವರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿ, ಸನ್ಮಾನಿಸಿದರು.

ಹಲವು ದಶಕಗಳಿಂದ ಸಹಕಾರ ಕ್ಷೇತ್ರದ ಮುಖಂಡರಾಗಿ ಸೇವೆ ಸಲ್ಲಿಸುವ ಮೂಲಕ ಹಲವಾರು ಸಂಘ ಸಂಸ್ಥೆಗಳ ಸ್ಥಾಪನೆ, ಬೆಳವಣಿಗೆ, ಅಭಿವೃದ್ಧಿಗೆ ಸಚಿವ ಡಿ.ಸುಧಾಕರ್ ಶ್ರಮಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್. ನವೀನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ: 

ಚಿತ್ರದುರ್ಗ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತವಾಗಿ, ಧರ್ಮಾತೀತವಾಗಿ ಹೆಸರಿಸಬಹುದಾದ ಕೆಲವೇ ವ್ಯಕ್ತಿಗಳಲ್ಲಿ ಡಿ.ಸುಧಾಕರ್ ರವರು ಒಬ್ಬರು. ಸಹಕಾರ ಕ್ಷೇತ್ರದಲ್ಲಿ ಸುಮಾರು 25 ವರ್ಷಗಳಿಂದ ಅವಿರತ ಸೇವೆ ಸಲ್ಲಿಸುತ್ತಿದ್ದಾರೆ. 

ಇದನ್ನೂ ಓದಿ: POP ನಿಷೇಧ | ಪರಿಸರ ಸ್ನೇಹಿ ಗಣೇಶ ಉತ್ಸವ ಆಚರಣೆಗೆ ಡಿಸಿ ಕರೆ

ತಮ್ಮ ಜೀವನದಲ್ಲಿ ಸಮಾನತೆ, ಸಹಬಾಳ್ವೆ, ಸಹಕಾರ, ಸಮರಸವನ್ನು ಅಳವಡಿಸಿಕೊಂಡು ಸಹಕಾರ ರಂಗದಲ್ಲಿ ದುಡಿಯುತ್ತಿದ್ದಾರೆ. ಇವರ ಸಹಕಾರ ಕ್ಷೇತ್ರದ ಸೇವೆ ಚಿತ್ರದುರ್ಗ ಜಿಲ್ಲೆಗೆ ಸೀಮಿತವಾಗದೆ ರಾಜ್ಯ ಮಟ್ಟದಲ್ಲೂ ವ್ಯಾಪಿಸಿರುತ್ತದೆ. ಇವರು 2003ನೇ ಸಾಲಿನಲ್ಲಿ ಚಳ್ಳಕೆರೆಯ ಹೊಯ್ಸಳ ಕ್ರೆಡಿಟ್ ಸೌಹಾರ್ಧ ಸಹಕಾರಿ ಸಂಸ್ಥೆಯ ಸಂಸ್ಥಾಪಕರಾಗಿ ಸಂಘ ನೋಂದಾಯಿಸಿ ಈ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾಗಿ ಆಯ್ಕೆಯಾಗಿ ಇದುವರೆವಿಗೂ ಅಂದರೆ ಸುಮಾರು 22 ವರ್ಷಗಳಿಂದ ಈ ಸಂಸ್ಥೆಯ ಅಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದು, ಇವರ ಆಡಳಿತ ವೈಖರಿ ಅನುಕರಣೀಯವಾಗಿರುತ್ತದೆ. 

ಈ ಸಂಘವು ರೂ.102.63 ಕೋಟಿಯ ದುಡಿಯುವ ಬಂಡವಾಳ, ರೂ. 111.72 ಕೋಟಿಗಳ ವ್ಯವಹಾರ, ರೂ.5.63 ಕೋಟಿಗಳ ನಿವ್ವಳ ಲಾಭಗಳಿಸಿ ಶೇ.25 ಡಿವಿಡೆಂಡ್‍ನ್ನು ಸದಸ್ಯರಿಗೆ ನೀಡಿ ಸದಸ್ಯರ ಹಾಗೂ ಗ್ರಾಹಕರ ನಂಬಿಕೆ, ವಿಶ್ವಾಸಕ್ಕೆ ಪಾತ್ರವಾಗಿದ್ದು, ಈ ಸಂಸ್ಥೆಯು ಇವರ ನಾಯಕತ್ವ ಹಾಗೂ ಮುಂದಾಳತ್ವದಲ್ಲಿ ಪ್ರಗತಿಯ ಪಥದತ್ತ ಸಾಗುತ್ತಿದೆ.

