By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ದ್ವಿತೀಯ ಪಿಯುಸಿ ಪರೀಕ್ಷೆ-2ರ ಸಿದ್ದತೆಯ ಸಭೆ
    ಏ.30 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 | ಜಿಲ್ಲೆಯಲ್ಲಿ 4270 ಪರೀಕ್ಷಾರ್ಥಿಗಳಿಗೆ 06 ಪರೀಕ್ಷಾ ಕೇಂದ್ರಗಳು
    50 minutes ago
    ಬೀಜ, ಗೊಬ್ಬರ ಮತ್ತು ಔಷಧಿ ಮಾರಾಟಗಾರರಿಂದ ಪ್ರತಿಭಟನೆ
    ಬೀಜ, ಗೊಬ್ಬರ, ಔಷಧ ಮಾರಾಟಗಾರರಿಂದ ಪ್ರತಿಭಟನೆ
    3 hours ago
    ಎಸ್‌ಜೆಎಂ ಕಾಲೇಜಿನಿಂದ ಸಿದ್ದಾಪುರದಲ್ಲಿ ಎನ್‌ಎಸ್‌ಎಸ್‌ ಶಿಬಿರ ನಡೆಯಿತು.
    ಚಂದ್ರವಳ್ಳಿ ಎಸ್.ಜೆ.ಎಂ ಕಾಲೇಜಿನಿಂದ ಸಿದ್ದಾಪುರದಲ್ಲಿ ಎನ್‌ಎಸ್‌ಎಸ್ ಶಿಬಿರ 
    1 day ago
    ಎಚ್‌.ಡಿ.ಕುಮಾರಸ್ವಾಮಿ
    ಸಚಿವ ಡಿ.ಸುಧಾಕರ್‌ಗೆ ಏನಾಗಿದೆ ? | ಸರ್ಕಾರ ಜನರಿಗೆ ಉತ್ತರಿಸಲಿ | ಎಚ್‌.ಡಿ.ಕುಮಾರಸ್ವಾಮಿ
    1 day ago
    ಬಿಎಸ್‌ವೈ ಅಭಿಮಾನೋತ್ಸವದ ಭೂಮಿಪೂಜೆ
    ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವದ ರಣಕಹಳೆ | ಮೇ 9ಕ್ಕೆ ಅಮಿತ್ ಶಾ ಭೇಟಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    4 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    4 hours ago
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 27 | ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ, ಹಠಾತ್ ಆರ್ಥಿಕ ಲಾಭ
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
    7 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    4 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    white spots on the skin
    ಚರ್ಮದ ಮೇಲಿನ ಬಿಳಿ ಕಲೆಗಳನ್ನು ತೆಗೆದುಹಾಕಲು ಈ ಮನೆಮದ್ದುಗಳನ್ನು ಹಚ್ಚಿ
    14 hours ago
    high blood pressure
    ಅಧಿಕ ರಕ್ತದೊತ್ತಡ ರೋಗಿಗಳಿಗೆ ಯಾವ ತರಕಾರಿ, ಹಣ್ಣು ಉತ್ತಮ ಗೊತ್ತಾ?
    14 hours ago
    Omega-3
    ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
    2 days ago
    Apply this natural fruit facial to keep your skin hydrated in summer
    ಬೇಸಿಗೆಯಲ್ಲಿ ನಿಮ್ಮ ಚರ್ಮವನ್ನು ಹೈಡ್ರೇಟ್‍ ಆಗಿಡಲು ಈ ನೈಸರ್ಗಿಕ ಹಣ್ಣಿನ ಫೇಶಿಯಲ್ ಹಚ್ಚಿ
    2 days ago
    Orange juice
    ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
    3 days ago
Reading: ಎಸ್.ನಿಜಲಿಂಗಪ್ಪ ನಿವಾಸ ನವೀಕರಣಕ್ಕೆ ಸಚಿವ ಶಿವರಾಜ ತಂಗಡಗಿ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಎಸ್.ನಿಜಲಿಂಗಪ್ಪ ನಿವಾಸ ನವೀಕರಣಕ್ಕೆ ಸಚಿವ ಶಿವರಾಜ ತಂಗಡಗಿ ಸೂಚನೆ

