ಮುಖ್ಯ ಸುದ್ದಿ
Cabinet: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ..!
CHITRADURGA NEWS | 22 NOVEMBER 2024
ಚಿತ್ರದುರ್ಗ: ರಾಜ್ಯ ಸರ್ಕಾರದಲ್ಲಿ ಮಹತ್ವದ ಬದಲಾವಣೆ ಆಗುವ ಮುನ್ಸೂಚನೆಗಳು ಕಂಡುಬರುತ್ತಿವೆ. ನಾಳೆ ನಡೆಯುವ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಬದಲಾವಣೆಗೆ ನಾಂದಿ ಹಾಡಲಿದೆ.
ಹೌದು, ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಆಸೆ ಗರಿಗೆದರಿದೆ. ಕಳೆದ ಒಂದೂವರೆ ವರ್ಷದಲ್ಲಿ ಸರಿಯಾಗಿ ಕಾರ್ಯನಿರ್ವಹಿದ ಸಚಿವರ ಎದೆಯಲ್ಲಿ ಢವಢವ ಶುರುವಾಗಿದೆ.
ಇದನ್ನೂ ಓದಿ: ವಿವಿ ಸಾಗರಕ್ಕೆ ಭರ್ತಿ 29 TMC ನೀರು
ಸಚಿವ (Cabinet) ಸಂಪುಟದ ಪುನಾರ್ರಚನೆಗೆ ಮುಹೂರ್ತ ಕೂಡಿ ಬಂದಿದೆ. ಸುಮಾರು 8 ಸಚಿವರನ್ನು ಕೈ ಬಿಟ್ಟು, ಹೊಸಬರಿಗೆ ಅವಕಾಶ ಕೊಡಲು ಕಾಂಗ್ರೆಸ್ ಹೈಕಮಾಂಡ್ ಸಮ್ಮತಿಸಿದೆ ಎಂದು ಇಂದಿನ ಹಲವು ಪತ್ರಿಕೆಗಳು ವರದಿ ಮಾಡಿವೆ.
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಚಾನ್ಸ್:
ಈ ನಡುವೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ.
ಇದನ್ನೂ ಓದಿ: ನ.25ಕ್ಕೆ ಚಿತ್ರದುರ್ಗಕ್ಕೆ ಸಚಿವ ಡಾ.ಎಂ.ಸಿ.ಸುಧಾಕರ್ ಭೇಟಿ
ಕಳೆದ ಅವಧಿಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನೆಲಕಚ್ಚಿದ್ದಾಗಲೂ ಚಿತ್ರದುರ್ಗ ಜಿಲ್ಲೆಯಲ್ಲಿ ಗೆದ್ದ ಏಕೈಕ ಶಾಸಕರಾಗಿ ರಘುಮೂರ್ತಿ ಗೆದ್ದಿದ್ದರು.
ಜೊತೆಗೆ ವಾಲ್ಮೀಕಿ ನಾಯಕ ಸಮುದಾಯದ ಕೋಟಾ ಕೂಡಾ ಅವರಿಗೆ ಅನ್ವಯವಾಗಲಿದೆ. ಮಠ ಹಾಗೂ ಸಮುದಾಯದ ಬೆಂಬಲ ಕೂಡಾ ಇರುವುದರಿಂದ ಈ ಬಾರಿ ಸಚಿವರಾಗುವುದು ನಿಶ್ಚಿತ ಎನ್ನಲಾಗುತ್ತಿದೆ.
ಬಿ.ನಾಗೇಂದ್ರ ಮತ್ತೆ ಸಂಪುಟಕ್ಕೆ:
ಈ ನಡುವೆ ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ರಾಜಿನಾಮೆ ನೀಡಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳುವುದು ಪಕ್ಕಾ ಎನ್ನುವ ವರದಿ ಹರಿದಾಡುತ್ತಿದೆ.
ಇದನ್ನೂ ಓದಿ: ಬ್ಯಾಂಕುಗಳ ವಿರುದ್ಧ ಗೋವಿಂದ ಕಾರಜೋಳ ಗರಂ | ಹಣಕಾಸು ಸಚಿವರಿಗೆ ಪತ್ರ ಬರೆಯುವುದಾಗಿ ಎಚ್ಚರಿಕೆ
ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಚಾಮರಾಜ ನಗರದಲ್ಲಿ ಈ ಹೇಳಿಕೆ ನೀಡಿದ್ದಾರೆ. ಉಪಚುನಾವಣೆ ಫಲಿತಾಂಶದ ಬಳಿಕ, ಬೆಳಗಾವಿ ಅಧಿವೇಶನಕ್ಕೆ ಮೊದಲು ಈ ಎಲ್ಲಾ ಬೆಳವಣಿಗೆಗಳು ರಾಜ್ಯದಲ್ಲಿ ನಡೆಯಲಿವೆ.