ಚಳ್ಳಕೆರೆ ತಾಲ್ಲೂಕು ನಗರಂಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಸುಮಾರು 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. 2004 ರಿಂದ 2024 ರವರೆಗೆ 5 ವರ್ಷಗಳ ಅವಧಿಗಳಲ್ಲಿ ನಡೆದ ಚಿತ್ರದುರ್ಗ ಡಿಸಿಸಿ ಬ್ಯಾಂಕಿನ ಚುನಾವಣೆಗಳಲ್ಲಿ ಬ್ಯಾಂಕಿನ ನಿರ್ದೇಶಕರಾಗಿ ಆಯ್ಕೆಯಾಗಿ ನಂತರ ಬ್ಯಾಂಕಿನ ಅಧ್ಯಕ್ಷರಾಗಿ 20 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸೆಪ್ಟೆಂಬರ್ 2024ರಲ್ಲಿ 2024 ರಿಂದ 2029ರ 5 ವರ್ಷಗಳ ಅವಧಿಗೆ ನಡೆದ ಡಿ.ಸಿ.ಸಿ ಬ್ಯಾಂಕಿನ ಚುನಾವಣೆಯಲ್ಲಿ ನಿರ್ದೇಶಕರಾಗಿ ಮರು ಆಯ್ಕೆಯಾಗಿ ಮತ್ತೊಮ್ಮೆ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿನಿ ಕೊಲೆ ಖಂಡಿಸಿ ಎಬಿವಿಪಿ ಪ್ರತಿಭಟನೆ | ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ಇವರು ಬ್ಯಾಂಕಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಜಿಲ್ಲೆಯ ಸಣ್ಣ, ಅತಿಸಣ್ಣ ರೈತರಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ, ಅಲ್ಪಸಂಖ್ಯಾತ ಮತ್ತು ಮಹಿಳಾ ರೈತರಿಗೆ ಹೆಚ್ಚಿನ ಸಾಲ ಸೌಲಭ್ಯ ನೀಡಲಾಗಿದೆ ಮತ್ತು ಬ್ಯಾಂಕ್ ಲಾಭಗಳಿಸಲು ಸಾಧ್ಯವಾಗಿರುತ್ತದೆ. ಅಲ್ಲದೇ ಬ್ಯಾಂಕ್ ಇತಿಹಾಸದಲ್ಲಿ ಇವರ ಅಧ್ಯಕ್ಷತೆಯಲ್ಲಿ ಬ್ಯಾಂಕ್ 2018-2019ನೇ ಸಾಲಿನಿಂದ ಬ್ಯಾಂಕಿನ ಸದಸ್ಯರುಗಳಿಗೆ ಡಿವಿಡೆಂಡ್‍ನ್ನು ನೀಡಲಾಗುತ್ತಿದೆ. 

ಡಿ.ಸಿ.ಸಿ. ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಮುಖ ಆಧ್ಯತೆಯನ್ನು ನೀಡಿ ಬ್ಯಾಂಕ್ ಪ್ರಗತಿ ಪಥದತ್ತ ಸಾಗಲು ಶ್ರಮಿಸಿರುತ್ತಾರೆ. 2013-14ರಲ್ಲಿ ಬ್ಯಾಂಕಿನ ದುಡಿಯುವ ಬಂಡವಾಳ ರೂ.205.29ಕೋಟಿ ಇದ್ದು, 2024-25ನೇ ಸಾಲಿನ ಅಂತ್ಯಕ್ಕೆ ರೂ. 1338.40ಕೋಟಿ ಇರುತ್ತದೆ. ಬ್ಯಾಂಕಿನಿಂದ 71207 ರೈತರಿಗೆ ರೂ.703.00 ಕೋಟಿ ಕೃಷಿ ಸಾಲ ನೀಡಲಾಗಿದೆ. 280.00 ಕೋಟಿ ಕೃಷಿಯೇತರ ಸಾಲ ನೀಡಲಾಗಿದೆ. ಬ್ಯಾಂಕ್ ಪ್ರತಿ ವರ್ಷ ಲಾಭ ಗಳಿಸುತ್ತಿದ್ದು, 2024-25ನೇ ಸಾಲಿಗೆ ರೂ.8.03 ಕೋಟಿ ಲಾಭ ಗಳಿಸಿದೆ.