News Desk Chitradurga News
Last updated: 9 July 2025 17:57
News Desk Chitradurga News
10 months ago
Share
ಎಸ್. ನಿಜಲಿಂಗಪ್ಪನವರ ನಿವಾಸಕ್ಕೆ ಸಚಿವ ಶಿವರಾಜ ತಂಗಡಗಿ ಭೇಟಿ
SHARE

ಚಿತ್ರದುರ್ಗ: ರಾಷ್ಟ್ರನಾಯಕ, ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ಎಸ್.ನಿಜಲಿಂಗಪ್ಪನವರ ಚಿತ್ರದುರ್ಗದ ನಗರದಲ್ಲಿನ ನಿವಾಸ ಖರೀದಿಗೆ ಸರ್ಕಾರ ರೂ.5 ಕೋಟಿ ಅನುದಾನ ನೀಡಿತ್ತು. ಇದರಲ್ಲಿ ರೂ.4.18 ಕೋಟಿಗೆ ನಿವಾಸವನ್ನು ಖರೀದಿಸಲಾಗಿದ್ದು, ಉಳಿದ 82 ಲಕ್ಷ ಅನುದಾನದಲ್ಲಿ ಮನೆಯ ನವೀಕರಣಗೊಳಿಸಿ, ವಸ್ತು ಸಂಗ್ರಹಾಲಯವನ್ನಾಗಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದರು.

ಇದನ್ನೂ ಓದಿ: ಸಿಬ್ಬಂದಿ ನೇಮಕಾತಿ ಆಯೋಗ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ವಸತಿ ಗೃಹ ಬಳಿ ಇರುವ ಎಸ್. ನಿಜಲಿಂಗಪ್ಪನವರ ನಿವಾಸಕ್ಕೆ ಹಾಗೂ ತಾಲ್ಲೂಕಿನ ಸೀಬಾರದ ಎಸ್.ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ ಗೆ ಭೇಟಿ ನೀಡಿ, ಎಸ್. ನಿಜಲಿಂಗಪ್ಪನವರ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿ, ನಂತರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

ರಾಷ್ಟ್ರನಾಯಕರಾಗಿ, ರಾಜ್ಯದ ಮುಖ್ಯಮಂತ್ರಿಗಳಾಗಿ ಎಸ್. ನಿಜಲಿಂಗಪ್ಪನವರ ಕೊಡುಗೆ ಅಪಾರವಾದುದು. ಮಹಾತ್ಮರಾದ ಎಸ್. ನಿಜಲಿಂಗಪ್ಪನವರು ಹುಟ್ಟಿ ಬೆಳೆದು, ಬದುಕಿ ಬಾಳಿದ ನಿವಾಸಕ್ಕೆ ಬೆಲೆ ಕಟ್ಟಲಾಗದು. ಅವರ ನಿವಾಸ ದೇವರ ಗುಡಿಗೆ ಸಮಾನವಾದುದು. 

ಹಿರಿಯ ಮುಖಂಡರಾದ ಹನುಮಂತಪ್ಪ ಹಾಗೂ ಎಸ್.ನಿಜಲಿಂಗಪ್ಪನವರ ಮಗ ಕಿರಣ್ ಶಂಕರ್ ಟ್ರಸ್ಟ್ ಸ್ಥಾಪಿಸಿ, ಉತ್ತಮ ರೀತಿಯಲ್ಲಿ ಸ್ಮಾರಕವನ್ನು ನಿರ್ವಹಣೆ ಮಾಡುತ್ತಿದ್ದಾರೆ. ಇದೇ ಮಾದರಿಯಲ್ಲಿ ನಿವಾಸವನ್ನು ವಸ್ತುಸಂಗ್ರಹಾಲಯವನ್ನಾಗಿ ಮಾಡುವ ದೃಷ್ಟಿಯಿಂದ ಈಗಾಗಲೇ ಎರಡು ಬಾರಿ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಜಿಲ್ಲಾಧಿಕಾರಿಗಳು ಕೂಡ ಉತ್ಸುಕತೆಯಿಂದ ಈ ಬಗ್ಗೆ ಆಸಕ್ತಿ ವಹಿಸಿದ್ದಾರೆ. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರಿಗೂ ಕೂಡ ಈ ಕುರಿತಂತೆ ಸೂಚನೆ ನೀಡಿದ್ದೇನೆ. ಎಸ್. ನಿಜಲಿಂಗಪ್ಪ ನವರ ನಿವಾಸದ ಮೂಲ ವಿನ್ಯಾಸಕ್ಕೆ, ಗೋಡೆಗಳಿಗೆ ಯಾವುದೇ ಧಕ್ಕೆಯಾಗದಂತೆ ನವೀಕರಣ ಮಾಡಿ, ನಿಜಲಿಂಗಪ್ಪನವರ ಪುತ್ರ ಕಿರಣ್ ಶಂಕರ್ ಒಳಗೊಂಡಂತೆ ಸಮಿತಿ ರಚಿಸಿ, ಯೋಜನೆ ರೂಪಿಸಿ, ವಸ್ತು ಸಂಗ್ರಹಾಲಯ ನಿರ್ಮಾಣ ಮಾಡಲಾಗುವುದು ಎಂದು ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದರು.

