
CHITRADURGA NEWS | 15 APRIL 2024
ಚಿತ್ರದುರ್ಗ: ಚುನಾವಣಾ ಪ್ರಚಾರಕ್ಕಾಗಿ ಚಿತ್ರದುರ್ಗಕ್ಕೆ ಆಗಮಿಸಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗಿ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎದೆ ಹಾಗೂ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ನಾಳೆ ಚಿತ್ರದುರ್ಗಕ್ಕೆ ಬಿ.ಎಸ್.ಯಡಿಯೂರಪ್ಪ, ಬಿ.ಎಲ್.ಸಂತೋಷ್
ತುಮಕೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿ, ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಮತಯಾಚನೆಗೆ ಆಗಮಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರಾಗಿದೆ.
ಬಸವೇಶ್ವರ ಆಸ್ಪತ್ರೆಯಲ್ಲಿ ವೈದ್ಯ ಡಾ.ಕಾರ್ತಿಕ್, ಇಸಿಜಿ, ಎಕೋ ಪರೀಕ್ಷೆ ನಡೆಸಿ ಸಚಿವ ಜಮೀರ್ ಅಹಮ್ಮದ್ ಅವರಿಗೆ ಚಿಕಿತ್ಸೆ ನೀಡಿದ್ದು, ಪ್ರಾಥಮಿಕ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬೆಳಗ್ಗೆ ಉಪಹಾರದಲ್ಲಿ ವಡೆ ಸೇವಿಸಿದ್ದ ಕಾರಣ ಗ್ಯಾಸ್ಟ್ರಿಕ್ ಸಮಸ್ಯೆ ಆಗಿತ್ತು. ಇಸಿಜಿ, ಎಕೊ ಪರೀಕ್ಷೆಗಳು ನಾರ್ಮಲ್ ಆಗಿವೆ. ಚಿತ್ರದುರ್ಗದ ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸುತ್ತೇನೆ.
| ಜಮೀರ್ ಅಹಮ್ಮದ್ ಖಾನ್, ಸಚಿವ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