ಸಿಡಿಸಿಸಿ ಬ್ಯಾಂಕಿನ ಪ್ರತಿನಿಧಿಯಾಗಿ ಕರ್ನಾಟಕ ರಾಜ್ಯ ಸಹಕಾರಿ ಅಫೆಕ್ಸ್ ಬ್ಯಾಂಕಿನ ನಿರ್ದೇಶಕರಾಗಿ ಸುಮಾರು 15 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದು, ಜಿಲ್ಲೆಯ ಸಹಕಾರ ಸಂಘಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ.  

ಇದನ್ನೂ ಓದಿ: ಬಯಲು ಸೀಮೆಗೆ ಗೋಡಂಬಿ ಸೂಕ್ತ | ಕಡಿಮೆ ನೀರು, ನಿರ್ವಹಣೆ ವರದಾನ

ಬ್ಯಾಂಕಿನ ಅಧ್ಯಕ್ಷರ ಕ್ರಿಯಾಶೀಲ ನಾಯಕತ್ವದ ಶ್ರಮದಿಂದ 2017-18ನೇ ಸಾಲಿನಲ್ಲಿ ಬ್ಯಾಂಕ್ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಿದ್ದಕ್ಕಾಗಿ ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಕರ್ನಾಟಕ ರಾಜ್ಯ ಸಹಕಾರಿ ಅಫೆಕ್ಸ್ ಬ್ಯಾಂಕಿನಿಂದ ಲೆಕ್ಕ ಪರಿಶೋಧನೆಯಲ್ಲಿ ‘ಎ’ ವರ್ಗೀಕರಣ ಗಳಿಸಿರುವ ಬ್ಯಾಂಕ್‍ಗಳ ಪೈಕಿ ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಉತ್ತಮ ಸಾಧನೆ ಮಾಡಿರುವುದನ್ನು ಪರಿಗಣಿಸಿ ರಾಜ್ಯಕ್ಕೆ ಪ್ರಥಮ ಸ್ಥಾನದ ಪ್ರಶಸ್ತಿ ನೀಡಿರುತ್ತಾರೆ.

ಬ್ಯಾಂಕಿನ 65 ವರ್ಷಗಳ ಇತಿಹಾಸದಲ್ಲಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನಿಂದ ಜಿಲ್ಲಾ ಬ್ಯಾಂಕುಗಳಿಗೆ ನೀಡುವ ಪ್ರಶಸ್ತಿಯಲ್ಲಿ 2017-18ನೇ ಸಾಲಿಗೆ ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಪ್ರಥಮ ಪ್ರಶಸ್ತಿ ಗಳಿಸಿರುವುದು ಬ್ಯಾಂಕಿನ ಪ್ರಗತಿಯ ಸಂಕೇತವಾಗಿವೆ. 

