
CHITRADURGA NEWS | 24 APRIL 2026
ಚಿತ್ರದುರ್ಗ: ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರಿಗೆ ಶ್ವಾಸಕೋಶ ಇನ್ಫೆಕ್ಸನ್ ಕಾರಣಕ್ಕೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವರಾದ ಡಿ.ಸುಧಾಕರ್ ಅವರು, ಮಾರ್ಚ್ 27 ರಂದು ಮೊಣಕಾಲು ನೋವಿನ ಆಪರೇಷನ್‌ಗಾಗಿ ಬೆಂಗಳೂರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಮಾರ್ಚ್ 31 ರಂದು ಆಪರೇಷನ್ ಮುಗಿಸಿ ಡಿಸ್ಜಚಾರ್ಜ್ ಆಗಬೇಕಾಗಿತ್ತು. ಆದರೆ. ಶ್ವಾಸಕೋಶದ ಇನ್ಫೆಕ್ಷನ್ ಕಾರಣಕ್ಕೆ ಚಿಕಿತ್ಸೆ ಮುಂದುವರೆಸಲಾಗಿತ್ತು ಎಂದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
ಮೂರು ದಿನಗಳ ಹಿಂದೆ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಲಂಗ್ಸ್ ರಿಕವರಿ ನಿರೀಕ್ಷೆ ಇದೆ. ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂಬ ಮಾಹಿತಿ ವೈದ್ಯರಿಂದ ಪಡೆದುಕೊಂಡಿದ್ದೇವೆ ಎಂದು ಹೇಳಿದರು.
ಶ್ವಾಸಕೋಶ ಚಿಕಿತ್ಸೆಗೆ ನಾಲ್ಕೈದು ವಾರ ಬೇಕಾಗುತ್ತದೆ. ಕಿಮ್ಸ್‌ನಲ್ಲಿ ಇದಕ್ಕೆ ಉತ್ತಮ ಚಿಕಿತ್ಸೆ ಸಿಗುತ್ತದೆ ಎಂಬ ಕಾರಣಕ್ಕೆ ಅಲ್ಲಿಗೆ ಸ್ತಳಾಂತರ ಮಾಡಲಾಗಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಇದನ್ನೂ ಓದಿ:ಈ ಗಿಡಮೂಲಿಕೆ ಚಹಾಗಳು ನಿಮ್ಮ ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತವೆ
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಮಾತನಾಡಿ, ಸುಧಣ್ಣನ ಆರೋಗ್ಯ ಉತ್ತಮವಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಶ್ವಾಸಕೋಶ ಆರೋಗ್ಯ ಸಮಸ್ಯೆ ಯಾಕ ಶುರುವಾಯಿತು ಎನ್ನುವ ಮಾಹಿತಿ ಇಲ್ಲ. ಅವರ ಕುಟುಂಬದ ಜೊತೆಗೆ ಸಂಪರ್ಕದಲ್ಲಿದ್ದೇನೆ ಎಂದು ಸ್ಪಷ್ಟಪಡಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
