CHITRADURGA NEWS | 10 May 2026
ಚಿತ್ರದುರ್ಗ: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿರುವ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರವನ್ನು ಜಿಲ್ಲೆಗೆ ತರಲಾಗುತ್ತದೆ.ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಹಿರಿಯೂರು ಮತ್ತು ಚಳ್ಳಕೆರೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಅಭಿಮಾನಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಅಂತಿಮ ದರ್ಶನದ ವೇಳಾಪಟ್ಟಿ:
ಹಿರಿಯೂರು: ಇಂದು ಮಧ್ಯಾಹ್ನ 12:00 ರಿಂದ 04:00 ಗಂಟೆಯವರೆಗೆ ಹಿರಿಯೂರಿನ ನೆಹರೂ ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ಸಚಿವ ಡಿ.ಸುಧಾಕರ್ ಇನ್ನಿಲ್ಲ | ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ
ಚಳ್ಳಕೆರೆ: ಹಿರಿಯೂರಿನ ನಂತರ ಪಾರ್ಥಿವ ಶರೀರವನ್ನು ಚಳ್ಳಕೆರೆಯ ಅವರ ಸ್ವಗೃಹಕ್ಕೆ ತರಲಾಗುವುದು. ಅಲ್ಲಿ ಧಾರ್ಮಿಕ ವಿಧಿ-ವಿಧಾನಗಳ ಬಳಿಕ, ಡಿ. ಸುಧಾಕರ್ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ನಾಳೆ ಅಂತ್ಯಕ್ರಿಯೆ:
ಸಚಿವರ ಅಂತ್ಯಕ್ರಿಯೆಯು ನಾಳೆ, ಅಂದರೆ ದಿನಾಂಕ 11-05-2026ರ ಸೋಮವಾರ ಮಧ್ಯಾಹ್ನ 03:00 ರಿಂದ 04:00 ಗಂಟೆಯ ಅವಧಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