ರಾಜ್ಯದ ಮುಖ್ಯಮಂತ್ರಿಗಳಾಗಿ ರಾಜ್ಯಕ್ಕೆ ಹಾಗೂ ದೇಶಕ್ಕೆ ಅನನ್ಯ ಸೇವೆ ಸಲ್ಲಿಸಿರುವ ಎಸ್.ನಿಜಲಿಂಗಪ್ಪನವರ ಸ್ಮರಣೆ ಅಗತ್ಯ. ವಸ್ತು ಸಂಗ್ರಹಾಲಯ ನಿರ್ಮಾಣಕ್ಕೆ ಪ್ರಸ್ತುತ ರೂ.86 ಲಕ್ಷ ಅನುದಾನ ಲಭ್ಯವಿದ್ದು, ಅಗತ್ಯಬಿದ್ದಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನೀಡಿ, ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು. 

ಆದಷ್ಟು ಬೇಗ ನಿಜಲಿಂಗಪ್ಪ ಸ್ಮಾರಕ ಟ್ರಸ್ಟ್‍ನ ಹಿರಿಯರ ಸಲಹೆ ಹಾಗೂ ಪುತ್ರ ಕಿರಣ್ ಶಂಕರ್ ಅವರ ಸಲಹೆ ಪಡೆದು, ಅಚ್ಚುಕಟ್ಟಾಗಿ ವಸ್ತು ಸಂಗ್ರಹಾಲಯ ಮಾಡಲಾಗುವುದು. ಐತಿಹಾಸಿಕ ಕೋಟೆನಾಡು ಚಿತ್ರದುರ್ಗಕ್ಕೆ ಭೇಟಿ ನೀಡುವವರು ಎಸ್. ನಿಜಲಿಂಗಪ್ಪ ಅವರ ವಸ್ತು ಸಂಗ್ರಹಾಲಯಕ್ಕೂ ಭೇಟಿ ನೀಡುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: KSRTC ಬಸ್‌ ಚಾಲಕ ಆತ್ಮ*ಹತ್ಯೆ

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ ನಾಮಕರಣದ 50ನೇ ವರ್ಷಾಚರಣೆಯನ್ನು ಅದ್ದೂರಿಯಿಂದ ಆಚರಿಸಲಾಗಿದೆ. ಇದರ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ನಾಡದೇವತೆ ಭುವನೇಶ್ವರಿ ದೇವಿಯ ಪುತ್ಥಳಿಯನ್ನು ಸ್ಥಾಪಿಸಲಾಗಿದೆ. 

ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಇಂತಹ ಐತಿಹಾಸಿಕ ಕಾರ್ಯವನ್ನು ನಮ್ಮ ಸರ್ಕಾರದ ಅವಧಿಯಲ್ಲಿ ನೆರವೇರಿಸಿರುವುದು ನನ್ನ ಸೌಭಾಗ್ಯವಾಗಿದೆ. ಇದೇ ಮಾದರಿಯಲ್ಲಿ ಎಸ್.ನಿಜಲಿಂಗಪ್ಪನವರ ನಿವಾಸವನ್ನು ವಸ್ತು ಸಂಗ್ರಹಾಯಲಯವನ್ನಾಗಿ ಮಾಡುತ್ತಿರುವ ಕಾರ್ಯದ ಸಮಯದಲ್ಲೂ ನಾನು ಮಂತ್ರಿಯಾಗಿರುವುದು ಹೆಮ್ಮೆ ಎನಿಸುತ್ತಿದೆ ಎಂದು ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದರು.