2019ರಲ್ಲಿ ಪುನಃ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನಿಂದ ಜಿಲ್ಲಾ ಬ್ಯಾಂಕುಗಳಿಗೆ ನೀಡುವ ಪ್ರಶಸ್ತಿಯಲ್ಲಿ ದ್ವಿತೀಯ ಸ್ಥಾನ ಗಳಿಸಿದೆ. 2021-22ನೇ ಸಾಲಿನಲ್ಲಿ ಓಂಈSಅಔಃ ಮುಂಬೈ ಇವರು ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಡಿ.ಸಿ.ಸಿ ಬ್ಯಾಂಕ್‍ಗಳಿಗೆ ನೀಡುವ ಪ್ರಶಸ್ತಿಯಲ್ಲಿ ಚಿತ್ರದುರ್ಗ ಡಿ.ಸಿ.ಸಿ ಬ್ಯಾಂಕಿಗೆ 2ನೇ ಅತ್ಯುತ್ತಮ ಪ್ರಶಸ್ತಿ ನೀಡಿರುತ್ತದೆ. ಈ ಪ್ರಶಸ್ತಿಗಳಿಂದ ಚಿತ್ರದುರ್ಗ ಜಿಲ್ಲೆಯ ಸಹಕಾರಿ ಕ್ಷೇತ್ರದ ಗೌರವ ಹೆಚ್ಚಿಸಿದಂತಾಗಿದೆ.

ಇದನ್ನೂ ಓದಿ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ | ಅರ್ಜಿ ಆಹ್ವಾನ

ಇತರೆ ಕ್ಷೇತ್ರಗಳಲ್ಲಿ ಮಾಡಿರುವ ಸೇವೆ: ಸುಮಾರು 20 ವರ್ಷಗಳ ಹಿಂದೆ ಚಳ್ಳಕೆರೆಯಲ್ಲಿ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಇದರ ಅಧ್ಯಕ್ಷರಾಗಿ ಈ ಸಂಸ್ಥೆಯ ಮೂಲಕ ಸಾವಿರಾರು ಬಡ ಮಕ್ಕಳ ಶಿಕ್ಷಣಕ್ಕೆ ಮತ್ತು ಅವರ ಮುಂದಿನ ಜೀವನಕ್ಕೆ ದಾರಿ ದೀಪವಾಗಿದ್ದಾರೆ.

ಚಳ್ಳಕೆರೆಯಲ್ಲಿ ಪಾಶ್ರ್ವನಾಥಜೈನ್ ಮಂದಿರದ ಟ್ರಸ್ಟ್‍ನ್ನು ಸ್ಥಾಪಿಸಿ ಎಲ್ಲಾ ವರ್ಗದ ಬಡ ಮಕ್ಕಳಿಗೆ ಶಿಕ್ಷಣ, ಹಿರಿಯರಿಗೆ, ಮಹಿಳೆಯರಿಗೆ ಆರ್ಥಿಕ ಧನ ಸಹಾಯ ನೀಡುತ್ತಿದ್ದಾರೆ, ಗೋಶಾಲೆ ಸ್ಥಾಪಿಸಿ ಹೊರರಾಜ್ಯದಿಂದ ಗೋವುಗಳಿಗೆ ಮೇವನ್ನು ತರಿಸಿ ಸಹಾಯ ಮಾಡಿರುತ್ತಾರೆ. ಈ ಎಲ್ಲಾ ಸಾಮಾಜಿಕ ಕಾರ್ಯಗಳಿಂದ ಪ್ರಶಂಸೆಗೆ ಪಾತ್ರರಾಗಿರುತ್ತಾರೆ.

2003ರಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಚುನಾಯಿತರಾಗಿ ಜನರ ಸೇವೆಯನ್ನು ಮಾಡಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಂತರ 2008 ರಲ್ಲಿ ಜರುಗಿದ ಸಾರ್ವರ್ತಿಕ ಚುನಾವಣೆಯಲ್ಲಿ ಹಿರಿಯೂರು ವಿಧಾನ ಸಭಾಕ್ಷೇತ್ರದ ಶಾಸಕರಾಗಿ ಚುನಾಯಿತರಾಗಿ ನಂತರರಾಜ್ಯ ಸರ್ಕಾರದ ಸಮಾಜಕಲ್ಯಾಣ ಸಚಿವರು ಹಾಗೂ ಮುಜರಾಯಿ ಖಾತೆ ಸಚಿವರಾಗಿ ಸೇವೆ ಸಲ್ಲಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ. 