ದುರ್ಗೋತ್ಸವಕ್ಕೆ ಪ್ರಸ್ತಾವ ಸಲ್ಲಿಸಲು ಸೂಚನೆ 

ಕನ್ನಡ ಪರ ಸಂಘಟನೆಗಳು ದುರ್ಗೋತ್ಸವ ಆಚರಿಸುವಂತೆ ಮನವಿ ಸಲ್ಲಿಸಿದ್ದಾರೆ. ಈ ಬಾರಿ ನಾಡಿನಲ್ಲಿ ಉತ್ತಮ ಮಳೆಯಾಗಿದ್ದು, ಅಣೆಕಟ್ಟುಗಳು ತುಂಬಿ ತುಳುಕುತ್ತಿವೆ. ರೈತರು ಸಂತಸದಿಂದಿದ್ದಾರೆ. ಇಂತಹ ಸಂದರ್ಭದಲ್ಲಿ ಉತ್ಸವಗಳ ಆಚರಣೆ ಮಾಡುವುದು ತಪ್ಪಲ್ಲ. ಈ ಹಿಂದೆ ಎರಡು ಬಾರಿ ಐತಿಹಾಸಿಕ ಹಿನ್ನಲೆಯ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಯೋಜಿಸಲಾಗಿತ್ತು ಎಂದು ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಗೂ ಹೋರಾಟಗಾರರು ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ: ಸರಳ ವಿವಾಹವೇ ಆದರ್ಶ | ಡಾ.ಬಸವಕುಮಾರ ಸ್ವಾಮೀಜಿ

 ದುರ್ಗೋತ್ಸವ ಆಚರಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಪ್ರಸ್ತಾವ ಸಲ್ಲಿಸಿದರೆ ನಿಶ್ವಿತವಾಗಿ ದುರ್ಗೋತ್ಸವ ಆಚರಣೆ ಮಾಡಲಾಗುವುದು. ಮುಖ್ಯಮಂತ್ರಿಗಳು ಸಹ ದುರ್ಗೋತ್ಸವಕ್ಕೆ ಆಚರಣೆಗೆ ಅವಕಾಶ ಹಾಗೂ ಸಹಕಾರ ನೀಡುತ್ತಾರೆ ಎಂಬ ಭರವಸೆ ಇದೆ. ಹೀಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಸಚಿವರು ಹೇಳಿದರು.

ಸರ್ಕಾರ ಮಠಗಳಿಗೆ ನೀಡುವ ಅನುದಾನವನ್ನು ಕಡಿತಗೊಳಿಸಿಲ್ಲ. ನಿಯಮಾನುಸಾರ ಸರ್ಕಾರ ಶೇ.25 ಹಣವನ್ನು ಮೀಸಲಿರಿಸಿ ಅನುದಾನ ಘೋಷಿಸಿಬೇಕು. ಸರ್ಕಾರ ಹಣಕಾಸಿನ ಶಿಸ್ತು ಪಾಲನೆ ಮಾಡುತ್ತಿದೆ. ಇದೇ ರೀತಿ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ನಿಗಮ ಮಂಡಳಿಗಳನ್ನು ಸ್ಥಾಪಿಸಲು ರೂ.5 ಕೋಟಿ ಮೂಲಧನ ಇರಿಸಬೇಕು. ಇತ್ತೀಚೆಗೆ ಕಾಡುಗೊಲ್ಲ ಅಭಿವೃದ್ದಿ ನಿಗಮವನ್ನು ರೂ.5 ಕೋಟಿ ನೀಡಿ, ಕಂಪನಿ ನೊಂದಣಿ ಕಾಯ್ದೆಯಡಿ ದೆಹಲಿಯಲ್ಲಿ ನೊಂದಣಿ ಮಾಡಿಸಲಾಗಿದೆ ಎಂದು ಸಚಿವ ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದರು.

ಇದಕ್ಕೂ ಮುನ್ನ ಎಸ್. ನಿಜಲಿಂಗಪ್ಪ ನವರ ಸ್ಮಾರಕದ ಆವರಣದಲ್ಲಿರುವ ಕೊಠಡಿಗಳಲ್ಲಿ ಅಳವಡಿಸಿರುವ ನಿಜಲಿಂಗಪ್ಪನವರ ಕುರಿತಾದ ಫೋಟೋ ಗ್ಯಾಲರಿ ಹಾಗೂ ಗ್ರಂಥಾಲಯವನ್ನು ಸಚಿವರು ವೀಕ್ಷಿಸಿದರು. ಅಲ್ಲದೆ ಸ್ಮಾರಕದ ಬಳಿ ಇರಿಸಲಾಗಿದ್ದ ಎಸ್. ನಿಜಲಿಂಗಪ್ಪನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಇದನ್ನೂ ಓದಿ: ವಿಕಾಸ ರಂಗದ ಜಿಲ್ಲಾಧ್ಯಕ್ಷರಾಗಿ KSRTC ಎಸ್.ನಟರಾಜ್ ಆಯ್ಕೆ

ಈ ಸಂದರ್ಭದಲ್ಲಿ ಎಸ್.ನಿಜಲಿಂಗಪ್ಪ ಸ್ಮಾರಕ ಟ್ರಸ್ಟ್‍ನ ಗೌರವಾಧ್ಯಕ್ಷ ಹೆಚ್.ಹನುಮಂತಪ್ಪ, ಗೌರವ ಕಾರ್ಯದರ್ಶಿ ಕಿರಣ್ ಶಂಕರ್, ಟ್ರಸ್ಟಿಗಳಾದ ಮೋಹನ್ ಕುಮಾರ್ ಕೊಂಡಜ್ಜಿ, ಕೆಇಬಿ ಷಣ್ಮುಖಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕಿ ಗಾಯತ್ರಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಛಲವಾದಿ, ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಸೇರಿದಂತೆ ಮತ್ತಿತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaMinister Shivaraj ThangadgiResidenceS. Nijalingappaಎಸ್. ನಿಜಲಿಂಗಪ್ಪಚಿತ್ರದುರ್ಗನಿವಾಸಸಚಿವ ಶಿವರಾಜ ತಂಗಡಗಿ
Share This Article
Facebook Email Print
Previous Article ಚಿತ್ರದುರ್ಗ ಜಿಲ್ಲಾ ಪಂಚಾಯತ್ ಕಚೇರಿ ಕರ್ತವ್ಯ ಲೋಪ ಇಬ್ಬರು ಪಿಡಿಓಗಳು ಅಮಾನತು | ಜಿಪಂ ಸಿಇಓ ಆದೇಶ
Next Article ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ | ಜುಲೈ 12ರಂದು ವಿತರಣೆ
2 Comments
  • ವೀರಣ್ಣ ಜಿ. ಎಸ್. says:
    10 July 2025 at 19:33

    ಅತ್ಯುಪಯುಕ್ತ ಮಾಹಿತಿಗಳು ಸಕಾಲದಲ್ಲಿ ಎಲ್ಲೆಡೆಗೂ ತಲಪುತ್ತಿವೆ… ನಿಮಗೆ ವಂದನೆಗಳು

    Reply
    • chitradurganews.com says:
      11 July 2025 at 20:09

      ಧನ್ಯವಾದ ಸರ್‌, ನಿಮ್ಮ ಸಹಕಾರ ಇರಲಿ.

      Reply

Leave a Reply to ವೀರಣ್ಣ ಜಿ. ಎಸ್. Cancel reply

Your email address will not be published. Required fields are marked *

ದ್ವಿತೀಯ ಪಿಯುಸಿ ಪರೀಕ್ಷೆ-2ರ ಸಿದ್ದತೆಯ ಸಭೆ
ಏ.30 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 | ಜಿಲ್ಲೆಯಲ್ಲಿ 4270 ಪರೀಕ್ಷಾರ್ಥಿಗಳಿಗೆ 06 ಪರೀಕ್ಷಾ ಕೇಂದ್ರಗಳು
ಮುಖ್ಯ ಸುದ್ದಿ
ಬೀಜ, ಗೊಬ್ಬರ ಮತ್ತು ಔಷಧಿ ಮಾರಾಟಗಾರರಿಂದ ಪ್ರತಿಭಟನೆ
ಬೀಜ, ಗೊಬ್ಬರ, ಔಷಧ ಮಾರಾಟಗಾರರಿಂದ ಪ್ರತಿಭಟನೆ
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
ಅಡಕೆ ಧಾರಣೆ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up