ಇದನ್ನೂ ಓದಿ: ಆಗಸ್ಟ್ 25 ರಿಂದ ನೀರು ಮತ್ತು ನೈರ್ಮಲ್ಯದ ಕುರಿತು ಪ್ರಬಂಧ, ಚಿತ್ರಕಲಾ ಸ್ಪರ್ಧೆ

ಪುನಃ 2013ರಲ್ಲಿ ಜರುಗಿದ ಸಾರ್ವತ್ರಿಕ ಚುನಾವಣೆಯಲ್ಲಿ ಇವರ ಜನಪರ ಕಾಳಜಿ ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಮಾಡಿರುವ ಕೆಲಸ ಕಾರ್ಯಗಳಿಂದ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿರುತ್ತಾರೆ. ನಂತರ 2023ರಲ್ಲಿ ಜರುಗಿದ ಸಾರ್ವತ್ರಿಕ ಚುನಾವಣೆಯಲ್ಲಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿ ಪ್ರಸ್ತುತ ರಾಜ್ಯ ಸರ್ಕಾರದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರಾಗಿ ಮತ್ತು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಜನಪ್ರಿಯ ಶಾಸಕರಾಗಿ ಮತ್ತು ಶ್ರೇಷ್ಠ ಸಹಕಾರಿಯಾಗಿ, ರಾಜಕೀಯ ಕ್ಷೇತ್ರದಲ್ಲಿ ಮತ್ತು ಸಹಕಾರ ರಂಗದಲ್ಲಿ ಅಭಿವೃದ್ಧಿ ಪರ ಕೆಲಸವನ್ನು ಮಾಡುತ್ತಿದ್ದಾರೆ.

ಬಹುಮುಖ ವ್ಯಕ್ತಿತ್ವದ ಗರಿಷ್ಟ ಸೇವಾ ಮನೋಭಾವದ ಸಚಿವ ಡಿ.ಸುಧಾಕರ್ ಅವರು ಸಹಕಾರ ಕ್ಷೇತ್ರ, ಶಿಕ್ಷಣ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಸಾಮಾಜಿಕ ಕ್ಷೇತ್ರದಲ್ಲಿ, ರಾಜಕೀಯ ಕ್ಷೇತ್ರದಲ್ಲಿ ಪ್ರಶಂಸನೀಯ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಜನ ಸಾಮಾನ್ಯರ ಏಳಿಗೆಗೆ ಶ್ರಮಿಸಿದವರಾಗಿದ್ದು, ಎಲ್ಲಾ ವರ್ಗಗಳ ಜನರ ಪ್ರೀತಿ ಗೌರವಗಳಿಗೆ ಪಾತ್ರರಾಗಿದ್ದಾರೆ. ಅವರು ಸೇವೆಗೆ ಆಯ್ಕೆ ಮಾಡಿಕೊಂಡಿರುವ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಯ ದೂರ ದೃಷ್ಟಿಯನ್ನು ಇಟ್ಟುಕೊಂಡು ತಮ್ಮದೇ ಆದ ಅಭಿವೃದ್ಧಿ ಕಲ್ಪನೆಗಳನ್ನು ಹೊಂದಿರುತ್ತಾರೆ. ಅವುಗಳನ್ನು ಸಾಕಾರಗೊಳಿಸಲು ದಾಪುಗಾಲಿಡುತ್ತಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsCooperative Ratna AwardCooperative SectorMinister D. SudhakarSignificant Serviceಗಣನೀಯ ಸೇವೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಚಿವ ಡಿ.ಸುಧಾಕರ್ಸಹಕಾರ ಕ್ಷೇತ್ರಸಹಕಾರ ರತ್ನ ಪ್ರಶಸ್ತಿ
Share This Article
Facebook Email Print
Previous Article ಹಿರಿಯೂರು ಮಾಜಿ ಶಾಸಕ ಆರ್.ರಾಮಯ್ಯ ನಿಧನ
Next Article ಯರಬಳ್ಳಿ ಪಿಎಂ ಶ್ರೀ ಸರ್ಕಾರಿ ಶಾಲೆಗೆ ಸಮಗ್ರ ಪ್ರಶಸ್ತಿ
Leave a Comment

Leave a Reply Cancel reply

Your email address will not be published. Required fields are marked *

ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಮಾರುಕಟ್ಟೆ ಧಾರಣೆ
rosemary oil to your hair
ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
Life Style
ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up